Homeಮುಖಪುಟಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

ಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

- Advertisement -
- Advertisement -

ಗಾಝಾ ಬಳಿಕ ಮತ್ತೊಂದು ಸುಂದರ ನಾಡು ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಮುಂದುವರೆಸಿದೆ.

ಲೆಬನಾನ್‌ನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮತ್ತು ಇಸ್ರೇಲ್ ಸೇನೆ ನಡುವೆ ಗಡಿಯಲ್ಲಿ ಮಾತ್ರ ನಡೆಯುತ್ತಿದ್ದ ಸಂಘರ್ಷ, ಇದೀಗ ಜನವಸತಿ ಪ್ರದೇಶಗಳಿಗೆ ವ್ಯಾಪಿಸಿದೆ. ಈಗಾಗಲೇ ವೈಮಾನಿಕ ದಾಳಿ ನಡೆಸಿ ನೂರಾರು ಜನರನ್ನು ಹತ್ಯೆಗೈದಿರುವ ಇಸ್ರೇಲ್, ಈಗ ನೆಲ ಕಾರ್ಯಾಚರಣೆ (Ground Operation) ಗೆ ಸಜ್ಜಾಗಿದೆ. ಇದರಿಂದ ನೆಮ್ಮದಿಯ ಬದುಕು ನಡೆಸುತ್ತಿರುವ ಅಮಾಯಕ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗಾಝಾದಲ್ಲಿ ಹಮಾಸ್ ಹೆಸರೇಳಿಕೊಂಡು 40 ಸಾವಿರಕ್ಕೂ ಅಧಿಕ ಅಮಾಯಕರನ್ನು ನಿರ್ಧಯವಾಗಿ ಕೊಂದು ಹಾಕಿದ್ದಲ್ಲದೆ, ಸುಂದರ ನಗರಗಳನ್ನು ನಕರವಾಗಿಸಿರುವ ಇಸ್ರೇಲ್, ಈಗ ಲೆಬನಾನ್‌ನಲ್ಲೂ ಅದನ್ನೇ ಮುಂದುವರೆಸುವ ಸೂಚನೆ ನೀಡಿದೆ.

ಶುಕ್ರವಾರ ಬೈರುತ್‌ನ ಜನನಿಬಿಡ ದಹಿಯೆ ಉಪನಗರದ ಮೇಲೆ ಇಸ್ರೇಲ್ ಸರಣಿ ದಾಳಿ ನಡೆಸಿದೆ. ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಗುರಿಯಾಗಿಸಿ, ಅದರ ಕೇಂದ್ರ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಸನ್ ನಸ್ರಲ್ಲಾನನ್ನು ಈಗಾಗಲೇ ಹತ್ಯೆ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಇನ್ನೂ ಖಚಿತವಾಗಿಲ್ಲ. ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಅವರ ಸಹಾಯಕ ಹುಸೈನ್ ಅಹ್ಮದ್ ಇಸ್ಮಾಯಿಲ್ ಅವರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ.

ಇಂದು (ಸೆ.28) ಮುಂಜಾನೆಯವರೆಗೆ ಇಸ್ರೇಲ್ ಲೆಬನಾನ್‌ನ ಬೈರುತ್ ಮೇಲೆ ಸುಮಾರು 20ಕ್ಕೂ ಹೆಚ್ಚು ಪ್ರತ್ಯೇಕ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದುವರೆಗೆ ಸುಮಾರು 700 ಜನರು ಸಾವನ್ನಪ್ಪಿದ್ದು, 2 ಸಾವಿರದಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಆರಂಭಿಸಿ ಮುಂದಿನ ಅಕ್ಟೋಬರ್ 7ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗಲೂ ಅಲ್ಲಿ ನರಮೇಧ ಕೊನೆಗೊಂಡಿಲ್ಲ. ನಗರಗಳು ಜನರ ವಾಸಕ್ಕೆ ಯೋಗ್ಯವಲ್ಲದ ರೀತಿ ಮಾರ್ಪಟ್ಟಿದೆ.

ಗಾಝಾದಲ್ಲಿ ದಾಳಿ ಆರಂಭಿಸುವಾಗ, “ನಮ್ಮ ಗುರಿ ಹಮಾಸ್ ಹೊರತು ನಾಗರಿಕರಲ್ಲ” ಎಂದು ಇಸ್ರೇಲ್ ಸೇನೆ ಹೇಳಿತ್ತು. ಆದರೆ, ಈಗ ಅಲ್ಲಿ ಬಲಿಯಾದ ಅಮಾಯಕ ನಾಗರಿಕ ಸಂಖ್ಯೆ 40 ಸಾವಿರ ದಾಟಿದೆ. ಈಗ ಲೆಬನಾನ್‌ನಲ್ಲೂ “ನಮ್ಮ ಗುರಿ ಹೆಜ್ಬುಲ್ಲಾ” ಎಂದು ಅದೇ ಹೇಳಿಕೆಯನ್ನು ಇಸ್ರೇಲ್ ಸೇನೆ ಹೇಳುತ್ತಿದೆ. ಈ ನಡುವೆ ಕಳೆದ ಒಂದು ವಾರದಲ್ಲಿ 700ರಷ್ಟು ನಾಗರಿಕರನ್ನು ಕೊಂದು ಹಾಕಿದೆ.

ಇತ್ತ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಅತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುಎಸ್‌ಗೆ ಭೇಟಿ ನೀಡಿದ್ದಾರೆ. ಜಗತ್ತಿಗೆ ಶಾಂತಿ ಕಥೆಯ ಹೇಳುವ ಯುಎಸ್‌, ಇನ್ನಷ್ಟು ಶಸ್ತ್ರಾವನ್ನು ಒದಗಿಸುವ ಭರವಸೆಯನ್ನು ಇಸ್ರೇಲ್‌ಗೆ ನೀಡಿದೆ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ತರಲು ಸೇನೆ ಕಳಿಸುವುದಾಗಿ ತಿಳಿಸಿದೆ. ಆದರೆ, ಯುಎಸ್‌ ಈ ಹಿಂದೆ ಸೇನೆ ಕಳಿಸಿದ ರಾಷ್ಟ್ರಗಳಲ್ಲಿ ಏನಾಗಿದೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಶುಕ್ರವಾರ ಬೈರುತ್‌ನ ದಕ್ಷಿಣ ಉಪನಗರಗಳ ಜನನಿಬಿಡ ಪ್ರದೇಶಗಳ ಮೇಲಿನ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ : ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...