Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್‌ಗೆ ಇಡಿ ಸಮನ್ಸ್

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್‌ಗೆ ಇಡಿ ಸಮನ್ಸ್

- Advertisement -
- Advertisement -

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌(ಹೆಚ್‌ಸಿಎ)ನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ತಂಡದ ಮಾಜಿ ನಾಯಕ, ಕಾಂಗ್ರೆಸ್ ರಾಜಕಾರಣಿ ಮೊಹಮ್ಮದ್ ಅಜರುದ್ದೀನ್‌ ಅವರಿಗೆ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಗುರುವಾರ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 3 ರಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ ಎಂದು ಮೂಲಗಳು ಉಲ್ಲೇಖಿಸಿವೆ. ಆದರೆ ಅವರು ಇಡಿ ಮುಂದೆ ಹಾಜರಾಗಿಲ್ಲ ಮತ್ತು ಹೆಚ್ಚಿನ ಸಮಯ ಕೇಳಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಇಡಿ ದಾಖಲಿಸಿದ್ದ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌(ಹೆಚ್‌ಸಿಎ)ನಲ್ಲಿನ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಈ ತನಿಖೆಯು ಸಂಬಂಧಿಸಿದೆ.

ಇದನ್ನೂಓದಿ: ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ಹೆಚ್‌ಸಿಎಯ 20 ಕೋಟಿ ರೂಪಾಯಿಗಳ ಹಣ ಕ್ರಿಮಿನಲ್ ದುರುಪಯೋಗಕ್ಕೊಳಗಾಗಿದೆ ಎಂದು ಆರೋಪಿಸಿ ತೆಲಂಗಾಣ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರು ಎಫ್‌ಐಆರ್‌ಗಳು ದಾಖಲಿಸಿ ಚಾರ್ಜ್ ಶೀಟ್‌ ಸಲ್ಲಿಸಿತ್ತು. ಈ ಮೂರು ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ತನಿಖೆಯನ್ನು ಪ್ರಾರಂಭಿಸಿತ್ತು.

ಎಚ್‌ಸಿಎ ಮಾಜಿ ಅಧ್ಯಕ್ಷರೂ ಆಗಿರುವ ಅಜರ್ 2019 ರಿಂದ 2022 ರವರೆಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪ ಹೊರಿಸಲಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂಗಾಗಿ ಡೀಸೆಲ್ ಜನರೇಟರ್‌ಗಳು, ಅಗ್ನಿಶಾಮಕ ವ್ಯವಸ್ಥೆಗಳು ಮತ್ತು ಕ್ಯಾನೋಪಿಗಳ ಖರೀದಿಗೆ ಮಂಜೂರು ಮಾಡಿದ 20 ಕೋಟಿಯನ್ನು ದುರುಪಯೋಗಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಹೆಚ್‌ಸಿಎ ಪದಾಧಿಕಾರಿಗಳಾದ, ಅದರ ಆಗಿನ ಕಾರ್ಯದರ್ಶಿ, ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇತರ ಖಾಸಗಿ ಜನರೊಂದಿಗೆ ಸೇರಿ ಏಕಪಕ್ಷೀಯವಾಗಿ ಹೆಚ್ಚಿನ ಮಾರುಕಟ್ಟೆ ದರದಲ್ಲಿ ಆದ್ಯತೆಯ ಗುತ್ತಿಗೆದಾರರಿಗೆ ವಿವಿಧ ಟೆಂಡರ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. ಸಂಬಂಧಪಟ್ಟವರು ಸರಿಯಾದ ಟೆಂಡರ್ ಪ್ರಕ್ರಿಯೆಗಳನ್ನು ಅನುಸರಿಸದೆ ಮುಂದುವರೆದಿದ್ದು, ಮುಂಗಡ ಪಾವತಿಯನ್ನು ಸಹ ಕೆಲಸ ಮಾಡದೆಯೇ ಹಲವರಿಗೆ ನೀಡಲಾಗಿದೆ ಎಂದು ಅದು ಹೇಳಿದೆ.ಮೊಹಮ್ಮದ್ ಅಜರುದ್ದೀನ್‌

ಇದನ್ನೂಓದಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...