Homeಮುಖಪುಟಮಣಿಪುರ | ಉಖ್ರುಲ್ ಹಿಂಸಾಚಾರದ ವೇಳೆ ಲೂಟಿಯಾದ 80% ಬಂದೂಕುಗಳು ಮತ್ತೆ ಪೊಲೀಸರ ವಶಕ್ಕೆ

ಮಣಿಪುರ | ಉಖ್ರುಲ್ ಹಿಂಸಾಚಾರದ ವೇಳೆ ಲೂಟಿಯಾದ 80% ಬಂದೂಕುಗಳು ಮತ್ತೆ ಪೊಲೀಸರ ವಶಕ್ಕೆ

- Advertisement -
- Advertisement -

ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಪ್ರಾರಂಭವಾದ ಜನಾಂಗೀಯ ಗಲಭೆಯ ಪರಿಣಾಮ ನೂರಾರು ಮಂದಿಯನ್ನು ಬಲಿ ಪಡೆದಿದ್ದು, ಕೋಟ್ಯಾಂತರ ರೂಪಾಯಿಗಳ ಆಸ್ತಿ-ಪಾಸ್ತಿ ನಷ್ಟ ಮಾಡಿದೆ. ಅದಾಗ್ಯೂ, ಅಕ್ಟೋಬರ್ 2ರಂದು ವೇಳೆ ಮಣಿಪುರದ ಉಖ್ರುಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯ ವೇಳೆ ಗುಂಪೊಂದು ಪೊಲೀಸ್ ಠಾಣೆಯಿಂದ ಲೂಟಿ ಮಾಡಿದ್ದ ಹದಿನಾರು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇನ್ಸ್‌ಪೆಕ್ಟರ್ ಜನರಲ್ (ಕಾರ್ಯಾಚರಣೆ) ಐಕೆ ಮುಯಿವಾಹ್, ಅಕ್ಟೋಬರ್ 2 ರಂದು ಎರಡು ಗ್ರಾಮಗಳ ನಡುವಿನ ಘರ್ಷಣೆಯ ಸಂದರ್ಭದಲ್ಲಿ ಉದ್ರೇಕಗೊಂಡ ಗುಂಪು ಪೊಲೀಸ್ ಠಾಣೆಗೆ ನುಗ್ಗಿ 20 ಬಂದೂಕುಗಳನ್ನು ಲೂಟಿ ಮಾಡಿದೆ ಎಂದು ಹೇಳಿದ್ದಾರೆ.

ಭದ್ರತಾ ಪಡೆಗಳು, ಸಿವಿಲ್ ಸೊಸೈಟಿ ಸಂಘಟನೆಗಳು ಮತ್ತು ಸಮುದಾಯದ ಮುಖಂಡರ ಸಹಕಾರದೊಂದಿಗೆ ಈಗ 80%ದಷ್ಟು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದು, ಉಳಿದ ಆಯುಧಗಳನ್ನು ವಾಪಾಸು ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 9 ಎಂಎಂ ಪಿಸ್ತೂಲ್‌ಗಳು, ಐಎನ್‌ಎಸ್‌ಎಎಸ್ ರೈಫಲ್ಸ್ ಮತ್ತು ಎಕೆ -47 ರೈಫಲ್‌ಗಳು ಸೇರಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ

ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಮಣಿಪುರ ರೈಫಲ್ಸ್, ಅಸ್ಸಾಂ ರೈಫಲ್ಸ್ ಮತ್ತು ಬಿಎಸ್ಎಫ್ ಸೇರಿದಂತೆ ಭದ್ರತಾ ಪಡೆಗಳು ಎರಡು ಗ್ರಾಮಗಳ ಮುಖಂಡರ ಸಹಕಾರದೊಂದಿಗೆ ತೀವ್ರ ನಿಗಾ ಇರಿಸಿದ್ದಾರೆ ಎಂದು ಮುಯಿವಾಹ್ ಹೇಳಿದ್ದಾರೆ. “ಇಂತಹ ಅಭೂತಪೂರ್ವ, ಗಮನಾರ್ಹ ಮತ್ತು ಸಹಜತೆಯನ್ನು ಪುನಃಸ್ಥಾಪಿಸುವಲ್ಲಿ ಅತ್ಯಂತ ಸಕಾರಾತ್ಮಕ ಪಾತ್ರವನ್ನು ವಹಿಸಿದ ಎಲ್ಲರಿಗೂ ಪ್ರಶಂಸೆಗೆ ಅರ್ಹವಾಗಿದೆ” ಎಂದು ಅವರು ಹೇಳಿದ್ದಾರೆ.

ಅಸ್ಸಾಂ ರೈಫಲ್ಸ್‌ನ ಅಧಿಕಾರಿ ಸಂಜೀವ್ ಸಿಂಗ್ ಮಾತನಾಡಿ, “ಸೇನೆಯನ್ನು ಕನಿಷ್ಠ ಬಳಕೆ ಮಾಡಿ ಅಥವಾ ಸೇನೆಯನ್ನು ಬಳಸದೆ” ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಭೂಮಿಯನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಅಕ್ಟೋಬರ್ 2 ರಂದು ನಾಗಾ ಸಮುದಾಯಕ್ಕೆ ಸೇರಿದ ಆದರೆ ಎರಡು ವಿಭಿನ್ನ ಗ್ರಾಮಗಳಿಗೆ ಸೇರಿದ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

ಘರ್ಷಣೆಯ ನಂತರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...