Homeಮುಖಪುಟಆದೇಶ ಉಲ್ಲಂಘಿಸಿ 'ಬುಲ್ಡೋಝರ್ ಕಾರ್ಯಾಚರಣೆ' : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಆದೇಶ ಉಲ್ಲಂಘಿಸಿ ‘ಬುಲ್ಡೋಝರ್ ಕಾರ್ಯಾಚರಣೆ’ : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ತನ್ನ ಆದೇಶ ಉಲ್ಲಂಘಿಸಿ ಬುಲ್ಡೋಝರ್ ಕಾರ್ಯಾಚರಣೆ ನಡೆಸಿದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಸೆ.30) ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶದಲ್ಲಿ ಎಲ್ಲೂ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು 2024 ರ ಸೆಪ್ಟೆಂಬರ್ 17 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನು ಉಲ್ಲಂಘಿಸಿ ಕಟ್ಟಡಗಳನ್ನು ಕೆಡವಿದ ಅಸ್ಸಾಂ ಸರ್ಕಾರದ ವಿರುದ್ದ, ಅಲ್ಲಿನ 47 ನಾಗರಿಕರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಸ್ಸಾಂ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಮೂರು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಈ ಮಧ್ಯೆ ಕಕ್ಷಿದಾರರು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ, “ನ್ಯಾಯಾಲಯದ ಆದೇಶದ ಘೋರ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಸೆಪ್ಟೆಂಬರ್ 17ರಂದು ಆದೇಶ ಹೊರಡಿಸಿದ್ದ ಸುಪ್ರೀಂ ಕೋರ್ಟ್, ಸಾರ್ವಜನಿಕ ರಸ್ತೆ, ಫುಟ್‌ಪಾತ್‌, ರೈಲು ಮಾರ್ಗಗಳ ನಿರ್ಮಾಣಕ್ಕಾಗಿ ಮತ್ತು ಜಲಮೂಲಗಳ ಅತಿಕ್ರಮಣಗಳ ತೆರವು ಹೊರತು, ದೇಶದಲ್ಲಿ ಎಲ್ಲೂ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು ಸೂಚಿಸಿತ್ತು.

ಈ ಆದೇಶ ಹೊರ ಬಿದ್ದ ಸ್ವಲ್ಪ ದಿನಗಳ ನಂತರ ಅಸ್ಸಾಂ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಅತಿಕ್ರಮಣ ಮಾಡಲಾಗಿದೆ ಎಂದು ಅಸ್ಸಾಂ ಸರ್ಕಾರದ ಅಧಿಕಾರಿಗಳು ನಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಮಾಡುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ಕಾರ ಮನೆಗಳನ್ನು ಕೆಡವಿದೆ ಎಂದು ಇಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲ ಹುಝೆಫಾ ಅಹ್ಮದಿ, ಬುಲ್ಡೋಝರ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆದ್ದರಿಂದ
ಸರ್ಕಾರ ಯಥಾಸ್ಥಿತಿ ಕಾಪಾಡಿಕೊಳ್ಳಲು ನ್ಯಾಯಾಲಯ ಆದೇಶಿಸಬೇಕು ಎಂದು ಕೋರಿದ್ದಾರೆ.

ಅಸ್ಸಾಂನ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳ ನಿವಾಸಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ನಾವು ನಮ್ಮ ಮನೆಗಳ ಜಮೀನಿನ ಮೂಲ ಪಟ್ಟದಾರರ (ಭೂಮಾಲೀಕರು) ಜೊತೆ ಒಪ್ಪಂದ ಮಾಡಿಕೊಂಡು ಹಲವಾರು ದಶಕಗಳಿಂದ ಮನೆ ಕಟ್ಟಿ ವಾಸಿಸುತ್ತಿದ್ದೇವೆ. ನಾವು ಭೂಮಿಯ ಮಾಲೀಕರಲ್ಲದಿದ್ದರೂ, ನಮ್ಮ ಮನೆಗಳು ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ನಮ್ಮ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ Xನ ಸೆಕ್ಷನ್ 165(3) ಕ್ಕೆ ವಿರುದ್ದವಾಗಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಮನೆಗಳನ್ನು ತೆರವುಗೊಳಿಸುವ ಮುನ್ನ ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯ ಸಮಯ ಒದಗಿಸಬೇಕು. ಆದರೆ, ಇವೆಲ್ಲವನ್ನೂ ಸರ್ಕಾರ ಉಲ್ಲಂಘಿಸಿ ಎಂದಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ: ಚುನಾವಣಾ ಪ್ರಚಾರದ ವೇಳೆ ಲೋಕಸಭಾ ಸಂಸದ ಇಂಜಿನಿಯರ್ ರಶೀದ್ ಕಾರಿನ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...