Homeಕರ್ನಾಟಕಮುಡಾ ವಿವಾದ: ನಿವೇಶನ ಹಿಂಪಡೆಯುವಂತೆ ಆಯುಕ್ತರಿಗೆ ಪತ್ರ ಬರೆದ ಪಾರ್ವತಿ, ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಮುಡಾ ವಿವಾದ: ನಿವೇಶನ ಹಿಂಪಡೆಯುವಂತೆ ಆಯುಕ್ತರಿಗೆ ಪತ್ರ ಬರೆದ ಪಾರ್ವತಿ, ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

- Advertisement -
- Advertisement -

ತಮ್ಮ ಜಮೀನಿಗೆ ಪರಿಹಾರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಬದಲಿ ನಿವೇಶನಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ, ವಿವಾದದ ಬಳಿಕ ಎಲ್ಲ ನಿವೇಶಗಳನ್ನು ಹಿಂಪಡೆಯುವಂತರ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪಾರ್ವತಿ ಅವರ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸುದೀರ್ಘ ಪತ್ರ ಬರೆದಿರುವ ಪಾರ್ವತಿಯವರು, “ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ” ಎಂದು ಹೇಳಿದ್ದಾರೆ.

“ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು” ಎಂದು ವಿವರಿಸಿದ್ದಾರೆ.

“ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ–ಕುಂಕುಮದ ಭಾಗವಾಗಿ ಕೊಟ್ಟ ಜಮೀನಿಗೆ ಬದಲಿಗೆ ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ” ಎಂದು ಪಾರ್ವತಿ ಅವರು ಘೋಷಿಸಿದ್ದಾರೆ.

“ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

“ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ” ಎಂದು ಅವರು ಮನವಿ ಮಾಡಿದ್ದಾರೆ.

ಪತ್ನಿ ನಿರ್ಧಾರಕ್ಕೆ ಸಿದ್ದರಾಮಯ್ಯ ಮೆಚ್ಚುಗೆ

ನಿವೇಶನ ಹಿಂತಿರುಗಿಸುವ ಪತ್ನಿ ಪಾರ್ವತಿ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ECIR ದಾಖಲಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...