Homeಮುಖಪುಟತ್ರಿಪುರಾದಲ್ಲೊಂದು ಆಘಾತಕಾರಿ ಘಟನೆ: 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿ ಮಕ್ಕಳಿಂದಲೇ ಸಜೀವ ದಹನ

ತ್ರಿಪುರಾದಲ್ಲೊಂದು ಆಘಾತಕಾರಿ ಘಟನೆ: 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿ ಮಕ್ಕಳಿಂದಲೇ ಸಜೀವ ದಹನ

- Advertisement -
- Advertisement -

ಪಶ್ಚಿಮ ತ್ರಿಪುರಾದಲ್ಲಿ 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿ ಆಕೆಯ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪುತ್ರರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಕೌಟುಂಬಿಕ ಕಲಹವೇ ಭೀಕರ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಚಂಪಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಮರ್ಬರಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ.

“ಮಹಿಳೆಗೆ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವು ಅಲ್ಲಿಗೆ ಧಾವಿಸಿದೆ. ಮರಕ್ಕೆ ಕಟ್ಟಿದ ಸುಟ್ಟ ದೇಹವನ್ನು ಕಂಡು ನಾವು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದೇವೆ” ಎಂದು ಜಿರಾನಿಯಾದ ಉಪವಿಭಾಗದ ಪೊಲೀಸ್ ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾವು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಕೋರಲಾಗಿದೆ. ಕೌಟುಂಬಿಕ ಕಲಹ ಘಟನೆಗೆ ಕಾರಣವಾಗಿರಬಹುದು. ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ನೇಪಾಳದಲ್ಲಿ ಭಾರಿ ಪ್ರವಾಹ-ಭೂಕುಸಿತ; ಸಾವಿನ ಸಂಖ್ಯೆ 200ಕ್ಕೆ ಏರಿಕೆ, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...