Homeಮುಖಪುಟಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಟ್ರಕ್-ಟ್ರಾಕ್ಟರ್ ಡಿಕ್ಕಿಯಿಂದ 10 ಮಂದಿ ಕಾರ್ಮಿಕರು ಸಾವು, ಮೂವರಿಗೆ ಗಾಯ

ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಟ್ರಕ್-ಟ್ರಾಕ್ಟರ್ ಡಿಕ್ಕಿಯಿಂದ 10 ಮಂದಿ ಕಾರ್ಮಿಕರು ಸಾವು, ಮೂವರಿಗೆ ಗಾಯ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಿನ್ನೆ ತಡರಾತ್ರಿ ಟ್ರ್ಯಾಕ್ಟರ್-ಟ್ರೇಲರ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಹತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಚ್ವಾ ಗಡಿ ಬಳಿ ಸಂಭವಿಸಿದ ಅಪಘಾತದಲ್ಲಿ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ ಟ್ರೈಲರ್ ವಾರಣಾಸಿ ಕಡೆಗೆ 13 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದಾಗ ಟ್ರಕ್ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಧ್ಯರಾತ್ರಿ 1 ಗಂಟೆ ಸುಮಾರಿಗೆ, ಕಚ್ವಾ ಗಡಿ, ಜಿಟಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. 13 ಜನರಿದ್ದ ಟ್ರ್ಯಾಕ್ಟರ್ ವಾರಣಾಸಿ ಕಡೆಗೆ ಹೋಗುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿದೆ. 13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ. ಗಾಯಾಳುಗಳಿಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

13 ದಿನಗೂಲಿ ಕಾರ್ಮಿಕರು ಭದೋಹಿ ಜಿಲ್ಲೆಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಅವರು ವಾರಣಾಸಿಯ ತಮ್ಮ ಗ್ರಾಮವಾದ ಮಿರ್ಜಾಮುರಾದ್‌ಗೆ ತೆರಳಿದರು ಎಂದು ಸಿಂಗ್ ಹೇಳಿದರು.

ಮೃತ ದೇಹಗಳನ್ನು ಶವಾಗಾರಕ್ಕೆ ಕಳುಹಿಸಲಾಗಿದ್ದು, ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಟೇಲ್ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಅಮೇಥಿಯಲ್ಲಿ ದಲಿತ ಕುಟುಂಬದ ನಾಲ್ವರನ್ನು ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗದಲ್ಲಿ ಆಡಳಿತಾತ್ಮಕ ಭಿನ್ನಮತ: ಆರ್‌ಟಿಐ ದಾಖಲೆಗಳಿಂದ ಬಯಲಾಯ್ತು ಆಂತರಿಕ ಸಂಘರ್ಷ!

ಭಾರತೀಯ ಚುನಾವಣಾ ಆಯೋಗದ ಉನ್ನತ ಆಡಳಿತಾತ್ಮಕ ಮಟ್ಟದಲ್ಲಿ ಮೂಡಿದ್ದ ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಕಚೇರಿಯ ಅಧಿಕಾರ ಹಂಚಿಕೆ ಕುರಿತಾದ ಸಂಘರ್ಷಗಳು ಈಗ ಆರ್‌ಟಿಐ ದಾಖಲೆಗಳ ಮೂಲಕ ಅಧಿಕೃತವಾಗಿ ಬಹಿರಂಗಗೊಂಡಿವೆ. ಆಯೋಗದ ಹಿರಿಯ ಅಧಿಕಾರಿಯೊಬ್ಬರು...

‘ಪ್ರತಿ ಗಲ್ಲಿಯೂ ಜಂತರ್ ಮಂತರ್..’; ಎಸ್‌ಐಆರ್‌ ವಿರುದ್ಧ ಅ.23ರಂದು ದೇಶಾದ್ಯಂತ ಪ್ರತಿಭಟನೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರನ್ನು ಸಂಸತ್ತಿನ ಮೂಲಕ ಪದಚ್ಯುತಗೊಳಿಸಬೇಕು ಹಾಗೂ "ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು" ಎಂದು ಆಗ್ರಹಿಸಿ "ಪೀಪಲ್‌...

SIR ಅಂತಿಮ ಪಟ್ಟಿಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳಲ್ಲಿ ಬದಲಾವಣೆ : ಯುಪಿಯಲ್ಲಿ ಮತಗಳ್ಳತನದ ಹೊಸ ಸಂಚು ಬೆಳಕಿಗೆ; ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಉತ್ತರ ಪ್ರದೇಶದ ಪಿಲಿಭಿತ್ ವಿಧಾನಸಭಾ ಕ್ಷೇತ್ರದ ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ (ಅಕ್ಟೋಬರ್ 21) ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೂಚಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಮತದಾರರ ಗುರುತಿನ...

ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ ಮೆರವಣಿಗೆ; ಎಸ್‌ಐಆರ್ ವಿರೋಧಿ ಪ್ರತಿಭಟನೆ ನಿಮ್ಮೂರಲ್ಲೆಲ್ಲಿ ಗೊತ್ತಾ?

ಎಸ್ಐಆರ್ ರದ್ದುಪಡಿಸುವಂತೆ ಆಗ್ರಹಿಸಿ ಹಾಗೂ ನವದೆಹಲಿಯ 'ಜಂತರ್ ಮಂತರ್' ಮೈದಾನದಲ್ಲಿ ಪ್ರತಿಭಟನೆ ಮಾಡದಂತೆ ನಿರ್ಬಂಧಿಸಿರುವ ದೆಹಲಿ ಪೊಲೀಸರ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ದೇಶದಾದ್ಯಂತ ಜನಪರ ಸಂಘಟನೆಗಳು ಏಕಕಾಲದಲ್ಲಿ 'ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ...

‘ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..’; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ ಝೆಲೆನ್‌ಸ್ಕಿ?

ರಷ್ಯಾದೊಂದಿಗಿನ ಶಾಂತಿ ಒಪ್ಪಂದದ ಭಾಗವಾಗಿ ಪ್ರಸ್ತುತ ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಲು ಸಿದ್ಧವಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. 2022ರ ಫೆಬ್ರವರಿಯಲ್ಲಿ ಆರಂಭವಾದ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ...

ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ...

ಸಿಇಸಿ ಗ್ಯಾನೇಶ್ ಕುಮಾರ್ ಸಹೋದರನ ನೇತೃತ್ವದ ದೆಹಲಿ ಕಸ್ಟಮ್ಸ್‌ನಲ್ಲಿ ಪಂಜಾಬ್‌ ಮುಖ್ಯಮಂತ್ರಿಯನ್ನು ತಡೆದು ದಂಡ ವಿಧಿಸಲಾಯಿತೇ?

ಪ್ರಸ್ತುತ ಇಡೀ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಸಹೋದರ ಮನೀಶ್ ಕುಮಾರ್ ಮುಖ್ಯ ಆಯುಕ್ತರಾಗಿರುವ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ...

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...