Homeಫ್ಯಾಕ್ಟ್‌ಚೆಕ್FACT CHECK : ಚಿರತೆ ಮೊಸಳೆಯನ್ನು ಭೇಟೆಯಾಡಿದ ದೃಶ್ಯ ಬಂಟ್ವಾಳದಲ್ಲ

FACT CHECK : ಚಿರತೆ ಮೊಸಳೆಯನ್ನು ಭೇಟೆಯಾಡಿದ ದೃಶ್ಯ ಬಂಟ್ವಾಳದಲ್ಲ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, 1.53 ನಿಮಿಷದ ಈ ವಿಡಿಯೋದಲ್ಲಿ ಚಿರತೆ ರೀತಿಯ ಪ್ರಾಣಿಯೊಂದು ಮೊಸಳೆಯನ್ನು ಹಿಡಿಯುವ ದೃಶ್ಯವನ್ನು ಕಾಣಬಹುದು. ಫೇಸ್‌ಬುಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಂಟ್ವಾಳ ನದಿಯಲ್ಲಿ ಕಂಡು ಬಂದ ದೃಶ್ಯ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

“ಬಂಟ್ವಾಳ ನದಿಯಲ್ಲಿ ಕಂಡು ಬಂದ ದ್ರಶ್ಯ ಎಂದು ಸೋಶಿಯಲ್ ಮೀಡಿಯಾ ದಲ್ಲಿ ಹರಿದಾಡುತ್ತಿರುವ ವೈರಲ್ ವಿಡಿಯೋ. ಊರು ಯಾವುದು ಎಂಬುದು ಗೊತ್ತಿಲ್ಲ. ಆದ್ರೆ ನದಿ ಕಡೆ ಹೋಗುವವರು ಸ್ವಲ್ಪ ಜಾಗ್ರತೆ ವಹಿಸುವುದು ಮುಖ್ಯ.  ವಿಡಿಯೋವನ್ನು ನದಿ ಬದಿ ವಾಸಿಸುವವರು ಒಮ್ಮೆ ನೋಡಿ” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಇದೆ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಚಿರತೆಯೊಂದು ನದಿ ದಡದಲ್ಲಿ ಹೊಂಚುಹಾಕಿ ಮೊಸಳೆಯನ್ನು ಭೇಟೆಯಾಡಿದ ದೃಶ್ಯವು ಉತ್ತರ ಕನ್ನಡ ಜಿಲ್ಲೆಯ ಬಂಟ್ವಾಳದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡ ವಿಡಿಯೋವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 29 ಮೇ  2024ರಂದು Guainía Cultural ಫೇಸ್‌ಬುಕ್‌ ಪೇಜ್‌ನಲ್ಲಿ ವೈರಲ್‌ ವಿಡಿಯೋವನ್ನು ಹೋಲುವ ವಿಡಿಯೋವೊಂದು ಲಭ್ಯವಾಗಿದೆ, ಈ ವಿಡಿಯೋದಲ್ಲಿ “ಅಮೆಜಾನ್‌ ಕಾಡಿನ ರಾಜ” ಎಂದು ಬರೆದಿರುವುದನ್ನು ನೋಡಬಹುದು.

https://www.facebook.com/reel/1165388927958645

9 ಜೂನ್ , 2024ರಂದು Gancet World ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಇದೇ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, “jaguar hunting caiman” ಎಂಬ ಶೀರ್ಷಿಕೆ ನೀಡಲಾಗಿದೆ.

 

ಇವುಗಳ ಆಧಾರದಲ್ಲಿ ನಾವು ಇನ್ನಷ್ಟು ಶೋಧ ನಡೆಸಿದ್ದು, ಪ್ರೀಮಿಯರ್ ಅಪಾಗಿನಾ ಹೆಸರಿನ ವೆಬ್‌ಸೈಟ್ ನಲ್ಲಿ ಮೇ 28, 2024ರಂದು ಮಾಡಿದ ಪೋಸ್ಟ್ ಲಭ್ಯವಾಗಿದ್ದು ಜಾಗ್ವಾರ್ ಕೂಯ್ಬಾ  ನದಿಯಲ್ಲಿ ಮೊಸಳೆಯನ್ನು ಹಿಡಿದಿರುವುದು ಎಂದಿದೆ. (ಅನುವಾದಿಸಲಾಗಿದೆ) ಈ ಪೋಸ್ಟ್ ನಲ್ಲೂ ವೈರಲ್ ವಿಡಿಯೋವನ್ನು ಅಪ್‌ಲೋಡ್‌ ಮಾಡಿರುವುದನ್ನು ನೋಡಬಹುದು. ಕೂಯ್ಬಾ ನದಿಯು ದಕ್ಷಿಣ ಅಮೆರಿಕದ ಬ್ರೆಜಿಲ್‌ ನಲ್ಲಿದೆ ಎಂಬುದು ಗಮನಾರ್ಹ. ಚಿರತೆ ಮೊಸಳೆಯನ್ನು ಬೇಟಿಯಾಡಿದ ದೃಶ್ಯವು ಬಂಟ್ವಾಳದಲ್ಲಿ ನಡೆದಿದ್ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಸಾಕ್ಷ್ಯಾಧಾರಗಳ ಪ್ರಕಾರ, ಚಿರತೆ ರೀತಿಯ ಪ್ರಾಣಿಯೊಂದು ಮೊಸಳೆಯನ್ನು ಹಿಡಿಯುವ ದೃಶ್ಯ ಬಂಟ್ವಾಳದ್ದಲ್ಲ, ಅದು ದಕ್ಷಿಣ ಅಮೆರಿಕ ಮೂಲದ್ದು ಎಂದು ಕಂಡುಕೊಂಡಿದ್ದೇವೆ.

ಒಟ್ಟಾರೆಯಾಗಿ ಹೇಳುವುದಾದರೆ, ದಕ್ಷಿಣ ಅಮೆರಿಕಾದಲ್ಲಿ ಚಿತರೆಯೊಂದು ಮೊಸಳೆಯನ್ನು ಭೇಟೆಯಾಡಿದ ದೃಶ್ಯವನ್ನು, ಉತ್ತರ ಕನ್ನಡದ ಬಂಟ್ವಾಳದ ದೃಶ್ಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...