Homeಅಂತರಾಷ್ಟ್ರೀಯಗಾಜಾ | ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; ಕನಿಷ್ಠ 21 ಜನರು ಸಾವು

ಗಾಜಾ | ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; ಕನಿಷ್ಠ 21 ಜನರು ಸಾವು

- Advertisement -
- Advertisement -

ಮಧ್ಯ ಗಾಜಾ ಮೇಲೆ ಭಾನುವಾರ ಮುಂಜಾನೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ನಿರಾಶ್ರಿತ ಜನರಿಗೆ ಆಶ್ರಯ ನೀಡುತ್ತಿರುವ ಮಸೀದಿಗೆ ದಾಳಿ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮಧ್ಯ ಗಾಜಾದ ಡೀರ್ ಅಲ್-ಬಲಾಹ್‌ನಲ್ಲಿರುವ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಗೇಟ್‌ನ ಮುಂದೆ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುವ ಮಸೀದಿಯ ಮೇಲೆ ಆಕ್ರಮಣಕಾರರಾದ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ. ಪರಿಣಾಮವಾಗಿ ಸಾವಿನ ಸಂಖ್ಯೆ 21 ಕ್ಕೆ ಏರಿದ್ದು, ದೊಡ್ಡ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದಾರೆ” ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಮಸೀದಿಯ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಬಂಡುಕೋರರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ. ಇತ್ತೀಚಿನ ದಾಳಿ ಸೇರಿದಂತೆ ಇಸ್ರೇಲ್ ದಾಳಿಗೆ ಮೃತಪಟ್ಟ ಜನರ ಸಂಖ್ಯೆ 42,000ದ ಸಮೀಪಕ್ಕೆ ತಲುಪುತ್ತಿದೆ ಎಂದು ಪ್ಯಾಲೇಸ್ತೀನಿ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂಓದಿ: ಪ್ರವಾದಿ ಮುಹಮ್ಮದರ ಕುರಿತು ದ್ವೇಷ ಭಾಷಣ : ಯತಿ ನರಸಿಂಗಾನಂದ ಬಂಧನ

ಪ್ಯಾಲೇಸ್ತೀನಿ ನಿರಾಶ್ರಿತರು ಸೇರಿದಂತೆ ಲೆಬನಾನ್‌ನಲ್ಲಿ ಸಾವಿರಾರು ಜನರು ಯುದ್ಧ ಪೀಡಿತ ಪ್ರದೇಶದಿಂದ ಪಲಾಯನ ಮಾಡುವುದನ್ನು ಮುಂದುವರೆಸಿದ್ದಾರೆ. 2023ರ ಅಕ್ಟೋಬರ್ ವೇಳೆಗೆ ಪ್ರಾರಂಭವಾದ ಈ ಯುದ್ಧಕ್ಕೆ ವರ್ಷವಾಗುತ್ತಿದ್ದು, ಪ್ಯಾಲೆಸ್ತೀನ್ ಪರ ಪ್ರಪಂಚದಾದ್ಯಂತ ರ್ಯಾಲಿ ನಡಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಶನಿವಾರದಂದು, ಉತ್ತರ ಬೆಡ್ಡಾವಿ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಹಮಾಸ್‌ನ ಮಿಲಿಟರಿ ವಿಭಾಗದ ಅಧಿಕಾರಿ ಮತ್ತು ಅವರ ಹೆಂಡತಿ ಹಾಗೂ ಇಬ್ಬರು ಚಿಕ್ಕ ಹೆಣ್ಣುಮಕ್ಕಳೊಂದಿಗೆ ಕೊಂದಿದೆ ಎಂದು ಪ್ಯಾಲೇಸ್ತೀನಿ ಬಂಡುಕೋರ ಗುಂಪು ಹೇಳಿದೆ. ಗಾಜಾ

ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ಲೆಬನಾನ್‌ನಲ್ಲಿ ಹಲವಾರು ಹಮಾಸ್ ಅಧಿಕಾರಿಗಳನ್ನು ಕೊಂದಿದೆ. ಜೊತೆಗೆ ಲೆಬನಾನ್ ಮೂಲದ ಹೆಜ್ಬೊಲ್ಲಾ ಬಂಡಕೋರ ಗುಂಪಿನ ವಿರುದ್ಧ ಕೂಡಾ ದಾಳಿ ನಡೆಸುತ್ತಿದೆ. ಇಸ್ರೇಲ್ ದಾಳಿಯ ನಂತರ ನಾಗರಿಕರು, ವೈದ್ಯರು ಮತ್ತು ಹೆಜ್ಬೊಲ್ಲಾ ಹೋರಾಟಗಾರರು ಸೇರಿದಂತೆ ಕನಿಷ್ಠ 1,400 ಲೆಬನಾನಿಗರು ಕೊಲ್ಲಲ್ಪಟ್ಟರು ಮತ್ತು ಕಳೆದ ಎರಡು ವಾರಗಳಲ್ಲಿ 1.2 ಮಿಲಿಯನ್ ಜನರು ತಮ್ಮ ಮನೆಗಳಿಂದ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ವಾರ, ಇಸ್ರೇಲ್ ಸೇನೆಯು ದಕ್ಷಿಣ ಲೆಬನಾನ್‌ ಮೇಲೆ ಸೀಮಿತ ನೆಲದ ಕಾರ್ಯಾಚರಣೆ ನಡೆಸುವುದಾಗಿ ಹೇಳಿಕೊಂಡಿತ್ತು. ಈ ವೇಳೆ ನಡೆಸಿದ್ದ ಸರಣಿ ದಾಳಿಗಳಲ್ಲಿ ಹಿಜ್ಬುಲ್ಲಾ ಸಂಘಟನೆಯ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಸೇರಿದಂತೆ ಸಂಘಟನೆಯ ಇತರರನ್ನು ಕೊಂದು ಹಾಕಿತ್ತು.

ವಿಡಿಯೊ ನೋಡಿ: ರೈತ-ಕಾರ್ಮಿಕ ಹಿತ ರಕ್ಷಣಾ ಸಮಿತಿ ಮಲೆನಾಡು: ಪತ್ರಿಕಾಗೋಷ್ಠಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...