ಕಾಂಗ್ರೆಸ್‌ನ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಮತ್ತು ಜೆಡಿಎಸ್ ನಾಯಕ ಬಿಎಂ ಫಾರೂಕ್ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಪೊಲೀಸರು ಭಾನುವಾರ ಮುಂಜಾನೆ ಕುಳೂರು ಸೇತುವೆ ಬಳಿ ಅವರ ವಾಹನವನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಉದ್ಯಮಿಯಾಗಿರುವ ಮುಮ್ತಾಜ್ ಅಲಿ ಅವರು ಬೆಳಿಗ್ಗೆ 3 ಗಂಟೆಗೆ ಮನೆಯಿಂದ ಕಾರಿನೊಂದಿಗೆ ಹೊರಟು ನಗರದಾದ್ಯಂತ ಸುತ್ತಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನದಿಗೆ ಹಾರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರಾಜ್ಯ ವಿಪತ್ತು ಪರಿಹಾರ ಪಡೆ ಮತ್ತು ಕೋಸ್ಟ್ ಗಾರ್ಡ್ ತಂಡಗಳು ನದಿಯಲ್ಲಿ ಶೋಧ ನಡೆಸುತ್ತಿವೆ.
ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ
ಸೇತುವೆ ಬಳಿ ಕಾರನ್ನು ನಿಲ್ಲಿಸುವ ಮುನ್ನ ಬಸ್‌ಗೂ ಡಿಕ್ಕಿ ಹೊಡೆದಿದ್ದರು ಎಂದು ವರದಿಯಾಗಿದೆ. ಹಾಗಾಗಿ ಅವರ ಕಾರು ಕೂಡಾ ಜಖಂಗೊಂಡಿದೆ. ಮುಮ್ತಾಜ್ ಪತ್ತೆಗೆ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸಹಾಯವನ್ನೂ ಕೋರಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಮನೆಯಲ್ಲಿ ಜಗಳವಾಗಿದ್ದು, ನಂತರ ಅವರು ಮನೆಯಿಂದ ಹೊರಟುಹೋಗಿದ್ದರು. ಮಗಳಿಗೆ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಹೇಳಿದ್ದರು. ಅವರು ಕಾರನ್ನು ನಿಲ್ಲಿಸಿ ಸ್ಥಳದಿಂದ ತೆರಳಿದ್ದಾರೊ ಅಥವಾ ನದಿಗೆ ಹಾರಿದ್ದಾರೊ ಎಂಬುದು ನಮಗೆ ತಿಳಿಯಬೇಕಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಮಂಗಳೂರಿನ ಕೂಲೂರು ಸೇತುವೆ ಬಳಿ ಕಾರು ಪತ್ತೆಯಾಗುತ್ತಿದ್ದರಂತೆ ಸ್ಥಳದಲ್ಲಿ ಜನರು ಜಮಾ ಅಗಿದ್ದು, ಡಿಸಿಪಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ನದಿಯಲ್ಲಿ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್, ಅಗ್ನಿಶಾಮಕದಳದಿಂದ ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.
ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ


