ಹರಿಯಾಣ ಚುನಾವಣಾ ಸೋಲಿನ ನಂತರ ಕಾಂಗ್ರೆಸ್ ಪಕ್ಷದ ವಿರುದ್ಧ ವ್ಯಂಗ್ಯವಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ, ಪ್ರಾದೇಶಿಕ ಪಕ್ಷಗಳು ತಾವು ಗೆಲ್ಲುತ್ತೇವೆ ಎಂದು ಭಾವಿಸಿರುವ ಸ್ಥಳಗಳಲ್ಲಿ ಅವರಿಗೆ ಅವಕಾಶ ನೀಡದ ವರ್ತನೆ ಚುನಾವಣಾ ಸೋಲಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ದುರಹಂಕಾರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್ ಮಾಡಿರುವ ಕೋಖಲೆ, ಯಾವುದೇ ಪಕ್ಷದ ಹೆಸರಿಸದೆ, ಅಹಂಕಾರ, ಅರ್ಹತೆ ಮತ್ತು ಪ್ರಾದೇಶಿಕ ಪಕ್ಷಗಳನ್ನು ಕೀಳಾಗಿ ನೋಡುವುದು ದುರಂತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
“ಈ ವರ್ತನೆಯು ಚುನಾವಣಾ ಸೋಲಿಗೆ ಕಾರಣವಾಗುತ್ತದೆ. ಗೆಲ್ಲುತ್ತೇವೆ ಎಂದು ನಾವು ಭಾವಿಸಿದರೆ, ನಾವು ಯಾವುದೇ ಪ್ರಾದೇಶಿಕ ಪಕ್ಷಕ್ಕೆ ಅವಕಾಶ ನೀಡುವುದಿಲ್ಲ … ಆದರೆ ನಾವು ಇಲ್ಲದಿರುವ ರಾಜ್ಯಗಳಲ್ಲಿ, ಪ್ರಾದೇಶಿಕ ಪಕ್ಷಗಳು ನಮಗೆ ಅವಕಾಶ ಕಲ್ಪಿಸಬೇಕು” ಎಂದು ಟಿಎಂಸಿ ಸಂಸದ ಗೋಖಲೆ ಹೇಳಿದ್ದಾರೆ.
ದುರಹಂಕಾರ, ಅರ್ಹತೆ, ಪ್ರಾದೇಶಿಕ ಪಕ್ಷಗಳನ್ನು ಕೀಳಾಗಿ ಕಾಣುವುದು ಅನಾಹುತಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಹರಿಯಾಣದಲ್ಲಿ ಬಿಜೆಪಿಯು ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ಕಾಂಗ್ರೆಸ್ ಅನ್ನು ಮೂರನೇ ಬಾರಿಗೆ ಸೋಲಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಒಂದು ದಿನದ ನಂತರ ಗೋಖಲೆ ಈ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕನನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಕೈಬಿಟ್ಟ ಎಐಎಡಿಎಂಕೆ
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಕಾಂಗ್ರೆಸ್ ಚುನಾವಣಾ ತಂತ್ರವನ್ನು ಪ್ರಶ್ನಿಸಿದ್ದರು. ಅವರ ಪಕ್ಷ ಎಎಪಿ ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿತ್ತು. ಆದರೆ ಕಾಂಗ್ರೆಸ್ ಅದಕ್ಕೆ ಒಪ್ಪಿರಲಿಲ್ಲ. ಚುನಾವಣೆ ಫಲಿತಾಂಶದ ನಂತರ ಅವರು ಪ್ರತಿಕ್ರಿಯಿಸಿ, ಇತ್ತೀಚಿನ ಸುತ್ತಿನ ಚುನಾವಣೆಗಳ ದೊಡ್ಡ ಪಾಠವೆಂದರೆ “ಅತಿಯಾದ ಆತ್ಮವಿಶ್ವಾಸ” ಇರಬಾರದು ಎಂದು ಮಂಗಳವಾರ ಹೇಳಿದ್ದರು.
ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ಚುನಾವಣೆಯಲ್ಲಿ ಎಲ್ಲಾ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷಗಳನ್ನು ಕರೆದುಕೊಂಡು ಹೋಗಬೇಕಾಗಿದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಹೇಳಿದ್ದಾರೆ.
ವಿರೋಧ ಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಒಕ್ಕೂಟದ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಿದರೆ, ಕಾಂಗ್ರೆಸ್ ಸಿಪಿಐ(ಎಂ) ಮತ್ತು ಇತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತ್ತು.
ವಿಡಿಯೊ ನೋಡಿ:‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು


