Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಪ್ರಕರಣ | ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

ಆರೋಪಿಗಳ ಆಸ್ತಿ ಧ್ವಂಸ ಪ್ರಕರಣ | ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಆರೋಪಿಗಳ ಆಸ್ತಿ ಧ್ವಂಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಗಳ ತೀರ್ಪನ್ನು ಮಂಗಳವಾರ ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ಇದೇ ವೇಳೆ ಆಸ್ತಿಗಳನ್ನು ಧ್ವಂಸಗೊಳಿಸುವ ವಿಷಯದ ಕುರಿತು ಎಲ್ಲಾ ನಾಗರಿಕರಿಗೆ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಅಗಿರುವ ಕಾರಣಕ್ಕೆ, ಅದು ಅವರ ಆಸ್ತಿ ಧ್ವಂಸ ಮಾಡುವುದಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ ಎಂದು ಹೇಳಿದೆ. ಆರೋಪಿಗಳ ಆಸ್ತಿ ಧ್ವಂಸ

“ನಾವು ಏನನ್ನು ತ್ಯಜಿಸುತ್ತಿದ್ದೇವೆ, ನಮ್ಮದು ಜಾತ್ಯತೀತ ದೇಶ. ನಾವು ಈ ನಿರ್ದೇಶನಗಳನ್ನು ಎಲ್ಲಾ ನಾಗರಿಕರಿಗಾಗಿ ಮಾಡುತ್ತಿದ್ದು, ಯಾವುದೇ ನಿರ್ದಿಷ್ಟ ಸಮುದಾಯಕ್ಕಾಗಿ ಮಾಡುತ್ತಿಲ್ಲ” ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಇದನ್ನೂ ಓದಿ: ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಹೇಳಿರುವ ಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳನ್ನು ರಕ್ಷಿಸುವುದಿಲ್ಲ ಎಂದು ಹೇಳಿದೆ. “ನಮ್ಮ ಆದೇಶವು ಯಾವುದೇ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಣದಾರರಿಗೆ ಸಹಾಯ ಮಾಡದಂತೆ ನಾವು ನೋಡಿಕೊಳ್ಳುತ್ತೇವೆ” ಎಂದು ಪೀಠ ಹೇಳಿದೆ.

ಈ ವಿಷಯದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಪೀಠವು ಹೇಳಿದ್ದು, ಈ ವೇಳೆ ಅರ್ಜಿದಾರರ ಪರ ಹಾಜರಾದ ವಕೀಲರೊಬ್ಬರು ಸೆಪ್ಟೆಂಬರ್ 17 ರ ಸುಪ್ರೀಂಕೋರ್ಟ್‌ ನೀಡಿದ್ದ ಆದೇಶವನ್ನು ಉಲ್ಲೇಖಿಸಿ, ಈ ಮಧ್ಯಂತರ ಆದೇಶವನ್ನು ವಿಸ್ತರಿಸುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಈ ಪ್ರಕರಣವನ್ನು ನಿರ್ಧರಿಸುವವರೆಗೂ ಆ ಆದೇಶವನ್ನು ಪಾಲಿಸುವಂತೆ ಹೇಳಿದೆ . ಮಧ್ಯಂತರ ಆದೇಶದಲ್ಲಿ ಅಕ್ಟೋಬರ್ 1ರ ವರೆಗೆ ಸುಪ್ರೀಂಕೋರ್ಟ್‌ನ ಅನುಮತಿಯಿಲ್ಲದೆ ದೇಶದಾದ್ಯಂತ ನೆಲಸಮ ಕಾರ್ಯವನ್ನು ತಡೆಹಿಡಿಯುವಂತೆ ಹೇಳಿತ್ತು. ಈ ಹಿಂದೆ ನ್ಯಾಯಾಲಯವು ಅಕ್ರಮ ಧ್ವಂಸವು ಸಂವಿಧಾನದ “ತತ್ವ” ಕ್ಕೆ ವಿರುದ್ಧವಾಗಿದೆ ಎಂದು ಹೇಳಿತ್ತು.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...