Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...