Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...