ಸರ್ಕಾರದ ಟೀಕೆ ಎಂದು ಭಾವಿಸಲಾಗುವ ಬರಹಗಳು ಇದ್ದ ಮಾತ್ರಕ್ಕೆ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಒತ್ತಿಹೇಳಿದೆ. ಸರ್ಕಾರವನ್ನು ಟೀಕಿಸುವ
“ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ, ಪ್ರತಿಯೊಬ್ಬರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಗೌರವಿಸಲಾಗುತ್ತದೆ ಮತ್ತು ಪತ್ರಕರ್ತರ ಹಕ್ಕುಗಳನ್ನು ಸಂವಿಧಾನದ 19 (1) (ಎ) ಅಡಿಯಲ್ಲಿ ರಕ್ಷಿಸಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು, ‘ರಾಜ್ಯದಲ್ಲಿ ಸಾಮಾನ್ಯ ಆಡಳಿತದ ಜಾತಿ ಡೈನಾಮಿಕ್ಸ್’ ಕುರಿತ ಸುದ್ದಿ ವರದಿಯನ್ನು ಪ್ರಕಟಿಸಿದ ಆರೋಪದಲ್ಲಿ ಉತ್ತರ ಪ್ರದೇಶದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂಓದಿ: ಪುಣೆ | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತನಿಗೆ ಮೇಲೆ ಹಲ್ಲೆ
ಪತ್ರಕರ್ತರ ಬರವಣಿಗೆಯನ್ನು ಸರ್ಕಾರದ ಟೀಕೆ ಎಂದು ಪರಿಗಣಿಸಿ, ಲೇಖಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ನ್ಯಾಯಾಲಯ ಹೇಳಿದೆ. ಪ್ರಕರಣದಲ್ಲಿ ಪ್ರತಿಕ್ರಿಯೆಯನ್ನು ಕೋರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.ಸರ್ಕಾರವನ್ನು ಟೀಕಿಸುವ
ಪತ್ರಕರ್ತ ಉಪಾಧ್ಯಾಯ ಅವರು ತಮ್ಮ ಬರಹಕ್ಕಾಗಿ ಲಕ್ನೋದಲ್ಲಿ ತಮ್ಮ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ನ ಸಿಂಧುತ್ವವನ್ನು ಪ್ರಶ್ನಿಸಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಅವರ ಪರ ವಾದಿಸಿದ ವಕೀಲ ಅನೂಪ್ ಪ್ರಕಾಶ್ ಅವಸ್ತಿ ಅವರು ಎಫ್‌ಐಆರ್‌ನಲ್ಲಿರುವ ವಿಷಯಗಳ ಪ್ರಕಾರ ಯಾವುದೇ ಅಪರಾಧವನ್ನು ಪತ್ರಕರ್ತ ಮಾಡಿಲ್ಲ ಎಂದು ಹೇಳಿದ್ದಾರೆ.
ಬರಹವೊಂದಕ್ಕೆ ಪತ್ರಕರ್ತ ಉಪಾಧ್ಯಾಯ ವಿರುದ್ಧ ಒಂದು ಎಫ್‌ಐಆರ್ ಬಗ್ಗೆ ಅವರಿಗೆ ತಿಳಿದಿದೆ. ಆದರೆ ಅದಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿರಬಹುದು ಎಂದು ಅವರ ವಕೀಲರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯ “ಈ ಮಧ್ಯೆ, ಲೇಖನಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು” ಎಂದು ಪೀಠ ಹೇಳಿದೆ. ಈ ಮೂಲಕ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದು, ಬಂಧನ ನಡೆಸಬಾರದು ಎಂದು ಹೇಳಿದೆ.
ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು


