Homeದಲಿತ್ ಫೈಲ್ಸ್ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ...

ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ ಬೆದರಿಕೆ

- Advertisement -
- Advertisement -

ಕಂಬಳಿ ರಫ್ತುದಾರ ಸೇರಿದಂತೆ ಇಬ್ಬರು ದುಷ್ಕರ್ಮಿಗಳು ದುಡಿದ ಹಣ ಕೊಡುತ್ತೇವೆ ಎಂದು ಕಚೇರಿಗೆ ಕರೆಸಿ ದಲಿತ ಕಾರ್ಮಿಕನಿಗೆ ಹೊಡೆದು ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ ಭದೋಯಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರ್ಪೆಟ್ ರಫ್ತುದಾರ ಅನುರಾಗ್ ಬರನ್ವಾಲ್ ಮತ್ತು ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಗುರುವಾರ ಔರೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

ದೂರುದಾರ ಓಂ ಪ್ರಕಾಶ್ ಗೌತಮ್ (34) ಮತ್ತು ಅವರ 20 ಕಾರ್ಮಿಕರು ಮೇ ನಿಂದ ಆಗಸ್ಟ್‌ವರೆಗೆ ಅನುರಾಗ್ ಬರನ್ವಾಲ್ ಅವರ ರಫ್ತು ಸಂಸ್ಥೆಯಲ್ಲಿ 7,80,000 ರೂಪಾಯಿ ಮೌಲ್ಯದ ಕಾರ್ಪೆಟ್ ಫಿನಿಶಿಂಗ್ ಮತ್ತು ಪ್ಯಾಕಿಂಗ್ ಕೆಲಸವನ್ನು ಪಡೆದಿದ್ದರು.

ಆರಂಭದಲ್ಲಿ, ಅನುರಾಗ್ ಬರನ್ವಾಲ್ ಅವರಿಗೆ 2,14,485 ರೂ.ಗಳನ್ನು ನೀಡಿದ್ದರು. ಆದರೆ ಆಗಸ್ಟ್ 30 ರಂದು ಬರನ್ವಾಲ್ ಅವರು ಗೌತಮ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಬಾಕಿ ಇರುವ 5,65,515 ರೂ. ನೀಡಿವುದಾಗಿ ಹೇಳಿದ್ದರು. ಆದರೆ ಗೌತಮ್ ಅವರ ಕಚೇರಿಗೆ ಹೋದಾಗ ಬರನ್ವಾಲ್ ಮತ್ತು ಇನ್ನೊಬ್ಬ ವ್ಯಕ್ತಿ ಕಚೇರಿಯನ್ನು ಮುಚ್ಚಿ ಆತನಿಗೆ ಥಳಿಸಿದ್ದಾರೆ ಎಂದು ಎಫ್‌ಐಆರ್ ಅನ್ನು ಉಲ್ಲೇಖಿಸಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮೀನಾಕ್ಷಿ ಕಾತ್ಯಾಯನ್ ಹೇಳಿದ್ದಾರೆ.ಉತ್ತರ ಪ್ರದೇಶ

ದೂರುದಾರರ ಬಟ್ಟೆ ಹರಿದು ಆಸಿಡ್ ಸುರಿದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಗೌತಮ್‌ನ ಕೂಗು ಕೇಳಿದ ಕೆಲ ಕಾರ್ಖಾನೆಯ ಕಾರ್ಮಿಕರು ಬಾಗಿಲು ತೆರೆದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ:ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...