Homeಮುಖಪುಟ'ರೈಲ್ವೇ ಖಾಸಗೀಕರಣದ ಪ್ರಶ್ನೆಯೆ ಇಲ್ಲ!' - ಸಚಿವ ಅಶ್ವಿನಿ ವೈಷ್ಣವ್

‘ರೈಲ್ವೇ ಖಾಸಗೀಕರಣದ ಪ್ರಶ್ನೆಯೆ ಇಲ್ಲ!’ – ಸಚಿವ ಅಶ್ವಿನಿ ವೈಷ್ಣವ್

- Advertisement -
- Advertisement -

ರೈಲ್ವೇಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದು, ರೈಲು ಸಾರಿಗೆಯು ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆಯನ್ನು ಒದಗಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. “400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಲೋಮೀಟರ್‌ಗಳವರೆಗೆ ಜನರು ಆರಾಮವಾಗಿ ಪ್ರಯಾಣಿಸಬಹುದೆಂದು ಖಚಿತಪಡಿಸಿಕೊಳ್ಳಲು ರೈಲ್ವೆ ಕಾರ್ಯನಿರ್ವಹಿಸುತ್ತಿದೆ. ಜನರ ಅನುಕೂಲಕ್ಕಾಗಿ 12,500 ಸಾಮಾನ್ಯ ದರ್ಜೆಯ ಕೋಚ್‌ಗಳನ್ನು ರೈಲ್ವೆ ತಯಾರಿಸಲಾಗುತ್ತಿದೆ” ಎಂದು ಅಶ್ವಿನಿ ಹೇಳಿದ್ದಾರೆ.ರೈಲ್ವೇ ಖಾಸಗೀಕರಣದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮುಂದಿನ ಐದು ವರ್ಷಗಳಲ್ಲಿ ರೈಲ್ವೇ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ‘ಕವಚ’ ಎಂಬ ಘರ್ಷಣೆ-ನಿರೋಧಕ ಸಾಧನವನ್ನು ಹೊಂದಿದ ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಈ ಬದಲಾವಣೆಗೆ ಕಾರಣವಾಗುತ್ತವೆ. ಇದು ಈಗ ಪ್ರಾರಂಭವಾಗಿದೆ” ಎಂದು ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ರೈಸಿಂಗ್ ಡೇ ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು.

”ರೈಲ್ವೆಯ ಖಾಸಗೀಕರಣದ ಪ್ರಶ್ನೆಯೇ ಇಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರು ರೈಲ್ವೇ ಮತ್ತು ರಕ್ಷಣೆ ಭಾರತದ ಎರಡು ಬೆನ್ನೆಲುಬುಗಳು ಎಂಬುದನ್ನು ನೆನಪಿಟ್ಟುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಮತ್ತು ಈ ರೀತಿಯ ಎಲ್ಲಾ ರಾಜಕೀಯದಿಂದ ದೂರವಿರಬೇಕು”  ಎಂದು ವೈಷ್ಣವ್ ಹೇಳಿದ್ದಾರೆ.

ಭಾರತೀಯ ರೈಲ್ವೆಯಾದ್ಯಂತ ಪರಿವರ್ತನೆಯ ಯುಗ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೇ ರಾಜಕೀಯದ ಯುಗವನ್ನು ಕೊನೆಗೊಳಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. “ನಾವು ಕಾರ್ಯಕ್ಷಮತೆ, ಸುರಕ್ಷತೆ, ತಂತ್ರಜ್ಞಾನ ಮತ್ತು ಎಲ್ಲರಿಗೂ ಕೈಗೆಟುಕುವ ಸೇವೆಯನ್ನು ಒದಗಿಸುವತ್ತ ಗಮನ ಹರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್

ಇವೆಲ್ಲವನ್ನೂ ಪೂರೈಸಲು ಮೋದಿ ಸರ್ಕಾರ ರೈಲ್ವೇ ಬಜೆಟ್‌ಗೆ ದೊಡ್ಡ ಒತ್ತು ನೀಡಿದ್ದು, ಪ್ರಸ್ತುತ ರೈಲ್ವೆ ಬಜೆಟ್ 2.5 ಲಕ್ಷ ಕೋಟಿ ರೂ. ಆಗಿದೆ. ಕಳೆದ 10 ವರ್ಷಗಳಲ್ಲಿ 31,000 ಕಿಲೋಮೀಟರ್‌ಗಳಷ್ಟು ಹೊಸ ಟ್ರ್ಯಾಕ್‌ಗಳನ್ನು ಹಾಕಿದ ದಾಖಲೆಯನ್ನು ನಾವು ನಿರ್ಮಿಸಿದ್ದೇವೆ, ಇದು ಫ್ರಾನ್ಸ್‌ನ ನೆಟ್‌ವರ್ಕ್‌ಗಿಂತ ಹೆಚ್ಚಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಕಳೆದ 10 ವರ್ಷಗಳ ಎನ್‌ಡಿಎ ಸರ್ಕಾರದ ಅವಧಿಯಲ್ಲಿ 40,000 ಕಿಮೀ ರೈಲು ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ. ಇದು ಕಳೆದ 60 ವರ್ಷಗಳಲ್ಲಿ ಮಾಡಿದ್ದಕ್ಕಿಂತ ದುಪ್ಪಟ್ಟು ಎಂದು ಅವರು ಹೇಳಿದ್ದಾರೆ. ಮುಂದಿನ ಆರು ವರ್ಷಗಳಲ್ಲಿ 3,000 ರೈಲು ಸೇವೆಗಳನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಕುರಿತು ಮಾತನಾಡಿದ ಅವರು, ಫೋರ್ಸ್‌ನ ವಲಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 35 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ, ಆದರೆ ಸೇವಾ ನಿಯಮಗಳು ಮತ್ತು ಬಡ್ತಿಗಳಿಗೆ ಸಂಬಂಧಿಸಿದ ಬೇಡಿಕೆಗಳು ಪರಿಗಣನೆಯಲ್ಲಿವೆ. ತಮಿಳುನಾಡಿನ ಆರ್‌ಪಿಎಫ್ ಶ್ವಾನದಳದ ವಲಯ ತರಬೇತಿ ಕೇಂದ್ರಕ್ಕೆ ಹೆಚ್ಚುವರಿಯಾಗಿ 5.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...