Homeಅಂತರಾಷ್ಟ್ರೀಯ''ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ" | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

”ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ” | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ತಮ್ಮ ಅಪರೂಪದ ಶುಕ್ರವಾರದ ಭಾಷಣದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್‌ ಮತ್ತು ಲೆಬನಾನಿನ ಚಳುವಳಿಗಳನ್ನು ಬೆಂಬಲಿಸಿದ್ದು, “ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಟೆಹ್ರಾನ್‌ನ ಮಸೀದಿಯೊಂದರಲ್ಲಿ ಹತ್ತಾರು ಸಾವಿರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಇಸ್ರೇಲ್ ಮೇಲೆ ಇರಾನ್‌ನ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಮಾಸ್ ಅಥವಾ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಮೇಲುಗೈ ಸಾಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. “ನಾವು ನಿಮ್ಮೊಂದಿಗಿದ್ದೇವೆ” ಎಂಬ ಅವರ ಘೋಷಣೆಯು ವಿಶಾಲವಾದ ಮಸೀದಿ ಮೈದಾನದಲ್ಲಿ ಪ್ರತಿಧ್ವನಿಸಿದವು.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ಕಳೆದ ಐದು ವರ್ಷಗಳಲ್ಲಿ ಇದು ಖಮೇನಿ ಅವರ ಮೊದಲ ಶುಕ್ರವಾರದ ಧರ್ಮೋಪದೇಶ ಭಾಷಣವಾಗಿದೆ. ಅವರ ಜೀವಕ್ಕೆ ಇರುವ ಬೆದರಿಕೆಗಳ ನಡುವೆಯು ಅವರು ಪ್ರತಿಭಟನೆಯ ಭಾಗವಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳವಾರ ಇರಾನ್ ಹಾರಿಸಿದ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದ್ದು, ಖಮೇನಿಯನ್ನು ಪ್ರಮುಖ ಗುರಿಯಾಗಿಸಿದೆ.

ಇದನ್ನೂಓದಿ: ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ಖಮೇನಿ ತಮ್ಮ ಭಾಷಣದಲ್ಲಿ ಕಳೆದ ವಾರ ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಇರಾನ್ ಬೆಂಬಲಿತ ಲೆಬನಾನ್ ಬಂಡುಕೋರ ಗುಂಪಿನ ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಶ್ಲಾಘಿಸಿದ್ದಾರೆ.

“ಸಯ್ಯದ್ ಹಸನ್ ನಸ್ರಲ್ಲಾ ಅವರು ಇನ್ನು ಮುಂದೆ ನಮ್ಮೊಂದಿಗಿಲ್ಲ, ಆದರೆ ಅವರ ಆತ್ಮ ಮತ್ತು ಅವರ ಮಾರ್ಗವು ನಮ್ಮನ್ನು ಶಾಶ್ವತವಾಗಿ ಪ್ರೇರೇಪಿಸುತ್ತದೆ. ಅವರು ಝಿಯೋನಿಸ್ಟ್ ಶತ್ರುಗಳ ವಿರುದ್ಧ ಉನ್ನತ ಧ್ವಜವಾಗಿದ್ದರು. ಅವರ ಹುತಾತ್ಮತೆಯು ಈ ಪ್ರಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಹೆಜ್ಬೊಲ್ಲಾ ಸಂಘಟನೆಯನ್ನು ನಸ್ರಲ್ಲಾ ಅವರ ನಾಯಕತ್ವದಲ್ಲಿ ಸ್ಥಿರವಾಗಿ ಬೆಳೆದ “ಆಶೀರ್ವಾದದ ಮರ” ಎಂದು ಖಮೇನಿ ಅವರು ಬಣ್ಣಿಸಿದ್ದಾರೆ. “ಲೆಬನಾನ್‌ನ ರಕ್ತಸಿಕ್ತ ಜನರಿಗೆ ಸಹಾಯ ಮಾಡುವುದು ಮತ್ತು ಲೆಬನಾನ್‌ನ ಜಿಹಾದ್ ಮತ್ತು ಅಲ್-ಅಕ್ಸಾ ಮಸೀದಿಗಾಗಿ ಯುದ್ಧವನ್ನು ಬೆಂಬಲಿಸುವುದು ಎಲ್ಲಾ ಮುಸ್ಲಿಮರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ” ಎಂದು ಅವರು ಘೋಷಿಸಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಪ್ಯಾಲೆಸ್ತೀನಿ ಹಮಾಸ್ ಗುಂಪನ್ನು ಬೆಂಬಲಿಸಿರುವ ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ, ಇಸ್ರೇಲ್ ಮೇಲೆ ಹಮಾಸ್ ನಡೆಸಿದ್ದ ಅಕ್ಟೋಬರ್ 7 ರ ದಾಳಿಯನ್ನು “ಸರಿಯಾದ ಕ್ರಮ” ಎಂದು ಕರೆದಿದ್ದಾರೆ.

“ಜಿಯೋನಿಸ್ಟ್‌ಗಳು ಮತ್ತು ಅಮೆರಿಕನ್ನರು ಕನಸು ಕಾಣುತ್ತಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ಝಿಯೋನಿಸ್ಟ್ ಘಟಕವನ್ನು ನೆಲದಿಂದ ಕಿತ್ತುಹಾಕಲಾಗುತ್ತದೆ. ಅದಕ್ಕೆ ಯಾವುದೆ ಬೇರುಗಳಿಲ್ಲ, ಅದು ನಕಲಿಯಾಗಿದ್ದು, ಅಸ್ಥಿರವಾಗಿದೆ ಮತ್ತು ಅಮೇರಿಕದ ಬೆಂಬಲದಿಂದ ಮಾತ್ರ ಅಸ್ತಿತ್ವದಲ್ಲಿದೆ” ಎಂದು ಖಮೇನಿ ಹೇಳಿದ್ದಾರೆ.

ಇರಾನ್‌ನಲ್ಲಿ ಅತ್ಯುನ್ನತ ಅಧಿಕಾರವನ್ನು ಹೊಂದಿರುವ ಸರ್ವೋಚ್ಚ ನಾಯಕ ಖಮೇನಿ ಅವರು ಐದು ವರ್ಷಗಳ ಹಿಂದೆ ಕೊನೆಯ ಶುಕ್ರವಾರದಂದು ಭಾಷಣ ಮಾಡಿದ್ದರು. ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಮಾಂಡರ್ ಖಾಸೆಮ್ ಸೊಲೈಮಾನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಇರಾಕ್‌ನಲ್ಲಿರುವ ಯುಎಸ್ ಸೇನಾ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ ಅವರು ಕೊನೆಯದಾಗಿ ಜನವರಿ 2020 ರಲ್ಲಿ ಶುಕ್ರವಾರದಂದು ಸಾರ್ವಜನಿಕವಾಗಿ ಭಾಷಣ ಮಾಡಿದ್ದರು.

ಇರಾನ್ ತನ್ನ ದೇಶದ ದಕ್ಷಿಣ ಮತ್ತು ಉತ್ತರದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಹಮಾಸ್ ಮತ್ತು ಹೆಜ್ಬೊಲ್ಲಾ ಎರಡನ್ನೂ ಬೆಂಬಲಿಸುತ್ತದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...