Homeಫ್ಯಾಕ್ಟ್‌ಚೆಕ್FACT CHECK : ಬ್ಯಾಂಕ್ ಮ್ಯಾನೇಜರ್‌ಗೆ ಬಿಜೆಪಿ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ ಎಂಬುವುದು ಸುಳ್ಳು

FACT CHECK : ಬ್ಯಾಂಕ್ ಮ್ಯಾನೇಜರ್‌ಗೆ ಬಿಜೆಪಿ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ವ್ಯಕ್ತಿಯೊಬ್ಬ ಬ್ಯಾಂಕ್ ಮ್ಯಾನೇಜರ್‌ ಒಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ರವಿಂದ್ರ ಕಪೂರ್ ಎಂಬ ಎಕ್ಸ್‌ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಮುಖಂಡರೊಬ್ಬರು ಸಾರ್ವಜನಿಕ ವಲಯದ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡುವ ಧೈರ್ಯ ತೋರಿದ್ದಾರೆ ಎಂದು ಬರೆದುಕೊಂಡಿದ್ದಾರೆ. 

“ದುರಹಂಕಾರಿ ಬಿಜೆಪಿಗೆ ಬೇಗ ತಕ್ಕ ಪಾಠ ಕಲಿಸಬೇಕು. ಎಂತಹ ಗೂಂಡಾಗಿರಿ ನಡೆಯುತ್ತಿದೆ, ಬಿಜೆಪಿಯವರು ನಾಚಿಕೆಯಿಲ್ಲದೆ ಬ್ಯಾಂಕ್ ಮ್ಯಾನೇಜರ್ ಮೇಲೆ ಕೈ ಎತ್ತಿದ್ದಾರೆ. ಈ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಯರ್ ಗುರೂಜಿ ಹರಿಯಾಣ ಎಂಬ ಎಕ್ಸ್‌ ಖಾತೆಯಯಲ್ಲಿ ಬರೆದುಕೊಳ್ಳಲಾಗಿದೆ. 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 13 ಆಗಸ್ಟ್‌ 2024 ರಂದು ಪುಣೆ ಪಲ್ಸ್‌ ಎಂಬ ಮಾಧ್ಯಮ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಪುಣೆ ಪಲ್ಸ್‌ ವರದಿಯ ಪ್ರಕಾರ, ಬ್ಯಾಂಕ್ ಮ್ಯಾನೇಜರ್ ಮೇಲೆ ‘ಸ್ವಾಭಿಮಾನಿ’ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ರೈತರಿಗೆ ನೀಡುವ ವಿವಿಧ ಸಬ್ಸಿಡಿಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಭಿಮಾನಿ ಶೆಟ್ಕರಿ ಸಂಘಟನೆಯು ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ರೈತ ಸಂಘವಾಗಿದೆ. ಇದನ್ನು ಸಂಸದ ರಾಜು ಶೆಟ್ಟಿ ಅವರು ಸ್ಥಾಪಿಸಿದ್ದಾರೆ.

ದಿ ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರು ಬ್ಯಾಂಕ್ ಮ್ಯಾನೇಜರ್ ಹಲ್ಲೆ ನಡೆಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖ ಮಾಡಿದೆ. ರೈತರು, ಹಾಲು, ವಸತಿ, ವಿಧವೆಯರು ಮತ್ತು ನಿರ್ಗತಿಕರಿಗೆ ನೆರವು ಸೇರಿದಂತೆ ವಿವಿಧ ಸಬ್ಸಿಡಿಗಳನ್ನು ಬ್ಯಾಂಕ್ ಮ್ಯಾನೇಜರ್ ಸ್ಥಗಿತಗೊಳಿಸಿದ್ದಾರೆ ಎಂದು ಗುಂಪು ಆರೋಪಿಸಿದೆ. ಇಂದು ಸ್ವಾಭಿಮಾನಿ ಶೆಟ್ಕರಿ ಸಂಘಟನೆಯ ಸದಸ್ಯರು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಗದ್ದಲ ಎಬ್ಬಿಸಿ ಪ್ರತಿಭಟನೆ ನಡೆಸಿದರು ಎಂದು ವರದಿಯಾಗಿದೆ.

ಹಾಗಾಗಿ ವೈರಲ್ ವಿಡಿಯೋದಲ್ಲಿಹಂಚಿಕೊಂಡಂತೆ ಬ್ಯಾಂಕ್ ಮ್ಯಾನೆಜರ್‌ ಮೇಲೆ ಹಲ್ಲೆ ನಡೆಸಿರುವುದು ಬಿಜೆಪಿ ನಾಯಕರಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದವರು ಸ್ವಾಭಿಮಾನಿ ಶೆಟ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರೇ ಹೊರತು ಬಿಜೆಪಿ ನಾಯಕರಲ್ಲ ಎಂಬುದು  ಸ್ಪಷ್ಟವಾಗಿದೆ. ಆದ್ದರಿಂದ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದವರು  ಬಿಜೆಪಿ ನಾಯಕರು  ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...