ಮಾಜಿ ಸಚಿವ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕ ಕೆ.ಟಿ ರಾಮರಾವ್ (ಕೆಟಿಆರ್) ವಿರುದ್ದ ಕಾಂಗ್ರೆಸ್ ಸರ್ಕಾರದ ಸಚಿವೆ ಕೊಂಡಾ ಸುರೇಖಾ ಅವರು ನೀಡಿರುವ ಹೇಳಿಕೆಯೊಂದು ತೆಲಂಗಾಣದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ನಟರಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ಮದುವೆ ಮುರಿದು ಬೀಳಲು ಸಚಿವ ಕೆಟಿಆರ್ ಕಾರಣ ಎಂದು ಸಚಿವೆ ಸುರೇಖಾ ಹೇಳಿದ್ದು, ಕೆಟಿಆರ್ ವಿರುದ್ದ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ವರದಿಗಳ ಪ್ರಕಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಸುರೇಖಾ,”ಕೆಟಿಆರ್ ಡ್ರಗ್ ವ್ಯಸನಿ. ಚಿತ್ರರಂಗದ ಪ್ರಮುಖರಿಗೆ ಆತ ರೇವ್ ಪಾರ್ಟಿ ಆಯೋಜಿಸುತ್ತಿದ್ದರು. ಅವರ ದೌರ್ಜನ್ಯ ಸಹಿಸದೇ ಅನೇಕ ನಟಿಯರು ನಟನೆಯನ್ನೇ ಬಿಟ್ಟಿದ್ದಾರೆ. ಕೆಲವರು ಮದುವೆಯಾಗಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ” ಎಂದು ಹೇಳಿದ್ದಾರೆ.
ಮುಂದುವರಿದು.. “ನಾಗಾರ್ಜುನ ಒಡೆತನದ ಎನ್ ಕನ್ವೆನ್ಷನ್ ಸೆಂಟರ್ ನೆಲಸಮಗೊಳಿಸುವುದು ಬೇಡ ಎಂದಾದಲ್ಲಿ, ತನ್ನ ಬಳಿ ಸಮಂತಾ ಅವರನ್ನು ಕಳುಹಿಸುವಂತೆ ರಾಮರಾವ್ ಬೇಡಿಕೆ ಇಟ್ಟಿದ್ದರು. ರಾಮರಾವ್ ಬಳಿ ಹೋಗುವಂತೆ ಸಮಂತಾ ಅವರಿಗೆ ನಾಗಾರ್ಜುನ ಬಲವಂತ ಮಾಡಿದಾಗ, ಅದನ್ನು ಒಪ್ಪಿಕೊಂಡಿರಲಿಲ್ಲ. ಈ ವಿಚಾರ ವಿಚ್ಛೇದನಕ್ಕೆ ಕಾರಣವಾಯಿತು” ಎಂದಿದ್ದಾರೆ.
ಸಚಿವೆಯ ಈ ಹೇಳಿಕೆ ತೆಲಂಗಾಣದ ರಾಜಕೀಯ ಮತ್ತು ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ನಟ ನಾಗಾರ್ಜುನ “ಸಚಿವೆ ಕೊಂಡಾ ಸುರೇಖಾ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯದಿಂದ ದೂರು ಇರುವ ಚಿತ್ರ ತಾರೆಯರನ್ನು ನಿಮ್ಮ ವಿರೋಧಿಗಳನ್ನು ಟೀಕಿಸುವುದಕ್ಕಾಗಿ ಬಳಸಿಕೊಳ್ಳಬೇಡಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೇರೆಯವರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಮಹಿಳೆಯಾಗಿ ನಮ್ಮ ಕುಟುಂಬದ ವಿರುದ್ದದ ನಿಮ್ಮ ಹೇಳಿಕೆಗಳು ಹಾಗೂ ಆರೋಪಗಳು ಅಸಂಬದ್ಧ ಹಾಗೂ ಸುಳ್ಳು, ಕೂಡಲೇ ಈ ಹೇಳಿಕೆಗಳನ್ನು ಹಿಂಪಡೆಯುವಂತೆ ನಿಮ್ಮಲ್ಲಿ ಮನವಿ ಮಾಡುವೆ” ಎಂದೂ ಹೇಳಿದ್ದಾರೆ.
గౌరవనీయ మంత్రివర్యులు శ్రీమతి కొండా సురేఖ గారి వ్యాఖ్యలని తీవ్రంగా ఖండిస్తున్నాను. రాజకీయాలకు దూరంగా ఉండే సినీ ప్రముఖుల జీవితాలని, మీ ప్రత్యర్ధులని విమర్శించేందుకు వాడుకోకండి. దయచేసి సాటి మనుషుల వ్యక్తిగత విషయాలని గౌరవించండి. బాధ్యత గలిగిన పదవి లో ఉన్న మహిళగా మీరు చేసిన…
— Nagarjuna Akkineni (@iamnagarjuna) October 2, 2024
ನಟಿ ಸಮಂತಾ ಕೂಡ ಸಚಿವೆಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ತನ್ನ ಹೆಸರನ್ನು ರಾಜಕೀಯದಿಂದ ದೂರ ಇಡುವಂತೆ ಕೋರಿದ್ದಾರೆ. ಅಲ್ಲದೆ, ಮಹಿಳೆ ಹೊರಗೆ ಬಂದು ಕೆಲಸ ಮಾಡಲು ಸಾಕಷ್ಟಯ ಧೈರ್ಯ ಮತ್ತು ಶಕ್ತಿ ಬೇಕಾಗುತ್ತದೆ ಎಂದು ವಿವರಿಸಿದ್ದಾರೆ.
ಲೀಗಲ್ ನೋಟಿಸ್ ಕಳುಹಿಸಿದ ಕೆಟಿಆರ್
ಸಚಿವೆಯ ಹೇಳಿಕೆ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದಿರುವ ಕೆಟಿಆರ್, “ಇಂತಹ ಹೇಳಿಕೆ ನೀಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಿದ್ದಾರೆ” ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಸಚಿವೆ ಸುರೇಖಾ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. 24 ಗಂಟೆಯೊಳಗೆ ಹೇಳಿಕೆ ಹಿಂಪಡೆಯದೆ ಇದ್ದರೆ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
మూసి మురికి అంతా వాళ్ల నోట్లోనే…
ఇంకా శుద్ధి ఎందుకు.. లక్షన్నర కోట్లు ఖర్చు ఎందుకు?
Served legal notices to the Minister; Disgusting & Nauseating politics by Congress
Request @RahulGandhi to send your Minister & CM to a mental health specialist or a rehabilitation… pic.twitter.com/cL8AI1RqHk
— KTR (@KTRBRS) October 2, 2024
ಇದನ್ನೂ ಓದಿ : ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್


