Homeಮುಖಪುಟಯಾವುದೇ ಬೆಲೆ ತೆತ್ತಾದರೂ ನಾವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು: ಶರದ್ ಪವಾರ್

ಯಾವುದೇ ಬೆಲೆ ತೆತ್ತಾದರೂ ನಾವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು: ಶರದ್ ಪವಾರ್

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 8 ರಿಂದ 10 ದಿನಗಳಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ತನ್ನ ಸೀಟು ಹಂಚಿಕೆ ಮಾತುಕತೆಯನ್ನು ಮುಕ್ತಾಯಗೊಳಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.

“ಯಾವುದೇ ಬೆಲೆ ತೆತ್ತಾದರೂ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರತಿಪಕ್ಷಗಳ ಮೈತ್ರಿಯು ಶ್ರಮಿಸಬೇಕಾಗಿದೆ. ಎಂದು ಪ್ರತಿಪಾದಿಸಿದರು. ತಮ್ಮ ಪಕ್ಷ ತೊರೆದವರನ್ನು ಗುರಿಯಾಗಿಸಿದ ಪವಾರ್, “ಅವರಲ್ಲಿ ಬೆರಳೆಣಿಕೆಯಷ್ಟು ಮಂದಿಯೂ ರಾಜ್ಯ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ.

288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ ಮಧ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಪುಣೆಯ ಬಾರಾಮತಿ ಪಟ್ಟಣದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದರು.

ಅಭ್ಯರ್ಥಿಗಳ ಆಯ್ಕೆಗೆ ಗೆಲುವು ಮಾತ್ರ ಅರ್ಹತೆಯಾಗಿದೆ. ಸಮ್ಮಿಶ್ರದಲ್ಲಿ ಹೊಂದಾಣಿಕೆಗಳು ಮತ್ತು ಹೊಂದಿಕೊಳ್ಳುವ ವಿಧಾನವು ಅತ್ಯಗತ್ಯವಾಗಿರುತ್ತದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

ಎಂವಿಎ ಮೈತ್ರಗಕೂಟವು ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಅನ್ನು ಒಳಗೊಂಡಿದೆ.

“ನೀವು ಎಲ್ಲ ಸ್ಥಾನಗಳಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ, ಇತರ ಇಬ್ಬರು ಪಾಲುದಾರರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅವಕಾಶ ನೀಡಬೇಕು ಮತ್ತು ನೀವು ಅವರಿಗಾಗಿಯೂ ಕೆಲಸ ಮಾಡಬೇಕು. ಯಾವುದೇ ಬೆಲೆ ತೆತ್ತಾದರೂ ನಾವು ನಮ್ಮದೇ ಸರ್ಕಾರವನ್ನು ಪಡೆಯಬೇಕು” ಎಂದು ಪವಾರ್ ಪ್ರತಿಪಾದಿಸಿದರು.

ಮೂರು ಎಂವಿಎ ಮಿತ್ರಪಕ್ಷಗಳು ನಿರ್ದಿಷ್ಟ ಸ್ಥಾನಕ್ಕಾಗಿ “ಮೂಲ ಆಕಾಂಕ್ಷಿ” ಕುರಿತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯಲಿವೆ. ಪ್ರತಿ ತಾಲೂಕಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ತಿಳಿಸಿದರು.

ರಾಜಕೀಯ ಪಕ್ಷದ ನಾಯಕರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ, ಕಾರ್ಯಕರ್ತರು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪವಾರ್ ಹೇಳಿದರು.

2024ರ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ನಿರೀಕ್ಷೆ ಹೆಚ್ಚಿದೆ. ಆದರೆ, ಎಲ್ಲ ಮಿತ್ರಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಲೋಕಸಭೆ ಚುನಾವಣೆಯಂತೆ ವಿಧಾನಸಭೆ ಚುನಾವಣೆಗೂ ನೀವು ಶ್ರಮಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಪವಾರ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಮಹಾರಾಷ್ಟ್ರದ 40 ಲೋಕಸಭಾ ಸ್ಥಾನಗಳ ಪೈಕಿ ಎಂವಿಎ 30 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 13, ಶಿವಸೇನೆ (ಯುಬಿಟಿ) 9 ಮತ್ತು ಎನ್‌ಸಿಪಿ (ಎಸ್‌ಪಿ) 8 ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ; ರಾಜಕೀಯ ತಜ್ಞನ ಸಕ್ರಿಯ ರಾಜಕಾರಣ; ಗಾಂಧಿ ಜಯಂತಿಯಂದು ಪ್ರಶಾಂತ್ ಕಿಶೋರ್‌ ಅವರಿಂದ ಪಕ್ಷದ ಹೆಸರು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....