Homeಕರ್ನಾಟಕಶಾಸಕ ಬಿ.ನಾಗೇಂದ್ರ ವಾಲ್ಮೀಕಿ ನಿಗಮ ಅಕ್ರಮದ ರೂವಾರಿ : ಇಡಿ

ಶಾಸಕ ಬಿ.ನಾಗೇಂದ್ರ ವಾಲ್ಮೀಕಿ ನಿಗಮ ಅಕ್ರಮದ ರೂವಾರಿ : ಇಡಿ

- Advertisement -
- Advertisement -

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನಿಧಿ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಪ್ರಾಸಿಕ್ಯೂಷನ್ ದೂರು ಅಥವಾ ಆರೋಪ ಪಟ್ಟಿಯನ್ನು ಸಲ್ಲಿಸಿದೆ.

ನ್ಯಾಯಾಲಯ ಆರೋಪ ಪಟ್ಟಿ ಪರಿಗಣಿಸಿ ದೂರು ದಾಖಲಿಸಿಕೊಂಡಿದೆ ಎಂದು ಇಡಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದೆ.

ವರದಿಗಳ ಪ್ರಕಾರ, ವಾಲ್ಮೀಕಿ ನಿಗಮದ ನಿಧಿ ದುರ್ಬಳಕೆ ಪ್ರಕರಣ ಅಥವಾ ಬಹುಕೋಟಿ ಹಗರಣದ ಸೂತ್ರದಾರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಎಂದು ಇಡಿ ದೂರಿನಲ್ಲಿ ವಿವರಿಸಿದೆ.

ನಿಗಮವು ಬೇರೆ ಬೇರೆ ಬ್ಯಾಂಕ್‌ ಖಾತೆಗಳಲ್ಲಿ ಹೊಂದಿದ್ದ ಠೇವಣಿಯನ್ನು ಅನಧಿಕೃತವಾಗಿ ಬೆಂಗಳೂರಿನ ಎಂ.ಜಿ ರಸ್ತೆಯ ಬ್ಯಾಂಕ್ ಖಾತೆಯೊಂದಕ್ಕೆ ವರ್ಗಾಯಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ 43.33 ಕೋಟಿ ರೂಪಾಯಿಯನ್ನು ಖಜಾನೆಯಿಂದ ಅಕ್ರಮವಾಗಿ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಿದೆ.

ಅಕ್ರಮವಾಗಿ ವರ್ಗಾವಣೆ ಮಾಡಲಾದ ರೂ. 89.62 ಕೋಟಿಯಲ್ಲಿ, ರೂ.20.19 ಕೋಟಿಯನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಇದಕ್ಕೆ ನಾಗೇಂದ್ರ ಅವರ ಆಪ್ತ ವಿಜಯ್‌ ಕುಮಾರ್ ಅವರ ಮೊಬೈಲ್‌ನಲ್ಲಿ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ವಿವರಿಸಿದೆ.

ಶಾಸಕ ನಾಗೇಂದ್ರ ಜೊತೆ ಸತ್ಯನಾರಾಯಣ ವರ್ಮ, ಎಟಕಾರಿ ಸತ್ಯನಾರಾಯಣ, ಜೆಜಿ ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕಂಟಿ ನಾಗರಾಜ್, ವಿಜಯ್ ಕುಮಾರ್ ಗೌಡ ಹಾಗೂ ಇನ್ನೂ 18 ಆರೋಪಿಗಳ ಹೆಸರನ್ನು ಇಡಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರತಿ ಗಲ್ಲಿಯೂ ಜಂತರ್ ಮಂತರ್..’; ಎಸ್‌ಐಆರ್‌ ವಿರುದ್ಧ ಅ.23ರಂದು ದೇಶಾದ್ಯಂತ ಪ್ರತಿಭಟನೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರನ್ನು ಸಂಸತ್ತಿನ ಮೂಲಕ ಪದಚ್ಯುತಗೊಳಿಸಬೇಕು ಹಾಗೂ "ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು" ಎಂದು ಆಗ್ರಹಿಸಿ "ಪೀಪಲ್‌...

SIR ಅಂತಿಮ ಪಟ್ಟಿಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳಲ್ಲಿ ಬದಲಾವಣೆ : ಯುಪಿಯಲ್ಲಿ ಮತಗಳ್ಳತನದ ಹೊಸ ಸಂಚು ಬೆಳಕಿಗೆ; ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಉತ್ತರ ಪ್ರದೇಶದ ಪಿಲಿಭಿತ್ ವಿಧಾನಸಭಾ ಕ್ಷೇತ್ರದ ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ (ಅಕ್ಟೋಬರ್ 21) ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೂಚಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಮತದಾರರ ಗುರುತಿನ...

ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ ಮೆರವಣಿಗೆ; ಎಸ್‌ಐಆರ್ ವಿರೋಧಿ ಪ್ರತಿಭಟನೆ ನಿಮ್ಮೂರಲ್ಲೆಲ್ಲಿ ಗೊತ್ತಾ?

ಎಸ್ಐಆರ್ ರದ್ದುಪಡಿಸುವಂತೆ ಆಗ್ರಹಿಸಿ ಹಾಗೂ ನವದೆಹಲಿಯ 'ಜಂತರ್ ಮಂತರ್' ಮೈದಾನದಲ್ಲಿ ಪ್ರತಿಭಟನೆ ಮಾಡದಂತೆ ನಿರ್ಬಂಧಿಸಿರುವ ದೆಹಲಿ ಪೊಲೀಸರ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ದೇಶದಾದ್ಯಂತ ಜನಪರ ಸಂಘಟನೆಗಳು ಏಕಕಾಲದಲ್ಲಿ 'ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ...

‘ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..’; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ ಝೆಲೆನ್‌ಸ್ಕಿ?

ರಷ್ಯಾದೊಂದಿಗಿನ ಶಾಂತಿ ಒಪ್ಪಂದದ ಭಾಗವಾಗಿ ಪ್ರಸ್ತುತ ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಲು ಸಿದ್ಧವಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. 2022ರ ಫೆಬ್ರವರಿಯಲ್ಲಿ ಆರಂಭವಾದ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ...

ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ...

ಸಿಇಸಿ ಗ್ಯಾನೇಶ್ ಕುಮಾರ್ ಸಹೋದರನ ನೇತೃತ್ವದ ದೆಹಲಿ ಕಸ್ಟಮ್ಸ್‌ನಲ್ಲಿ ಪಂಜಾಬ್‌ ಮುಖ್ಯಮಂತ್ರಿಯನ್ನು ತಡೆದು ದಂಡ ವಿಧಿಸಲಾಯಿತೇ?

ಪ್ರಸ್ತುತ ಇಡೀ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಸಹೋದರ ಮನೀಶ್ ಕುಮಾರ್ ಮುಖ್ಯ ಆಯುಕ್ತರಾಗಿರುವ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ...

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು...