Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

- Advertisement -
- Advertisement -

ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ಅವರನ್ನು ‘ಏಕೈಕ ಆರೋಪಿ’ ಎಂದು ಸಾಬೀತುಪಡಿಸಲು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಡಿಎನ್‌ಎ ಮತ್ತು ರಕ್ತದ ಮಾದರಿಗಳು ಸೇರಿದಂತೆ 11 ಸಾಕ್ಷ್ಯಗಳನ್ನು ಪಟ್ಟಿ ಮಾಡಿದೆ.

ಸಂತ್ರಸ್ತೆಯ ದೇಹದಲ್ಲಿ ಆತನ ಡಿಎನ್‌ಎ ಇರುವಿಕೆ, ಚಿಕ್ಕ ಕೂದಲು, ಸಂತ್ರಸ್ತೆಯ ರಕ್ತದ ಕಲೆಗಳು, ಅವರ ದೇಹದ ಮೇಲಿನ ಗಾಯಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಅವರ ಮೊಬೈಲ್ ಫೋನ್ ಸ್ಥಳವನ್ನು ಕರೆ ವಿವರಗಳ ದಾಖಲೆಗಳ ಪ್ರಕಾರ ಸಂಗ್ರಹಿಸಿರುವ ಸಾಕ್ಷ್ಯಗಳನ್ನು ರಾಯ್ ವಿರುದ್ಧ ತನಿಖಾ ಸಂಸ್ಥೆ ಉಲ್ಲೇಖಿಸಿದೆ.

“ಬಲಿಪಶುವಿನ ಪ್ರತಿರೋಧ ಹಾಗೂ ಹೋರಾಟದಿಂದ ರಾಯ್ ಮೊಂಡಾದ ಬಲದ ಗಾಯಗಳನ್ನು ಅನುಭವಿಸಿದ್ದಾನೆ” ಎಂದು ಚಾರ್ಜ್ ಶೀಟ್ ಉಲ್ಲೇಖಿಸಿದೆ. ಆರೋಪಿ ರಾಯ್‌ನನ್ನು ಕೋಲ್ಕತ್ತಾ ಪೊಲೀಸರು ಆಗಸ್ಟ್ 10 ರಂದು ಬಂಧಿಸಿದ್ದರು.

“ಆಗಸ್ಟ್ 8 ಮತ್ತು 9 ರ ಮಧ್ಯರಾತ್ರಿಯ ಸಮಯದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಯ್ ಉಪಸ್ಥಿತಿ ಮತ್ತು ತುರ್ತು ಕಟ್ಟಡದ ಮೂರನೇ ಮಹಡಿಯಲ್ಲಿ ಅಪರಾಧದ ದೃಶ್ಯ ಇರುವುದು ಸಿಸಿಟಿವಿ ದೃಶ್ಯಗಳ ಮೂಲಕ ಸಾಬೀತಾಗಿದೆ. ಸಿಡಿಆರ್ ಪ್ರಕಾರ ಆತನ ಮೊಬೈಲ್ ಫೋನ್ ಇರುವ ಸ್ಥಳದ ಮೂಲಕ ಅವನ ಉಪಸ್ಥಿತಿಯು ಸಾಬೀತಾಗಿದೆ ಎಂದು ಸಿಬಿಐ ಚಾರ್ಜ್ ಶೀಟ್ ಹೇಳಿದೆ.

ಕೇಂದ್ರ ತನಿಖಾ ಸಂಸ್ಥೆಯು ಸೋಮವಾರ ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಮೃತ ಮಹಿಳೆ ‘ವಿ’ ಎಂದು ಉಲ್ಲೇಖಿಸಿದೆ.

ಶವಪರೀಕ್ಷೆಯ ಸಮಯದಲ್ಲಿ ‘ವಿ’ಯ ಮೃತ ದೇಹದಿಂದ ಪತ್ತೆಯಾದ ಡಿಎನ್‌ಎಯಲ್ಲಿ ಅವನ ಡಿಎನ್‌ಎ ಇದೆ. ಸ್ಥಳೀಯ ಪೋಲೀಸರು ವಶಪಡಿಸಿಕೊಂಡ ಜೀನ್ಸ್ ಮತ್ತು ಪಾದರಕ್ಷೆಗಳ ಮೇಲೆ ‘ವಿ’ ರಕ್ತದ ಕಲೆಗಳ ಇತ್ತು ಎಂಬ ಆಗಸ್ಟ್ 12 ರಂದು ಸ್ಥಳಿಯ ಪೊಲೀಸರು ಸಾಕ್ಷ್ಯವನ್ನು ಸಿಬಿಐ ಉಲ್ಲೇಖಿಸಿದೆ.

ಎಸ್‌ಒಸಿಯಿಂದ ಪತ್ತೆಯಾದ ಸಣ್ಣ ಕೂದಲು ಆರೋಪಿ ಸಂಜಯ್ ರಾಯ್‌ಗೆ ಹೊಂದಿಕೆಯಾಗಿದೆ ಎಂದು ಚಾರ್ಜ್‌ಶೀಟ್ ಹೇಳಿದೆ.

ಆಗಸ್ಟ್ 9 ರಂದು, 31 ವರ್ಷದ ಮಹಿಳಾ ವೈದ್ಯರ ಶವವನ್ನು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಪತ್ತೆಹಚ್ಚಲಾಯಿತು. ಕಲ್ಕತ್ತಾ ಹೈಕೋರ್ಟ್ ಆಗಸ್ಟ್ 13 ರಂದು ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು.

ವೈದ್ಯರಿಗೆ ರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಅಮರಣಾಂತ ಉಪವಾಹ ಸತ್ಯಾಗ್ರಹ ಮುಂದುವರಿಸಿದ್ದಾರೆ.

ಇದನ್ನೂ ಓದಿ; ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...