Homeಮುಖಪುಟಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

- Advertisement -
- Advertisement -

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಮ್ಮತ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಇಂಧನದ ಮೇಲಿನ ಜಿಎಸ್‌ಟಿ ಜಾರಿಯಲ್ಲಿನ ಪ್ರಮುಖ ಅಡಚಣೆಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಎತ್ತಿ ತೋರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪುಣೆ ಇಂಟರ್‌ನ್ಯಾಶನಲ್ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮಾತನಾಡಿದ ಅವರು, “ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ತಂತ್ರ ಮತ್ತು ಕ್ರಮಗಳು” ಕುರಿತು ಉಪನ್ಯಾಸ ನೀಡಿದ ಪುರಿ, “ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ನಾನು ಸಲಹೆಯನ್ನು ಕೇಳಿದ್ದೇನೆ. ಈಗ ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ತರಬೇಕು ಎಂದು ನಾನು ಬಹಳ ಸಮಯದಿಂದ ಪ್ರತಿಪಾದಿಸುತ್ತಾ ಬಂದಿದ್ದೇನೆ.” ಎಂದು ಹೇಳಿದ್ದಾರೆ.

ಇದನ್ನೂಓದಿ: ನಿರ್ಮಲಾ ಸೀತಾರಾಮನ್ ವಿರುದ್ದ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ : ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ? ಎಂದ ಸಿಎಂ ಸಿದ್ದರಾಮಯ್ಯ

“ಈಗ ನನ್ನ ಹಿರಿಯ ಸಹೋದ್ಯೋಗಿ, ಹಣಕಾಸು ಸಚಿವರು ಕೂಡ ಹಲವಾರು ಸಂದರ್ಭಗಳಲ್ಲಿ ಇಂಧನವನ್ನು ಜಿಎಸ್‌ಟಿ ಅಡಿಯಲ್ಲಿ ತರುವ ಬಗ್ಗೆ ಮಾತನಾಡಿದ್ದಾರೆ ಎಂದು ನನಗೆ ಖಚಿತವಾಗಿದೆ” ಎಂದು ಹೇಳಿದ್ದಾರೆ.

ಇಂಧನದ ಮೇಲಿನ ಜಿಎಸ್‌ಟಿಯನ್ನು ಪ್ರತಿಪಾದಿಸುವ ವೇಳೆ ಅದರ ಅನುಷ್ಠಾನದಲ್ಲಿನ ಪ್ರಮುಖ ಅಡಚಣೆಯನ್ನು ಸಹ ಎತ್ತಿ ಸಚಿವರು ತೋರಿಸಿದ್ದಾರೆ. ಇದಕ್ಕೆ ಎಲ್ಲಾ ರಾಜ್ಯಗಳ ಅನುಮೋದನೆಯ ಅಗತ್ಯವಿದೆ ಎಂದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಅವರಿಗೆ ಗಮನಾರ್ಹ ಆದಾಯವನ್ನು ಉತ್ಪಾದಿಸುವ ಕಾರಣ ಇದು ತುಂಬಾ ಸವಾಲಿನ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ.

ಮದ್ಯ ಮತ್ತು ಇಂಧನವು ಪ್ರಮುಖ ಆದಾಯದ ಮೂಲಗಳಾಗಿರುವುದರಿಂದ ರಾಜ್ಯಗಳು ಈ ಕ್ರಮವನ್ನು ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಪುರಿ ಒಪ್ಪಿಕೊಂಡಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಈ ವಿಷಯವನ್ನು ಚರ್ಚಿಸಲು ಕೇರಳ ಹೈಕೋರ್ಟ್ ಸೂಚಿಸಿದೆ, ಆದರೆ ಕೇರಳದ ಹಣಕಾಸು ಸಚಿವರು ಒಪ್ಪಲಿಲ್ಲ ಎಂದು ಅವರು ಹೇಳಿದ್ದಾರೆ. ಹೆಚ್ಚುವರಿ ವ್ಯಾಟ್ ಅನ್ನು ಬಿಟ್ಟುಕೊಡಲು ಬಿಜೆಪಿಯೇತರ ರಾಜ್ಯಗಳು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...