Homeಮುಖಪುಟಹರಿಯಾಣ ಚುನಾವಣೆ | ಗೋ ರಕ್ಷಣೆ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ: ಕಾಂಗ್ರೆಸ್‌

ಹರಿಯಾಣ ಚುನಾವಣೆ | ಗೋ ರಕ್ಷಣೆ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ: ಕಾಂಗ್ರೆಸ್‌

- Advertisement -
- Advertisement -

ಗೋಸಂರಕ್ಷಣೆಯ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ ಮತ್ತು ಕಳೆದ ವರ್ಷ ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಕೋಮು ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುತ್ತೇನೆ ಎಂದು ಹರಿಯಾಣದ ಮುಸ್ಲಿಂ ಪ್ರಾಬಲ್ಯದ ನುಹ್ ಕ್ಷೇತ್ರದಿಂದ ಮರು ಆಯ್ಕೆ ಬಯಸುತ್ತಿರುವ ಕಾಂಗ್ರೆಸ್‌ನ ಅಫ್ತಾಬ್ ಅಹ್ಮದ್ ಅವರು ಕ್ಷೇತ್ರ ಜನರಿಗೆ ಭರವಸೆ ನೀಡಿದ್ದಾರೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಆಗಿರುವ ಅಫ್ತಾಬ್ ಅಹ್ಮದ್ ಅವರು, ನುಹ್ ಕೋಮುಗಲಭೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿತ್ತು ಮತ್ತು ತಾನು ಸರ್ಕಾರದೊಂದಿಗೆ ಈ ಬಗ್ಗೆ ಮೊದಲೇ ಆತಂಕ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ. ತಾನು ಈ ಬಗ್ಗೆ ಆತಂಕ ವ್ಯಕ್ತಿಪಡಿಸಿದ್ದರು ಕೂಡಾ ಸರ್ಕಾರ “ಇದು ಸಂಭವಿಸಲಿ” ಎಂದು ಬಯಸಿದ್ದರು ಎಂದು ಹೇಳುದ್ದಾರೆ. ಈ ಗಲಭೆಯು ಜೀವ ಮತ್ತು ಆಸ್ತಿ ನಷ್ಟವನ್ನು ಮಾತ್ರವಲ್ಲದೆ ನಂಬಿಕೆಯನ್ನೂ ನಷ್ಟಮಾಡಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ಕಳೆದ ವರ್ಷ ನುಹ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯು ಬಿಜೆಪಿಯು ಗೋರಕ್ಷಕರ ವೇಷದಲ್ಲಿ ಸಮಾಜವಿರೋಧಿಗಳನ್ನು ಪ್ರಚಾರ ಮಾಡಿತ್ತು. ಅವರು ಭಯದ ವಾತಾವರಣವನ್ನು ಸೃಷ್ಟಿಸಿದರು ಮತ್ತು ಅದನ್ನು ಹೆಚ್ಚಿಸಿದರು. ಶಾಸಕನಾಗಿ ನಾನು ಅದನ್ನು ಸರ್ಕಾರದ ಗಮನಕ್ಕೆ ತಂದಿದ್ದೆ. ನೀವು ಅಂತಹ ಘಟನೆಗಳನ್ನು ತಡೆಯಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದ್ದೆ. ಆದರೆ ಅವರು ಅದನ್ನು ನಡೆಯಲು ಅವಕಾಶ ಮಾಡಿಕೊಡುತ್ತಾರೆ” ಎಂದು ಅಫ್ತಾಬ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹರಿಯಾಣ

“ಮುಖ್ಯಮಂತ್ರಿ ರೇವಾರಿಯಲ್ಲಿ ಸಭೆ ನಡೆಸುವುದರಲ್ಲಿ ನಿರತರಾಗಿದ್ದರು. ಎರಡೂ ಕಡೆಯಿಂದ ಸಮಾಜ ವಿರೋಧಿ ಶಕ್ತಿಗಳು ಸವಾಲು ಹಾಕಿದಾಗಲೂ ಇಡೀ ದಾರಿಗೆ ಕೇವಲ 300 ಪೊಲೀಸರನ್ನು ನಿಯೋಜಿಸಲಾಗಿತ್ತು. ಸರ್ಕಾರ ಅದನ್ನು ನಡೆಯಲು ಅವಕಾಶ ಮಾಡಿಕೊಟ್ಟಿತು. ಅದನ್ನು ನಿರ್ವಹಿಸಿದ ಅಧಿಕಾರಿಗಳು, ಅಂತಹ ಹಿಂಸಾಚಾರಕ್ಕೆ ಕಾರಣಗಳು ಮತ್ತು ಅಧಿಕಾರಿಗಳು ಹಿಂಸಾಚಾರವನ್ನು ನಿರ್ವಹಿಸಿದ ರೀತಿಯನ್ನು ಕಂಡುಹಿಡಿಯಲು ನ್ಯಾಯಾಂಗ ತನಿಖೆ ನಡೆಸಬೇಕೆಂದು ನಾವು ಇಲ್ಲಿಯವರೆಗೆ ಒತ್ತಾಯಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯ ವೇಳೆ ನುಹ್‌ನಲ್ಲಿ ಪ್ರಾರಂಭವಾದ ಗಲಭೆಯು ಗುರುಗ್ರಾಮ್‌ಗೆ ಹರಡಿ ಇಬ್ಬರು ಗೃಹ ರಕ್ಷಕ ದಳ ಮತ್ತು ಧರ್ಮಗುರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು. ನಂತರ ಪೊಲೀಸರು ಈ ಪ್ರಕರಣದಲ್ಲಿ ಕಾಂಗ್ರೆಸ್‌ನ ಫಿರೋಜ್‌ಪುರ ಜಿರ್ಕಾ ಶಾಸಕ ಮಮ್ಮನ್ ಖಾನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಆರೋಪಗಳನ್ನು ಹೊರಿಸಿದ್ದರು.

ಇದನ್ನೂಓದಿ: ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

“ಹಿಂಸಾಚಾರದ ಒಂದು ದಿನದ ನಂತರ, ಹಿಂಸಾಚಾರದಲ್ಲಿ ಭಾಗಿಯಾಗದ ಕೆಲವು ಜನರ ಮನೆಗಳನ್ನು ಕೆಡವಿದರು. ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಿದರು. ಆದರೆ ಅವರು ಯಾರೂ ಈ ಘಟನೆಯಲ್ಲಿ ಭಾಗಿಯಾಗಿರಲಿಲ್ಲ. ಅಷ್ಟೆ ಅಲ್ಲದೆ, ಅವರ ವಿರುದ್ಧ ಕಠಿಣ UAPA ಪ್ರಕರಣ ದಾಖಲಿಸಲಾಯಿತು. ಹಾಗಾಗಿಯೆ ಈ ಕೋಮು ಘಟನೆಗೆ ಕಾರಣವೇನು ಎಂಬುದರ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದೆ. ಈ ಘಟನೆಯಿಂದ ಕೇವಲ ಜೀವ ಮತ್ತು ಆಸ್ತಿ ನಷ್ಟದ ಮಾತ್ರವಲ್ಲ, ಜನರಲ್ಲಿ ನಂಬಿಕೆ ಕೂಡಾ ನಷ್ಟವಾಗಿದೆ. ನಾವು ಗೋಸಂರಕ್ಷಣೆ ಹೆಸರಿನಲ್ಲಿ ಹತ್ಯೆ ಮಾಡುವುದರ ವಿರುದ್ಧ ಕಾನೂನು ತರುತ್ತೇವೆ” ಎಂದು ಅಫ್ತಾಬ್ ಹೇಳಿದ್ದಾರೆ.

58 ವರ್ಷದ ಅಫ್ತಾಬ್ ಅವರು ಸೋಹ್ನಾ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಸಂಜಯ್ ಸಿಂಗ್ ವಿರುದ್ಧ ನುಹ್‌ನಲ್ಲಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ತಾಹಿರ್ ಹುಸೇನ್ ಅವರನ್ನು ಕಣಕ್ಕಿಳಿಸಿದೆ. ತಾಹಿರ್ ಹುಸೇನ್ ಅವರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮತ್ತು ಹರಿಯಾಣ ವಕ್ಫ್ ಮಂಡಳಿಯ ಅಧ್ಯಕ್ಷರಾದ ಜಾಕಿರ್ ಹುಸೇನ್ ಅವರ ಪುತ್ರರಾಗಿದ್ದಾರೆ. ಅವರು ಇತ್ತೀಚೆಗೆ INLD ಗೆ ಸೇರಿದ್ದರು.

ನುಹ್‌ ಕ್ಷೇತ್ರದಲ್ಲಿ ಬಿಜೆಪಿ ಎಂದಿಗೂ ಗೆದ್ದಿಲ್ಲ ಮತ್ತು ಇಲ್ಲಿನ ಮತದಾರರು ಐತಿಹಾಸಿಕವಾಗಿ ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿಯನ್ನು ಬೆಂಬಲಿಸಿದ್ದಾರೆ. ನುಹ್ ಅನ್ನು 2005 ರಲ್ಲಿ ಗುರ್ಗಾಂವ್ ಮತ್ತು ಫರಿದಾಬಾದ್ ಭಾಗಗಳಿಂದ ಪ್ರತ್ಯೇಕ ಜಿಲ್ಲೆಯಾಗಿ ಸ್ಥಾಪಿಸಲಾಯಿತು. ಇದು ನುಹ್, ಫಿರೋಜ್‌ಪುರ ಜಿರ್ಕಾ ಮತ್ತು ಪುನ್ಹಾನಾ ಎಂಬ ಮೂರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಹರ್ಯಾಣದಲ್ಲಿ ಅಕ್ಟೋಬರ್ 5 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...