HomeUncategorizedFACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

- Advertisement -
- Advertisement -

“ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಹೀಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ನಿಜವೆಂದು ಕಂಡು ಬಂದಿದೆ. ಆದರೆ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ತೆರಳಲು ದೆಹಲಿ ಮೆಟ್ರೋ ಬಳಸುತ್ತಿದ್ದಾರೆ ಎಂಬುದು ಅನುಮಾನ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

ಹಾಗಿದ್ದರೆ ನಿಜವಾಗಿಯೂ ನಿರ್ಮಲ ಸೀತಾರಾಮನ್ ಪ್ರತಿ ದಿನ ತಮ್ಮ ಕಚೇರಿಗೆ ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.


ಫ್ಯಾಕ್ಟ್‌ಚೆಕ್‌ :
ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರತಿ ದಿನ ತಮ್ಮ ಕಚೇರಿಗೆ ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುತ್ತಾರೆಯೇ ಎಂದು ಪರಿಶೀಲಿಸಲು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 17 ಮೇ 2024ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಎಕ್ಸ್‌ ( ಟ್ವಿಟರ್)ನಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದು ಲಭ್ಯವಾಗಿದೆ, ಪೋಸ್ಟ್‌ನಲ್ಲಿರುವ ವಿಡಿಯೋಗಳೀಗೂ ವೈರಲ್ ದೃಶ್ಯಾವಳಿಗಳಿಗೂ ಸಾಮ್ಯತೆ ಇರುವುದು ಕಂಡುಬಂದಿದೆ.

ಈ ಬಗ್ಗೆ ಮತ್ತಷ್ಟು ಸರ್ಚ್ ಮಾಡಿದಾಗ, ಮೇ 17ರಂದು ಟೈಮ್ಸ್‌ ಆಫ್‌ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಲ್ಹೋತ್ರಾ ಪರ ಪ್ರಚಾರ ಮಾಡಲು ಸೀತಾರಾಮನ್ ಮಂಡಿ ಹೌಸ್‌ನಿಂದ ಮೆಟ್ರೋದಲ್ಲಿ ಸಂಚರಿಸಿದರು ಎಂದು ಉಲ್ಲೇಖಿಸಲಾಗಿದೆ.  ಪ್ರಯಾಣದ ಸಂದರ್ಭದಲ್ಲಿ ಅವರು ಸಹ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು ಎಂದು ಬಿಜೆಪಿ ಪದಾಧಿಕಾರಿಗಳು ಹೇಳಿದ್ದಾರೆ. ಬಳಿಕ ಹಣಕಾಸು ಸಚಿವರು ಸಮೀಪದ ಕೋಚಿಂಗ್ ಸೆಂಟರ್‌ಗೆ ಭೇಟಿ ನೀಡಿದರು, ಅಲ್ಲಿ ಅವರು ಪ್ರಾಥಮಿಕವಾಗಿ ಉದ್ಯೋಗಾವಕಾಶಗಳು, ಆರ್ಥಿಕತೆಯ ಸ್ಥಿತಿ ಮತ್ತು ಭಾರತದಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಪಾತ್ರಗಳ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಾವು  ಸಂಬಂಧಿತ ಕೀವರ್ಡ್ಸ್‌ಗಳನ್ನು ಬಳಸಿ ಅಂತರ್ಜಾಲದಲಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಹರ್ಷ್ ಮಲ್ಹೋತ್ರಾ ಅವರು ತಮ್ಮ ಪರಿಶೀಲಿಸಿದ X ಹ್ಯಾಂಡಲ್‌ನಿಂದ ಮೇ 17, 2024 ರಂದು ಲಕ್ಷ್ಮಿ ನಗರ ಮೆಟ್ರೋ ನಿಲ್ದಾಣದಲ್ಲಿ ವಿದ್ಯಾರ್ಥಿ ಸಭೆಯನ್ನು ನಡೆಸಿದ್ದಾರೆ ಎಂಬುದು ಕಂಡುಬಂದಿದೆ. ಈ ವರ್ಷ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಗೆ ಮಲ್ಹೋತ್ರಾ ಅವರ ಪ್ರಚಾರದಲ್ಲಿ ಭಾಗಿಯಾಗಲು ಸೀತಾರಾಮನ್ ಅವರು ಮೆಟ್ರೋ ನಿಲ್ದಾಣಕ್ಕೆ ಬರಲಿದ್ದಾರೆ ಎಂದು ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಕಚೇರಿ ಕೆಲಸಕ್ಕಾಗಿ ಪ್ರತಿನಿತ್ಯ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು. ಈ ಕುರಿತು ಯಾವುದೇ ವಿಶ್ವಾಸರ್ಹ ವರದಿಗಳು ಇದುವರೆಗೂ ಕಂಡು ಬಂದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...