Homeಕರ್ನಾಟಕಸ್ನೇಹಮಯಿ ಕೃಷ್ಣಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಸ್ನೇಹಮಯಿ ಕೃಷ್ಣಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

- Advertisement -
- Advertisement -

ಮೂಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಾ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಮಾಡಿದೆ ಎಂದು ಮಂಗಳವಾರ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್ಸಿ ನ್ಯಾಯಾಲಯ ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಿದೆ. ಮಂಗಳವಾರ ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣಾ ಗೈರಾದ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಹಗರಣದ ಬಗ್ಗೆ ಪ್ರಕರಣ ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ಅವರ ವಿರುದ್ಧ 2015ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರುಹಾಜರಾದ ಕಾರಣ ವಾರೆಂಟ್ ಜಾರಿಯಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂಓದಿ: ’45 ದಿನ ನಿದ್ದೆಯಿಲ್ಲ’ | ಬಜಾಜ್ ಫೈನಾನ್ಸ್‌ ಕಂಪೆನಿಯ ಒತ್ತಡ; ಸಿಬ್ಬಂದಿ ಸಾವಿಗೆ ಶರಣು

ಈ ನಡುವೆ ಸಿಎಂ ಹಾಗೂ ಪತ್ನಿ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಮುಂದುವರೆದಿದ್ದು, ಮೂಲ ಜಮೀನು ಸ್ಥಳಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಕರೆದೊಯ್ದು ಮಹಜರು ನಡೆಸಿದ್ದಾರೆ. ಈ ವೇಳೆ ಕಂದಾಯ, ಸರ್ವೇ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ಟೇಪ್‌ ಹಿಡಿದು ಅಳತೆ ಮಾಡಿ ತನಿಖೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಮುಡಾ ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಮೈಸೂರು ಲೋಕಾಯುಕ್ತ ಕರೆದ ಹಿನ್ನೆಲೆ ಬೆಳ್ಳಂಬೆಳಗ್ಗೆ 7.30ಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದರು. ಬಳಿಕ ಲೋಕಾ ಪೊಲೀಸರು, ಸ್ನೇಹಮಯಿ ಕೃಷ್ಣ ಅವರನ್ನು ಮಹಜರು ಮಾಡಲು ಸ್ಥಳಕ್ಕೆ ಕರೆದೊಯ್ದರು.

ಮಹಜರು ಮುನ್ನ ಮಾತನಾಡಿದ್ದ ಕೃಷ್ಣ, “ದಾಖಲೆಗಳಿಗೆ ಸಂಬಂಧಿಸಿದ ಯಾವುದೇ ನೋಟಿಸ್‌ ಬಂದಿಲ್ಲ. ಆದರೆ, ವಿಚಾರಣೆಯಲ್ಲಿ ಯಾವುದೇ ದಾಖಲಾತಿ ಕೋರಿದ್ದರೆ ನಾನು ಕೊಡಲು ಸಿದ್ಧ. ಮೊದಲು ದೂರು ನೀಡಿದ ಸಂದರ್ಭ ನೀಡಿದ ದಾಖಲಾತಿಗಳನ್ನು ಈಗಾಗಲೇ ಕೊಟ್ಟಿದ್ದೇನೆ. ಈಗ ಮತ್ತೆ ವಿಚಾರಣೆ ಸಂದರ್ಭದಲ್ಲಿ ದಾಖಲಾತಿಗಳನ್ನು ಕೇಳಿದರೆ ಕೊಡಲು ಸಿದ್ಧ. ಇದರ ಜೊತೆಗೆ ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬುದು ನನ್ನ ಒತ್ತಾಯ” ಎಂದು ಹೇಳಿದ್ದರು.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...