Homeಮುಖಪುಟರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪೌರತ್ವದ ವಿಷಯದ ಕುರಿತು ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅರ್ಜಿಯ ಪ್ರತಿಯನ್ನು ಸಲ್ಲಿಸಲು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಗೆ ದೆಹಲಿ ಹೈಕೋರ್ಟ್ ಬುಧವಾರ ಸಮಯಾವಕಾಶವನ್ನು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠವು ತನ್ನ ಕೊನೆಯ ಆದೇಶಕ್ಕೆ ಅನುಗುಣವಾಗಿ ಎಲೆಕ್ಟ್ರಾನಿಕ್ ರೂಪದಲ್ಲಿ ದಾಖಲೆಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ತಿಳಿಸಿದರು. ನವೆಂಬರ್ 6 ರಂದು ಹೆಚ್ಚಿನ ವಿಚಾರಣೆಗೆ ಅವರ ಮನವಿಯನ್ನು ಪಟ್ಟಿ ಮಾಡಿದೆ.

ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ತಮ್ಮ ಪ್ರಾತಿನಿಧ್ಯವನ್ನು ನಿರ್ಧರಿಸಲು ಗೃಹ ವ್ಯವಹಾರಗಳ ಸಚಿವಾಲಯಕ್ಕೆ (ಎಂಎಚ್‌ಎ) ನಿರ್ದೇಶನಗಳನ್ನು ಕೋರಿ ಸುಬ್ರಮಣಿಯನ್ ಸ್ವಾಮಿಯವರು ಮಾಡಿದ ಮನವಿಯನ್ನು ಪೀಠವು ಆಲಿಸುತ್ತಿದೆ.

ಸ್ವಾಮಿ ಅವರು ತಮ್ಮ ಮನವಿಯಲ್ಲಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ವಿರುದ್ಧ ಸಲ್ಲಿಸಿದ ಪ್ರಾತಿನಿಧ್ಯದ ಸ್ಥಿತಿಗತಿ ವರದಿಯನ್ನು ಒದಗಿಸಲು ಗೃಹ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಆರಂಭದಲ್ಲಿ, ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ವಿಷಯಕ್ಕೂ ತನ್ನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಮನವಿಗಳು ಸಂಪೂರ್ಣವಾಗಿ ವಿಭಿನ್ನವಾಗಿವೆ ಎಂದು ಸುಬ್ರಮಣಿಯನ್ ಸ್ವಾಮಿ ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಸರಿ ನೋಡೋಣ” ಎಂದಿತು. ಈ ಹಿಂದೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯ ಪ್ರತಿಯನ್ನು ಪಡೆಯಲು ಅರ್ಜಿದಾರರಿಗೆ ಕಾಲಾವಕಾಶ ನೀಡಿತ್ತು.

ಇದೇ ವಿಷಯದ ಕುರಿತ ಅರ್ಜಿಯನ್ನು ಅದರ ಅಲಹಾಬಾದ್ ಕೋರ್ಟ್‌ ಕೂಡ ವಿಚಾರಣೆ ನಡೆಸುತ್ತಿದೆ. ಎರಡು ನ್ಯಾಯಾಲಯಗಳು ಒಂದೇ ಸಮಸ್ಯೆಯನ್ನು ಏಕಕಾಲದಲ್ಲಿ ವ್ಯವಹರಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಈ ವಿಷಯದಲ್ಲಿ ಮುಂದುವರಿಯುವ ಮೊದಲು, ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅರ್ಜಿಯ ಬಗ್ಗೆ ತಿಳಿದುಕೊಳ್ಳುವುದು ನ್ಯಾಯದ ಹಿತಾಸಕ್ತಿ ಎಂದು ಪೀಠ ಹೇಳಿದೆ.

ವಕೀಲ ಸತ್ಯ ಸಬರ್ವಾಲ್ ಸಲ್ಲಿಸಿದ ಸುಬ್ರಮಣಿಯನ್ ಸ್ವಾಮಿ ಅವರ ಮನವಿಯಲ್ಲಿ, ಆಗಸ್ಟ್ 6, 2019 ರಂದು, ಅರ್ಜಿದಾರರು ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟಿಷ್ ರಾಷ್ಟ್ರೀಯತೆಯ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಸ್ವಯಂಪ್ರೇರಿತವಾಗಿ ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೂ ಮೊದಲು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು 1955 ರ ಪೌರತ್ವ ಕಾಯ್ದೆಯ ಅಡಿಯಲ್ಲಿ ಸಲ್ಲಿಸಲಾದ ಪ್ರಾತಿನಿಧ್ಯದ ಕುರಿತು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿದೆಯೇ ಎಂದು ಕೇಂದ್ರವನ್ನು ಕೇಳಿದೆ, ಆರೋಪಗಳನ್ನು ವಿಚಾರಣೆ ಮಾಡುವಂತೆ ಕೇಳಿದೆ.

ಕರ್ನಾಟಕದಿಂದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ವಿಚಾರಣೆ ನಡೆಸುತ್ತಿದೆ. ಅವರು ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿರುವ ವಿಷಯದ ಬಗ್ಗೆ ವಿವರವಾದ ವಿಚಾರಣೆಯನ್ನು ಮಾದ್ದು, ಹಲವಾರು ಹೊಸ ಮಾಃಇತಿಗಳನ್ನು ಪಡೆದಿದ್ದಾರೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ‘ಇನ್ನಾದರೂ ಪಾಠ ಕಲಿಯಿರಿ’: ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...