Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...