ಉತ್ತರ ಪ್ರದೇಶದ ಗೊಂಡಾದ ಮನೆಯೊಂದರಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಯುಪಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಘಟನೆ ಬಗ್ಗೆ ತರಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಗದ್‌ಗಂಜ್ ಗ್ರಾಮದ ಮೊಹಮ್ಮದ್ ಫಾರೂಕ್ ಎಂಬುವವರ ಮನೆಯಲ್ಲಿ ಸೋಮವಾರ ಕೆಲವರು ಪಟಾಕಿ ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿತ್ತು.
ಸಬ್ ಇನ್ಸ್‌ಪೆಕ್ಟರ್ ಸುಭಾಷ್ ವಿಶ್ವಕರ್ಮ ಅವರ ದೂರಿನ ಆಧಾರದ ಮೇಲೆ ತರಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ಇಶಾಕ್, ಅಯೂಬ್ ಅಲಿಯಾಸ್ ಲಲ್ಲು, ಆಕಾಶ್ ಅಲಿಯಾಸ್ ಛೋಟು, ಕೃಷ್ಣ ಕುಮಾರ್, ಅಯಾಜ್ ಅಲಿಯಾಸ್ ತೂಫಾ, ಆಜಾದ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ಫೋಟಕ ವಸ್ತುಗಳ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಯುಪಿ
ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಇವರೆಲ್ಲರೂ ಮನೆಯ ಮುಖ್ಯ ಗೇಟ್‌ಗೆ ಬೀಗ ಹಾಕಿ ಅಕ್ರಮವಾಗಿ ಪಟಾಕಿ ತಯಾರಿಕೆ ಮಾಡುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕಗಳ ತಡೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಗಾಯಾಳುಗಳಲ್ಲಿ ಒಬ್ಬರು ಅಯಾಜ್ ಮೊಹಮ್ಮದ್ ಅಲಿಯಾಸ್ ತೂಫಾನ್ (17) ಎಂದು ಗುರುತಿಸಲಾಗಿದ್ದು, ಸೋಮವಾರ ತಡರಾತ್ರಿ ಲಕ್ನೋದಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಘಟನೆಯಲ್ಲಿ ಮೂರಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ. ಇದಕ್ಕಿಂತಲೂ ಮುಂಚೆ ಆಕಾಶ್ (15) ಮತ್ತು ಲಲ್ಲು (30) ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು.
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ರಗದ್‌ಗಂಜ್ ಪೊಲೀಸ್ ಹೊರಠಾಣೆ ಉಸ್ತುವಾರಿ ಸುನಿಲ್ ತಿವಾರಿ ಮತ್ತು ಬೀಟ್ ಕಾನ್‌ಸ್ಟೆಬಲ್‌ಗಳಾದ ಗೌರವ್ ಮಿಶ್ರಾ ಮತ್ತು ಕೃಷ್ಣ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ.
ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ


