Homeಮುಖಪುಟಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ ಆಕ್ರೋಶ

ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ ಆಕ್ರೋಶ

- Advertisement -
- Advertisement -

“ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ಅವರ ಬೆಂಬಲಿಗರನ್ನು ಸಿಂಘು ಗಡಿಯಲ್ಲಿ ದೆಹಲಿ ಪೊಲೀಸರು ಬಂಧಿಸಿರುವುದು ಸ್ವೀಕಾರಾರ್ಹವಲ್ಲ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

“ಪರಿಸರ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಮತ್ತು ನೂರಾರು ಲಡಾಕಿಗಳ ಬಂಧನವು ಸ್ವೀಕಾರಾರ್ಹವಲ್ಲ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಲಡಾಖ್‌ನ ಭವಿಷ್ಯಕ್ಕಾಗಿ ನಿಂತಿರುವ ಹಿರಿಯ ನಾಗರಿಕರನ್ನು ದೆಹಲಿಯ ಗಡಿಯಲ್ಲಿ ಏಕೆ ಬಂಧಿಸಲಾಗುತ್ತಿದೆ? ಮೋದಿ ಜೀ, ಈ ‘ಚಕ್ರವ್ಯೂಹ’ ಮುರಿದುಹೋಗುತ್ತದೆ, ಹಾಗೆಯೇ ನಿಮ್ಮ ದುರಹಂಕಾರವೂ ಒಡೆಯುತ್ತದೆ. ನೀವು ಲಡಾಖ್‌ನ ಧ್ವನಿಯನ್ನು ಕೇಳಬೇಕಾಗುತ್ತದೆ” ಎಂದು ಅವರು ಹೇಳಿದರು.

ವಾಂಗ್ಚುಕ್ ಮತ್ತು ಅವರ ಬೆಂಬಲಿಗರನ್ನು ಸೋಮವಾರ ತಡರಾತ್ರಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಗಡಿಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 163 ಅನ್ನು ವಿಧಿಸಲಾಗಿದೆ ಎಂದು ದೆಹಲಿ ಪೊಲೀಸರು ಘೋಷಿಸಿದ್ದಾರೆ.

ವಾಂಗ್ಚುಕ್ ಅವರು ತಮ್ಮ ಬಂಧನದ ಸುದ್ದಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

“ನನ್ನನ್ನು ಬಂಧಿಸಲಾಗಿದೆ.. ದೆಹಲಿ ಗಡಿಯಲ್ಲಿ 150 ಪಾದಯಾತ್ರಿಗಳ ಜೊತೆಗೆ, ನೂರಾರು ಪೋಲೀಸ್ ಪಡೆ, ಕೆಲವರು 1,000 ಎಂದು ಹೇಳುತ್ತಾರೆ. 80 ರ ಹರೆಯದ ಅನೇಕ ಹಿರಿಯ ನಾಗರಿಕರು, ಕೆಲವು ಡಜನ್ ಸೇನಾ ಯೋಧರು ನಮ್ಮನ್ನು ಬಂಧಿಸಿದ್ದು, ನಮ್ಮ ಭವಿಷ್ಯ ಏನಾಗುತ್ತದೆ ತಿಳಿದಿಲ್ಲ. ನಾವು ಬಾಪು ಅವರ ಸಮಾಧಿಯತ್ತ ಅತ್ಯಂತ ಶಾಂತಿಯುತ ಮೆರವಣಿಗೆಯಲ್ಲಿದ್ದೆವು.. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ, ಪ್ರಜಾಪ್ರಭುತ್ವದ ತಾಯಿ… ಹೇ ರಾಮ್!” ಎಂದು ಸೋನಮ್ ವಾಂಗ್ಚುಕ್ ಪೋಸ್ಟ್ ಮಾಡಿದ್ದಾರೆ.

ಹವಾಮಾನ ಕಾರ್ಯಕರ್ತ ವಾಂಗ್‌ಚುಕ್ ಮತ್ತು ಇತರ ಸ್ವಯಂಸೇವಕರು ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಲಡಾಖ್‌ನ ನಾಯಕತ್ವದೊಂದಿಗೆ ಸಂವಾದವನ್ನು ಪುನರಾರಂಭಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಲೇಹ್‌ನಿಂದ ನವದೆಹಲಿಗೆ ಕಾಲ್ನಡಿಗೆಯ ಮೆರವಣಿಗೆಯನ್ನು ಕೈಗೊಂಡರು.

ಲಡಾಖ್ ಅನ್ನು ಸಂವಿಧಾನದ ಆರನೇ ಶೆಡ್ಯೂಲ್‌ಗೆ ಸೇರಿಸುವುದು ಅವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ, ಇದು ಸ್ಥಳೀಯ ಜನಸಂಖ್ಯೆಗೆ ತಮ್ಮ ಭೂಮಿ ಮತ್ತು ಸಾಂಸ್ಕೃತಿಕ ಗುರುತನ್ನು ರಕ್ಷಿಸಲು ಕಾನೂನು ಮಾಡುವ ಅಧಿಕಾರವನ್ನು ನೀಡುತ್ತದೆ.

ಮಾರ್ಚ್ 1 ರಂದು ಲೇಹ್‌ನಲ್ಲಿ ಈ ಯಾತ್ರೆ ಪ್ರಾರಂಭವಾಯಿತು. ಇದಕ್ಕೂ ಮೊದಲು, ಸೆಪ್ಟೆಂಬರ್ 14 ರಂದು ಹಿಮಾಚಲ ಪ್ರದೇಶವನ್ನು ತಲುಪಿದಾಗ, ವಾಂಗ್‌ಚುಕ್ ತಮ್ಮ ಪಾದಯಾತ್ರೆ ಉದ್ದೇಶವನ್ನು ಒತ್ತಿ ಹೇಳಿದರು. “ಐದು ವರ್ಷಗಳ ಹಿಂದೆ ಸರ್ಕಾರವು ನಮಗೆ ನೀಡಿದ ಭರವಸೆಯನ್ನು ನೆನಪಿಸುವ ಕಾರ್ಯಾಚರಣೆಯಲ್ಲಿದ್ದೇವೆ” ಎಂದು ಅವರು ಹೇಳಿದರು.

ಸೋನಮ್ ವಾಂಗ್‌ಚುಕ್ ಅವರು ಲಡಾಖ್‌ನ ರಾಜ್ಯತ್ವಕ್ಕಾಗಿ, ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್‌ನಡಿಯಲ್ಲಿ ಸೇರ್ಪಡೆಗೊಳ್ಳಲು ಪ್ರತಿಪಾದಿಸಿದ್ದಾರೆ. ಇದು ಬುಡಕಟ್ಟು ಸಮುದಾಯಗಳಿಗೆ ವಿಶೇಷ ಹಕ್ಕುಗಳನ್ನು ನೀಡುತ್ತದೆ. ಮತ್ತು ಲಡಾಖ್‌ಗೆ ಬಲವಾದ ಪರಿಸರ ರಕ್ಷಣೆಗಳನ್ನು ನೀಡುತ್ತದೆ.

ಈ ಹಿಂದೆ, ಲಡಾಖ್‌ನ ದುರ್ಬಲವಾದ ಪರ್ವತ ಪರಿಸರ ಮತ್ತು ಸ್ಥಳೀಯ ಜನರನ್ನು ರಕ್ಷಿಸುವ ಮಹತ್ವದ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲು ಸೋನಮ್ ವಾಂಗ್‌ಚುಕ್ ಲೇಹ್‌ನಲ್ಲಿ ಒಂಬತ್ತು ದಿನಗಳ ಉಪವಾಸವನ್ನು ಪೂರ್ಣಗೊಳಿಸಿದರು.

ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರವನ್ನು ‘ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್’ ಪ್ರತ್ಯೇಕಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.

ಇದನ್ನೂ ಓದಿ; ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...