Homeಫ್ಯಾಕ್ಟ್‌ಚೆಕ್FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಮೊಬೈಲ್‌ ಕಿತ್ತುಕೊಂಡಿದ್ದಕ್ಕೆ ಮಗುವೊಂದು ಬ್ಯಾಟ್‌ನಿಂದ ತನ್ನ ತಾಯಿಯ ತಲೆಗೆ ಹೊಡೆದ ವಿಡಿಯೋವೊಂದು ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ವಿಡಿಯೋ ಹಂಚಿಕೊಂಡ ಅನೇಕರು “ಇದು ನಿಮ್ಮ ಮನೆಯಲ್ಲೂ ಸಂಭವಿಸಬಹುದು” ಎಂದು ಬರೆದುಕೊಂಡಿದ್ದರು. ಕೆಲ ಮಾಧ್ಯಮಗಳು ಕೂಡ ವಿಡಿಯೋ ಹಂಚಿಕೊಂಡಿತ್ತು.

ವಿಡಿಯೋದಲ್ಲಿ ಬೆಡ್ ಮೇಲೆ ಕುಳಿತು ಮೊಬೈಲ್ ಒತ್ತುತ್ತಿದ್ದ ಮಗುವಿನ ಕೈಯಿಂದ ಮೊಬೈಲ್ ಕಿತ್ತುಕೊಳ್ಳುವ ತಾಯಿ ಗದರಿಸುತ್ತಾರೆ, ಓದುವಂತೆ ಸೂಚಿಸುತ್ತಾರೆ. ತಾಯಿಯ ಬೈಗುಳಕ್ಕೆ ಮಗು ಪಕ್ಕದಲ್ಲಿರುವ ಪುಸ್ತಕ ಎತ್ತಿಕೊಂಡು ಓದಲು ಶುರು ಮಾಡುತ್ತದೆ. ತಾಯಿ ನೆಲದಲ್ಲಿ ಕುಳಿತು ಊಟ ಮಾಡುತ್ತಿರುತ್ತಾರೆ. ಸ್ವಲ್ಪ ಹೊತ್ತಿನ ಬಳಿಕ ಮಗು ಪಕ್ಕದಲೇ ಇದ್ದ ಕ್ರಿಕೆಟ್ ಬ್ಯಾಟ್‌ ತೆಗೆದುಕೊಂಡು ತಾಯಿಯ ತಲೆಗೆ ಹೊಡೆಯುವ ದೃಶ್ಯವಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನಿಜವಾದುದ್ದು ಅಲ್ಲ, ಅದೊಂದು ಸ್ಕ್ರಿಪ್ಟೆಡ್ ವಿಡಿಯೋ ಆಗಿದೆ. ಮೊಬೈಲ್ ದುಷ್ಪರಿಣಾಮಗಳ ಕುರಿತು ಮಾಡಿದ ಜಾಗೃತಿ ವಿಡಿಯೋ.

‘ಐಡಿಯಾಸ್ ಫ್ಯಾಕ್ಟರಿ’ ಎಂಬ ಫೇಸ್‌ಬುಕ್ ಪೇಜ್ ನಿಯಮಿತವಾಗಿ ಇಂತಹ ವಿಡಿಯೋಗಳನ್ನು ಮಾಡುತ್ತಿರುತ್ತದೆ. ವಿಡಿಯೋ ಪೋಸ್ಟ್ ಮಾಡುವಾಗ “ಇದು ಸ್ಕ್ರಿಪ್ಟೆಡ್ ವಿಡಿಯೋ, ಮನೋರಂಜನೆ ಮತ್ತು ಶೈಕ್ಷಣಿಕ” ಉದ್ದೇಶಕ್ಕೆ ಮಾಡಲಾಗಿದೆ ಎಂದು ಸೂಚನೆಯನ್ನೂ ಪೇಜ್‌ನಲ್ಲಿ ನೀಡುತ್ತದೆ.

ತಾಯಿಯ ತಲೆಗೆ ಮಗು ಬ್ಯಾಟ್‌ನಿಂಡ ಹೊಡೆದ ವಿಡಿಯೋಗು “ಇದು ಸ್ಕ್ರಿಪ್ಟೆಡ್ ವಿಡಿಯೋ” ಎಂದು ಫೇಸ್‌ಬುಕ್ ಪೇಜ್ ಸೂಚನೆ ಹಾಕಿತ್ತು.

ಅಕ್ಟೋಬರ್ 1ರಂದು ಕೂಡ ವೈರಲ್ ವಿಡಿಯೋ ರೀತಿಯದ್ದೇ ಮತ್ತೊಂದು ವಿಡಿಯೋವನ್ನ ಐಡಿಯಾಸ್ ಫ್ಯಾಕ್ಟರಿ ಹಂಚಿಕೊಂಡಿತ್ತು. ಅದರಲ್ಲೂ ಮೊಬೈಲ್ ದುಷ್ಪರಿಣಾಮಗಳ ಕುರಿತ ದೃಶ್ಯವೊಂದನ್ನು ತೋರಿಸಿತ್ತು. ಆ ವಿಡಿಯೋ ಮತ್ತು ವೈರಲ್ ಆಗುತ್ತಿರುವ ವಿಡಿಯೋ ಒಂದೇ ಜಾಗದಲ್ಲಿ ಶೂಟ್ ಮಾಡಲಾಗಿತ್ತು. ಎರಡೂ ವಿಡಿಯೋಗಳಲ್ಲೂ ಟಿವಿ, ಫೋಟೋ ಒಂದೇ ರೀತಿ ಇರುವುದನ್ನು ನೋಡಬಹುದು.

ಒಟ್ಟಿನಲ್ಲಿ ಐಡಿಯಾಸ್ ಫ್ಯಾಕ್ಟರಿ ಎಂಬ ಫೇಸ್‌ಬುಕ್ ಪೇಜ್ ಜಾಗೃತಿ, ಮನೋರಂಜನೆ ಮತ್ತು ಶೈಕ್ಷಣಿಕ ಉದ್ದೇಶಕ್ಕೆ ಮಾಡಿದ ಸ್ಕ್ರಿಪ್ಟೆಡ್ ವಿಡಿಯೋ ನಿಜ ಎಂಬಂತೆ ವೈರಲ್ ಆಗಿದೆ.

ಇದನ್ನೂ ಓದಿ : FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...