Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...