ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ಸೋಲಿಗೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಬುಧವಾರ ಟೀಕಿಸಿದ್ದು, ”ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಪಕ್ಷ ನಂಬಿತ್ತು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಸಂಜಯ್ ರಾವತ್, ಕಾಂಗ್ರೆಸ್ “ಗೆಲುವಿನ ಆಟವನ್ನು ಸೋಲನ್ನಾಗಿ ಪರಿವರ್ತಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ “ಅತಿಯಾದ ಆತ್ಮವಿಶ್ವಾಸ” ಮತ್ತು ಸ್ಥಳೀಯ ನಾಯಕರ “ಅಹಂಕಾರ” ಕಾರಣ ಎಂದು ಅವರು ಹೇಳಿದ್ದಾರೆ.
ಅಭ್ಯರ್ಥಿ ಆಯ್ಕೆಯಲ್ಲಿ ಕುಮಾರಿ ಸೆಲ್ಜಾ ಅವರಂತಹ ಪ್ರಮುಖ ವ್ಯಕ್ತಿಗಳನ್ನು ಬದಿಗಿಟ್ಟು, ಹರಿಯಾಣ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಪ್ರಾಬಲ್ಯವನ್ನು ಸಂಪಾದಕೀಯವು ವಿಶೇಷವಾಗಿ ಟೀಕಿಸಿದೆ. ಈ ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದ್ದು ಮತ್ತು ಕಳಪೆ ಮಟ್ಟದ ಪ್ರಚಾರಕ್ಕೆ ಕಾರಣವಾಯಿತು ಎಂದು ಅದು ವಾದಿಸಿದೆ.
ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ
ಹರಿಯಾಣದಲ್ಲಿ ಬಿಜೆಪಿ ವಿರೋಧಿ ಭಾವನೆ ಇದ್ದು, ಕಾಂಗ್ರೆಸ್ ಪ್ರಚಂಡ ಗೆಲುವು ಕಾಣುತ್ತದೆ ಎಂದು ಹಲವರು ನಿರೀಕ್ಷೆಯಿಟ್ಟಿದ್ದರು ಸಂಪಾದಕೀಯ ಹೇಳಿದೆ. ಆದಾಗ್ಯೂ, ಬಿಜೆಪಿ ವಿರೋಧಿ ವಾತಾವರಣವನ್ನು ಲಾಭ ಮಾಡಿಕೊಳ್ಳುವಲ್ಲಿ ಪಕ್ಷದ ಆಂತರಿಕ ಕಲಹವು ಬಾರಿ ದೊಡ್ಡ ವೈಫಲ್ಯ ಅನುಭವಿಸಿದೆ ಎಂದು ಸಂಪಾದಕೀಯ ಹೇಳಿಕೊಂಡಿದೆ.
ಗೆಲ್ಲುವ ಪಂದ್ಯವನ್ನು ಸೋಲನ್ನಾಗಿ ಪರಿವರ್ತಿಸುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಎಲ್ಲರೂ ಕಲಿಯಬೇಕು ಎಂದು ಸಂಪಾದಕೀಯ ಹೇಳಿದೆ. ಹರಿಯಾಣದಲ್ಲಿ ಪಕ್ಷದ ಸೋಲಿನಿಂದ ಪಾಠ ಕಲಿಯುವಂತೆ ಸಂಪಾದಕೀಯವು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ಮೈತ್ರಿಯ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ರಾವತ್ ಪ್ರತಿಪಾದಿಸಿದ್ದಾರೆ. “ಹರಿಯಾಣದಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲು ಸಾಧ್ಯವಾಗಲಿಲ್ಲ ಏಕೆಂದರೆ ಕಾಂಗ್ರೆಸ್ ಸ್ವಂತವಾಗಿ ಗೆಲ್ಲುತ್ತೇವೆ ಮತ್ತು ಅಧಿಕಾರದಲ್ಲಿ ತನಗೆ ಬೇರೆ ಪಾಲುದಾರರ ಅಗತ್ಯವಿಲ್ಲ ಎಂದು ಭಾವಿಸಿತ್ತು” ಎಂದು ಸಂಪಾದಕೀಯ ಹೇಳಿದೆ.
ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ಹರಿಯಾನ ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.
ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ
“ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಉತ್ತಮವಾಗಿ ಹೋರಾಡಿ ಸರ್ಕಾರ ರಚಿಸಲು ಸಜ್ಜಾಗಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಬೇಕಾಯಿತು. ಆಡಳಿತ ವಿರೋಧಿ ಅಲೆಯ ನಂತರವೂ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್ ತನ್ನ ಸೋಲಿಗೆ ಕಾರಣಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.
ಹರಿಯಾಣ ವಿಧಾನಸಭೆಯ 90 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು ಗೆದ್ದಿದ್ದು ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ (INLD) 2 ಸ್ಥಾನಗಳನ್ನು ಪಡೆದುಕೊಂಡಿದೆ.
ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಎಂವಿಎಯಲ್ಲಿ ಸೀಟು ಹಂಚಿಕೆ ಸೂತ್ರದ ಕುರಿತು ಮಾತುಕತೆಗಳು ನಡೆಯುತ್ತಿವೆ.
ವಿಡಿಯೊ ನೊಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು


