ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, ಅವರ ಪುತ್ರರಾದ ಆರ್‌ಜೆಡಿ ಮುಖಂಡರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರಿಗೆ ತಲಾ ₹1 ಲಕ್ಷ ಬಾಂಡ್‌ಗಳ ಮೇಲೆ ಜಾಮೀನು ಮಂಜೂರು ಮಾಡಿದರು. ಪ್ರಕರಣದ ತನಿಖೆಯ ಸಮಯದಲ್ಲಿ ಅವರನ್ನು ಬಂಧಿಸಲಾಗಿಲ್ಲ ಎಂಬುದನ್ನು ಗಮನಿಸಿದರು.
ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಎಲ್ಲ ಮೂವರು ಆರೋಪಿಗಳಿಗೆ ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸುವಂತೆ ಸೂಚಿಸಿದೆ.
ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ
ಪಿಎಂಎಲ್‌ಎ ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಇತರರಿಗೆ ಸಮನ್ಸ್ ನೀಡುವ ಆದೇಶವನ್ನು ರೋಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 17ರಂದು ಕಾಯ್ದಿರಿಸಿತ್ತು. ಜಾರಿ ನಿರ್ದೇಶನಾಲಯ (ಇಡಿ) ಕಳೆದ ತಿಂಗಳು ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ.
ಇಡಿ ಆಗಸ್ಟ್ 6 ರಂದು ಲಾಲು ಪ್ರಸಾದ್ ಯಾದವ್, ತೇಜಸ್ವಿ ಯಾದವ್ ಮತ್ತು ಇತರ ಆರೋಪಿಗಳ ವಿರುದ್ಧ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸಿತು.
ಇದನ್ನೂ ಓದಿ; ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?


