ಇ-ಶ್ರಮ್ ಪೋರ್ಟಲ್‌ನ ಅಡಿಯಲ್ಲಿ ಅರ್ಹರಾಗಿರುವ ವಲಸೆ ಕಾರ್ಮಿಕರು ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಪಡಿತರ ಚೀಟಿಗಳನ್ನು ಪರಿಶೀಲಿಸಲು ಮತ್ತು ನೀಡಲು ತನ್ನ ಹಿಂದಿನ ಆದೇಶಗಳನ್ನು ಅನುಸರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೊನೆಯ ಅವಕಾಶವನ್ನು ನೀಡಿದ್ದು, ಹಸಿದವರನ್ನು ಕಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮೇ 26, 2020 ರಂದು ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ದುಃಖಗಳ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದೆ ಈ ನಿರ್ದೇಶನ ನೀಡಿದೆ.
ಇ-ಶ್ರಮ್ ಪೋರ್ಟಲ್ ಅಡಿಯಲ್ಲಿ ಅರ್ಹರಾಗಿರುವ ವಲಸೆ ಕಾರ್ಮಿಕರು ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಪಡಿತರ ಚೀಟಿಗಳನ್ನು ಒದಗಿಸುವ ಅದರ ಹಿಂದಿನ ಆದೇಶಗಳನ್ನು ಪಾಲಿಸಲಾಗಿಲ್ಲ ಎಂದು ತಿಳಿದ ನಂತರ, ಈ ಆದೇಶವನ್ನು ಅನುಸರಿಸಲು ವಿಫಲವಾದರೆ, ಅನುಸರಣೆಗೆ ಕಾರಣವನ್ನು ವಿವರಿಸಲು ಆಹಾರ ಕಾರ್ಯದರ್ಶಿ ಅಥವಾ ರಾಜ್ಯಗಳಿಂದ ಸಂಬಂಧಿಸಿದ ಪ್ರಾಧಿಕಾರವನ್ನು ಕರೆಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.
ಅರ್ಹ ವ್ಯಕ್ತಿಗಳನ್ನು ಗುರುತಿಸಲಾಗಿ ಕೂಡಾ ಅವರಿಗೆ ಇನ್ನೂ ಪಡಿತರ ಚೀಟಿಗಳನ್ನು ನೀಡದೆ ಇರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ವಲಸೆ ಕಾರ್ಮಿಕರಿಗೆ ಪಡಿತರ ನೀಡಲು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸ್ವಯಂ ಪ್ರೇರಿತ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದ್ದರೂ, ಇ-ಶರ್ಮ್ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವ ಆದರೆ ಪಡಿತರ ಕಾರ್ಡ್ ಹೊಂದಿರದ ವಲಸೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಪಡಿತರ ಚೀಟಿಗಳನ್ನು ಒದಗಿಸಲು ಪ್ರಕ್ರಿಯೆಯ ವ್ಯಾಪ್ತಿಯನ್ನು ವಿಸ್ತರಿಸಲಾಗಿತ್ತು.
ಆರ್ಟಿಕಲ್ 21 ರ ಅಡಿಯಲ್ಲಿ ಆಹಾರದ ಹಕ್ಕನ್ನು ರಕ್ಷಿಸಲಾಗಿದೆ ಎಂಬ ಆಧಾರದ ಮೇಲೆ ಇದು NFSA ಅಡಿಯಲ್ಲಿ ಒಳಗೊಳ್ಳದವರನ್ನು ಸಹ ಒಳಗೊಂಡಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಪಡಿತರ ಚೀಟಿಗೆ ಅರ್ಹರಾಗಿರುವ ಮತ್ತು ಅನರ್ಹಗಾಗಿರುವವರು ಸೇರಿದಂತೆ ವಲಸೆ ಕಾರ್ಮಿಕರು ಮತ್ತು ಕೌಶಲ್ಯರಹಿತ ಕಾರ್ಮಿಕರ ಸಂಖ್ಯೆಯನ್ನು ಕಂಡುಹಿಡಿಯುವಂತೆ ರಾಜ್ಯಗಳಿಗೆ ನಿರ್ದೇಶಿಸಲಾಗಿದೆ.
ಅರ್ಹರನ್ನು ಕೆವೈಸಿ ಮೂಲಕ ಪರಿಶೀಲಿಸಬೇಕು ಮತ್ತು ಪಡಿತರ ಚೀಟಿಗಳು ಮತ್ತು ಪಡಿತರವನ್ನು ಪಡೆಯಲು ಇ-ಶ್ರಮ್ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ಎದುರಿಸಿದ ಸಮಸ್ಯೆಗಳ ಬಗ್ಗೆಗಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿತ್ತು.
ವಿಡಿಯೊ ನೋಡಿ: ಭೂಮಿ-ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ


