Homeಕರ್ನಾಟಕಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ...

ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

- Advertisement -
- Advertisement -

“ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುತ್ತೇನೆ” ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹಿಳೆ “ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ, ಕಿರುಕುಳ ಕೊಟ್ಟು ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರನ್ನು ಹನಿಟ್ರ್ಯಾಪ್ ಮಾಡಿ ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಎಸಿಪಿ, ಸಿಪಿಐ ಸೇರಿದಂತೆ ಹಿರಿಯ ಅಧಿಕಾರಿಗಳನ್ನೂ ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ” ಎಂದು ಶಾಸಕ ಅಶ್ವತ್ಥನಾರಾಯಣ, ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್‌ಗೆ ಸವಾಲು ಹಾಕಿದ್ದಾರೆ.

“ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲಾ ಸತ್ಯಗಳೂ ಹೊರಗೆ ಬರಲಿವೆ” ಎಂದಿದ್ದಾರೆ.

“ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರ 10 ನಿಮಿಷದ ಅಪಾಯಿಂಟ್‌ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ. ಇಷ್ಟೆಲ್ಲಾ ಆದರೂ ಮುನಿರತ್ನ ಅವರನ್ನು ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ? ಎಂದು ಕೇಳಬೇಕಿದೆ” ಎಂದು ಮಹಿಳೆ ಹೇಳಿದ್ದಾರೆ.

“2020ರಲ್ಲಿ ಮಮತಾ ವೆಂಕಟೇಶ್ ಎಂಬವರ ಮೂಲಕ ಮುನಿರತ್ನ ಪರಿಚಯ ಆಗಿದ್ದರು. ಒಂದು ದಿನ ನನಗೆ ವಿಡಿಯೋ ಕರೆ ಮಾಡಿದ್ದರು. ಬಳಿಕ ನನ್ನನ್ನು ಅವರ ಬಳಿ ಕರೆಸಿಕೊಂಡು ಗೋದಾಮಿನ ಬಳಿ ಕರೆದೊಯ್ದು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಅವರಿಗೆ ಜಾಮೀನು ಸಿಕ್ಕಿ ಹೊರ ಬಂದರೆ ನನಗೆ ಜೀವ ಭಯ ಇದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...