Homeಮುಖಪುಟಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಜ್ಯದ ಮಾಜಿ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರೊಂದಿಗೆ ಹಸ್ತಲಾಘವ ಮಾಡಿದ ವಿದ್ಯಾರ್ಥಿನಿಯನ್ನು ಟೀಕಿಸಿದ್ದ ವ್ಯಕ್ತಿ ವಿರುದ್ದದ ಕ್ರಿಮಿನಲ್‌ ಮೊಕದ್ದಮೆ ರದ್ದತಿಗೆ ಕೇರಳ ಹೈಕೋರ್ಟ್‌ ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ಸಮುದಾಯದ ಕಾನೂನು ವಿದ್ಯಾರ್ಥಿನಿ ವೇದಿಕೆ ಮೇಲೆ ಸಚಿವರಿಗೆ ಹಸ್ತಲಾಘವ ಮಾಡಿದ್ದರು. ಅದನ್ನು ಟೀಕಿಸಿದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ವರ್ತನೆ ವ್ಯಭಿಚಾರವಾಗಿದ್ದು, ಶರಿಯತ್‌ ಕಾನೂನಿನ ಉಲ್ಲಂಘನೆ ಎಂದಿದ್ದ ಎಂದು ವರದಿ ತಿಳಿಸಿದೆ.

ಕೋಝಿಕ್ಕೋಡ್‌ ಜಿಲ್ಲೆಯ ಮರ್ಕಝ್ ಕಾನೂನು ಕಾಲೇಜು ಆಯೋಜಿಸಿದ್ದ ಡಾ. ಐಸಾಕ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬಹುಮಾನ ಸ್ವೀಕರಿಸುವಾಗ ವಿದ್ಯಾರ್ಥಿನಿ ಐಸಾಕ್‌ ಅವರ ಕೈ ಕುಲುಕಿದ್ದರು. ಅದಕ್ಕೆ ಅಬ್ದುಲ್‌ ನೌಷಾದ್‌ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದ.

ತನಗೆ ಹಾಗೂ ತನ್ನ ಕುಟುಂಬಕ್ಕೆ ಅವಮಾನ ಮಾಡುವ ಸಲುವಾಗಿ ನೌಷಾದ್ ಆರೋಪ ಮಾಡಿರುವುದಾಗಿ ಆತನ ವಿರುದ್ಧ ಕಾನೂನು ವಿದ್ಯಾರ್ಥಿನಿ ಐಪಿಸಿ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಹಾಗೂ ಕೇರಳ ಪೊಲೀಸ್‌ ಕಾಯ್ದೆಯ ಸೆಕ್ಷನ್ 119 (ಎ) (ಮಹಿಳೆಯರ ಘನತೆಗೆ ಚ್ಯುತಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಚಿವರೊಂದಿಗೆ ಹಸ್ತಲಾಘವ ಮಾಡುವುದು ವಿದ್ಯಾರ್ಥಿನಿಯ ವೈಯಕ್ತಿಕ ಆಯ್ಕೆಯಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಯಾವುದೇ ಧಾರ್ಮಿಕ ಆಚರಣೆ ಪಾಲಿಸುವಂತೆ ಆಕೆಯನ್ನು ಒತ್ತಾಯಿಸಲಾಗದು ಎಂದು ಅಕ್ಟೋಬರ್ 1 ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಅವರು ತಿಳಿಸಿದ್ದಾರೆ.

ಧರ್ಮಗಳಲ್ಲಿ, ಅದರಲ್ಲಿಯೂ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ನಂಬಿಕೆಗಳು ವೈಯಕ್ತಿಕವಾದವು. ಧರ್ಮದಲ್ಲಿ, ವಿಶೇಷವಾಗಿ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ. ಒಬ್ಬರು ಧಾರ್ಮಿಕ ಆಚರಣೆ ಪಾಲಿಸುವಂತೆ ಇನ್ನೊಬ್ಬರನ್ನು ಒತ್ತಾಯಿಸುವಂತಿಲ್ಲ. ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಆಯ್ಕೆಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಸಂಬಂಧಿತ ನಿಯಮಾವಳಿಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದು, ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಸಂವಿಧಾನದ 25 ನೇ ವಿಧಿ ಹೇಳುತ್ತದೆ” ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಧರ್ಮವನ್ನು ಪ್ರಚಾರ ಮಾಡುವ ಹಕ್ಕು ಎಂದರೆ ಧಾರ್ಮಿಕ ಆಚರಣೆಗಳನ್ನು ಉಳಿದವರ ಮೇಲೆ ಹೇರಬಹುದು ಎಂದರ್ಥವಲ್ಲ. ಸಂವಿಧಾನದ 25 ರಿಂದ 28 ನೇ ವಿಧಿಯು ಒಬ್ಬ ವ್ಯಕ್ತಿ ತನ್ನ ಧಾರ್ಮಿಕ ನಂಬಿಕೆಗಳನ್ನು ಇನ್ನೊಬ್ಬರ ಮೇಲೆ ಹೇರಲು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಧರ್ಮ ಗ್ರಂಥಗಳು ಕೂಡ ವೈಯಕ್ತಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತವೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಖುರಾನ್‌ ಸಾಲುಗಳನ್ನು ಉಲ್ಲೇಖಿಸಿದೆ ಎಂದು ಬಾರ್ & ಬೆಂಚ್ ವಿವರಿಸಿದೆ.

ಪ್ರಕರಣದ ಸತ್ಯಾಸತ್ಯತೆ ಪರಿಗಣಿಸಿ ತನ್ನ ವಿರುದ್ಧದ ಆರೋಪಗಳು ಈ ಸೆಕ್ಷನ್‌ಗಳಡಿ ಬರುವುದಿಲ್ಲ. ಹೀಗಾಗಿ ತನ್ನ ವಿರುದ್ಧದ ವಿಚಾರಣೆ ರದ್ದುಗೊಳಿಸಬೇಕು ಎನ್ನುವುದು ಆರೋಪಿ ನೌಷಾದ್‌ ಕೋರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : Jammu and Kashmir Assembly Elections 2024 | ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...