Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ವಂದೇ ಭಾರತ್ ಎಕ್ಸ್‌ಪ್ರೆಸ್ ಕಿಟಕಿಯನ್ನು ಸುತ್ತಿಗೆಯಿಂದ ಹೊಡೆದುಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ”ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಹೊಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಅಮಿತ್‌ ಸನಾತನಿ ಎಂಬ ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು,  ಮುಸ್ಲಿಂ ಜಿಹಾದಿಗಳು ವಂದೇ ಭಾರತ್‌ ರೈಲಿಗೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ವಿಡಿಯೋದಲ್ಲಿ ರೈಲಿನ ಗಾಜು ಹೊಡೆಯುತ್ತಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವನೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಂದೇ ಭಾರತ್‌ ರೈಲಿಕ ಕಿಟಕಿ ಗಾಜನ್ನು ಸುತ್ತಿಗೆಯಿಂದ ಹೊಡೆಯುತ್ತಿರುವ ವ್ಯಕ್ತಿ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಅವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಈ ಪೋಸ್ಟ್ ‌ಗಳ ಪ್ರಕಾರ ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಈ ಗಾಜುಗಳನ್ನು ಒಡೆಯಲಾಗಿಲ್ಲ‌, ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂಬುದು ತಿಳಿದು ಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, 10 ಸೆಪ್ಟೆಂಬರ್ 2024  ರಂದು ಅಪ್‌ಲೋಡ್ ಮಾಡಿದ ಇನ್‌ಸ್ಟಾಗ್ರಾಂ ಸ್ಟೋರಿ ಲಭ್ಯವಾಗಿದೆ. ಇದೇ ರೀತಿ ರೈಲಿಗೆ ಸಂಬಂಧ ಪಟ್ಟಂತೆ ಹಲವು ರೀಲ್ಸ್‌ಗಳು ಅವರ ಖಾತೆಯಲ್ಲಿ ಕಂಡು ಬಂದಿದೆ. ಹೀಗಾಗಿ ಹಲವು ಮಾಧ್ಯಮ ಸಂಸ್ಥೆಗಳು ಅವರನ್ನು ಸಂಪರ್ಕಿಸಿದಾಗ ಅವರು ತಮ್ಮ ಹೆಸರು ಮನೀಶ್ ಕುಮಾರ್ ಮತ್ತು ತಾನು ಬಿಹಾರದ ಅರ್ರಾ ನಿವಾಸಿ ಎಂದು ತಿಳಿಸಿದ್ದಾರೆ. ಪ್ರಸ್ತುತ ಅಹಮದಾಬಾದ್‌ನಲ್ಲಿ ಮತ್ತು ರೈಲ್ವೆಯಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ವೈರಲ್ ವಿಡಿಯೋಗಳ ಕುರಿತು ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿದ್ದರಿಂದ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ‌ ಎಂದು ತಿಳಿದು ಬಂದಿದೆ.

ವಂದೇ ಭಾರತ್ ರೈಲಿನ ಕಿಟಕಿ ಗಾಜನ್ನು ಮುಸ್ಲಿಂ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಒಡೆದಿದ್ದಾನೆ ಎನ್ನಲಾದ ವಿಡಿಯೋವನ್ನು ಮತ್ತಷ್ಟು ಪರಿಶೀಲಿಸಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

” ವೈರಲ್‌ ವಿಡಿಯೋದಲ್ಲಿರುವ ವ್ಯಕ್ತಿ ಗಾಜನ್ನು ಬದಲಾಯಿಸಲು, ಈಗಿರುವ ಗಾಜನ್ನು ಒಡೆದು ತೆಯುತ್ತಾರೆ. ಇದು ಗಾಜು ಬದಲಾಯಿತು ಪ್ರಕ್ರಿಯೆಯಾಗಿದೆ. ಗಾಜುಗಳು ರೈಲಿಗೆ ಭೀಗಿಯಾಗಿ ಅಳವಡಿಸಿರುವುದರಿಂದ ಅವುಗಳನ್ನು ಹೀಗೆ ಸುತ್ತಿಗೆಯಲ್ಲಿ ಒಡೆದು ತೆಗೆಯಲಾಗುತ್ತದೆ.” ಎಂದು ಮಾಹಿತಿಯನ್ನು ನೀಡಿರುವುದು ಕಂಡು ಬಂದಿದೆ.

ಈಗಾಗಲೇ ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಒಡೆದು ಹಾಕಲಾಗುತ್ತಿದೆ ಎಂಬ ಅಂಶವನ್ನು ರೈಲ್ವೇ ಅಧಿಕಾರಿಯೂ ದೃಢಪಡಿಸಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ ಎಂದು ದೃಢಪಡಿಸಿದ್ದಾರೆ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಗುಪ್ತಾ ಎಂಬುವವರು ಹಾಳಾಗಿದ್ದ ಕಿಟಕಿ ಗಾಜನ್ನು ಬದಲಾಯಿಸಲು ಸುತ್ತಿಗೆಯಿಂದ ಒಡೆಯುತ್ತಿರುವ ವಿಡಿಯೋವನ್ನು, ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...