Homeಮುಖಪುಟ'ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ' ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

- Advertisement -
- Advertisement -

ಆನ್‌ಲೈನ್ ಮೂಲಕ ನಡೆಯುವ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ. ಆದರೆ, ಅಂತಹ ಒಂದು ವಂಚನೆಯ ಪ್ರಯತ್ನವು ಮಹಿಳೆಯ ಜೀವವನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗಿದೆ.

ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಎಂದು ಹೇಳಲಾದ ವ್ಯಕ್ತಿಯಿಂದ ಸೋಮವಾರ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ಕಾಲೇಜಿಗೆ ಹೋಗುತ್ತಿರುವ ನಿಮ್ಮ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ವ್ಯಕ್ತಿ ಶಿಕ್ಷಕಿಗೆ ತಿಳಿಸಿದ್ದು, ಹಣ ನೀಡಿದರೆ ಮನೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ.

ಮೃತ ಮಹಿಳೆ ವರ್ಮಾ ಅವರ ಮಗ ದೀಪಾಂಶು ಮಾತನಾಡಿ, “ಮಧ್ಯಾಹ್ನದ ವೇಳೆಗೆ ತಾಯಿಗೆ ಕರೆ ಬಂದಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು ₹1 ಲಕ್ಷವನ್ನು ನಿರ್ದಿಷ್ಟ ಖಾತೆಗೆ ಜಮಾ ಮಾಡುವಂತೆ ಆ ವ್ಯಕ್ತಿ ಕೇಳಿದ್ದಾನೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಹೇಳಿದ್ದಾರೆ.

“ನಿಮ್ಮ ಮಗಳು ಸೆಕ್ಸ್ ರಾಕೆಟ್ ಸಂಬಂಧಿತ ಪ್ರಕರಣದಲ್ಲಿ ಸಿಲುಕಿರುವ ವಿಚಾರದಿಂದ ಕುಟುಂಬ ಆಘಾತಕ್ಕೆ ಒಳಗಾಗಬಾರು ಎಂಬ ಕಾರಣಕ್ಕೆ ನಾನು ನಿಮಗೆ ಕರೆ ಮಾಡುತ್ತಿದ್ದೇನೆ” ಎಂದು ಆ ವ್ಯಕ್ತಿ ಎಂಎಸ್ ವರ್ಮಾಗೆ ತಿಳಿಸಿದ್ದಾನೆ.

“ನನ್ನ ತಾಯಿ ಆಗ್ರಾದ ಅಚ್ನೇರಾದಲ್ಲಿರುವ ಸರ್ಕಾರಿ ಬಾಲಕಿಯರ ಜೂನಿಯರ್ ಹೈಸ್ಕೂಲ್‌ನಲ್ಲಿ ಪಾಠ ಮಾಡುತ್ತಿದ್ದರು. ಆ ವ್ಯಕ್ತಿಯಿಂದ ಕರೆ ಬಂದ ನಂತರ ಅವರು ಗಾಬರಿಗೊಂಡು ನನಗೆ ಕರೆ ಮಾಡಿದರು. ಅವರು ಕರೆ ಸ್ವೀಕರಿಸಿದ ಸಂಖ್ಯೆಯನ್ನು ನಾನು ಕೇಳಿದೆ. ನಾನು ಸಂಖ್ಯೆಯನ್ನು ಪರಿಶೀಲಿಸಿದಾಗ , ಇದು +92 ಕೋಡ್ ಹೊಂದಿದೆ ಎಂದು ನಾನು ಕಂಡುಕೊಂಡೆ. ನನ್ನ ತಾಯಿ ತುಂಬಾ ಆತಂಕದಲ್ಲಿದ್ದರು. ಸಾಕಷ್ಟು ಅಸ್ವಸ್ಥರಾಗಿದ್ದರು” ಎಂದು ದೀಪಾಂಶು ಹೇಳಿದರು.

“ನಾನು ಸಹೋದರಿಯೊಂದಿಗೆ ಮಾತನಾಡಿದ್ದು, ಆಕೆ ಕಾಲೇಜಿನಲ್ಲಿ ಸುರಕ್ಷಿತವಾಗಿದ್ದಾಳೆ ಎಂದು ನಾನು ತಾಯಿಯನ್ನು ಸಮಾಧಾನಪಡಿಸಿದೆ. ಆದರೂ ಅವರ ಆರೋಗ್ಯ ಹದಗೆಡುತ್ತಲೇ ಇತ್ತು. ಆಕೆ ಶಾಲೆಯಿಂದ ಹಿಂತಿರುಗಿದಾಗ, ಎದೆಯಲ್ಲಿ ಸ್ವಲ್ಪ ನೋವು ಅನುಭವಿಸುತ್ತಿರುವುದಾಗಿ ಹೇಳಿದರು. ನಾವು ಆಕೆಗೆ ಕುಡಿಯಲು ನೀರು ಕೊಟ್ಟ ನಂತರ ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತು.. ಸ್ವಲ್ಪ ಹೊತ್ತಿನ ಬಳಿಕ ಅವರು ಪ್ರಾಣಬಿಟ್ಟರು” ಎಂದು ಅವರು ನಡೆದ ಘಟನೆ ಬಗ್ಗೆ ವಿವರಿಸಿದರು.

ಮೃತ ಶಿಕ್ಷಕಿಯ ಕುಟುಂಬದವರು ಗುರುವಾರ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ತಿಳಿಸಿದ್ದಾರೆ.

ವರ್ಮಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ, ಇದಕ್ಕೆ ಕಾರಣ, ತನ್ನ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿಸುವ ಕರೆ ಬಂದಿತ್ತು ಎಂಬುದು. ಕರೆ ಮಾಡಿದವರು ₹1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಅವರ ಪತಿ ಹೇಳಿದ್ದಾರೆ. ಇದರಿಂದ ಆಕೆ ಚಿಂತಿತಳಾದಳು ಮತ್ತು ಆಕೆಯನ್ನು ಮಂಗಳವಾರ ಮನೆಗೆ ತಲುಪಿದ 15 ನಿಮಿಷಗಳ ನಂತರ ನಾವು ಈ ಕರೆಯನ್ನು ಸ್ವೀಕರಿಸಿದ್ದೇವೆ, ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ; ಪುಣೆ: ಶಾಲಾ ವ್ಯಾನ್‌ನಲ್ಲಿ 6 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...