Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ದೆಹಲಿ ಬಿಜೆಪಿಯ ಮಾಜಿ ಶಾಸಕರೊಬ್ಬರು ಅಮೆರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಅವರ ಪಕ್ಷದ ಪರವಾಗಿರುವ ರಿಪಬ್ಲಿಕನ್ ಹಿಂದೂ ಒಕ್ಕೂಟದೊಂದಿಗೆ ಆನ್‌ಲೈನ್ ಕಾರ್ಯಕ್ರಮ ಆಯೋಜಿಸಿದ್ದು ವಿವಾದವಾಗಿದೆ. ಅದಾಗ್ಯೂ ಬಿಜೆಪಿ ಇದರಿಂದ ಅಂತರ ಕಾಪಾಡಿಕೊಂಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಹೇಳಿದೆ. ಟ್ರಂಪ್ ಪರವಾಗಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 5 ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ವಿವಾದಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಭಾಗವಹಿಸುವ ರಿಪಬ್ಲಿಕನ್ ಹಿಂದೂ ಒಕ್ಕೂಟವನ್ನು 2015 ರಲ್ಲಿ ಹಿಂದೂ-ಅಮೇರಿಕನ್ ಸಮುದಾಯ ಮತ್ತು ರಿಪಬ್ಲಿಕನ್ ಪ್ರತಿನಿಧಿಗಳ ನಡುವಿನ “ವಿಶಿಷ್ಟ ಸೇತುವೆ” ಎಂದು ಸ್ಥಾಪಿಸಲಾಯಿತು.

ಇದನ್ನೂ ಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ರಿಪಬ್ಲಿಕನ್‌ ಹಿಂದೂ ಒಕ್ಕೂಟದ ಅಧ್ಯಕ್ಷ ಶಲಭ್ ಕುಮಾರ್ ಅವರೊಂದಿಗೆ ದೆಹಲಿಯ ಮಾಜಿ ಶಾಸಕ ವಿಜಯ್ ಜಾಲಿ ಅವರು ಆಯೋಜಿಸುತ್ತಿರುವ ಆನ್‌ಲೈನ್ ಸಭೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಬುಧವಾರ ಹೇಳಿದ್ದಾರೆ. ಟ್ರಂಪ್ ಪರವಾಗಿ ಸಭೆ

“ಬಿಜೆಪಿಯ ಹಿರಿಯ ನಾಯಕ ಎಂದು ಘೋಷಿತವಾಗಿರುವ ವಿಜಯ್ ಜಾಲಿ ಅವರು ಅಮೆರಿಕ ಚುನಾವಣೆಯ ಇಬ್ಬರು ಪ್ರಮುಖ ಅಧ್ಯಕ್ಷೀಯ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಬೆಂಬಲಿಸುವ ಆನ್‌ಲೈನ್ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ತರಲಾಗಿದೆ. ಈ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ.” ಎಂದು ಚೌತೈವಾಲೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗಳು ಅಲ್ಲಿನ ಆಂತರಿಕ ವಿಷಯ ಎಂಬ ವಿಚಾರದಲ್ಲಿ ಬಿಜೆಪಿಗೆ “ಬಹಳ ಸ್ಪಷ್ಟ” ನಿಲುವಿದೆ. ಬಿಜೆಪಿ ಆ ದೇಶದಲ್ಲಿ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಚೌತೈವಾಲೆ ಅವರು ಹೇಳಿದ್ದಾರೆ.

ಇದನ್ನೂಓದಿ: ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

ದೆಹಲಿಯ ಸಾಕೇತ್ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸುವ ಜಾಲಿ ಅವರು ದ್ವಿಪಕ್ಷೀಯ ವೇದಿಕೆಯಾದ ದೆಹಲಿ ಸ್ಟಡಿ ಸರ್ಕಲ್‌ನ ಆಶ್ರಯದಲ್ಲಿ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ದಿ ಹಿಂದೂಗೆ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಗೂ ಅಥವಾ ಅಮೆರಿಕದ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.

“ಇದಲ್ಲದೆ, ಶಲಭ್ ಕುಮಾರ್ ಅವರು ದೀರ್ಘಕಾಲದವರೆಗೆ ಬಿಜೆಪಿಗೆ ಪರಿಚಿತರಾಗಿದ್ದಾರೆ. ಅವರು ಅಮೆರಿಕಾದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಾಲ್ವರು ರಿಪಬ್ಲಿಕನ್ ಸಂಸದರ ಭೇಟಿಯನ್ನು ಏರ್ಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು” ಅವರು ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

“ಆ ಸಮಯದಲ್ಲಿ ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ತೆಗೆದುಕೊಂಡ ಧೋರಣೆ ಹೊರತಾಗಿಯೂ ಈ ರಿಪಬ್ಲಿಕನ್ ಸಂಸದರು ಮೋದಿ ಅವರಿಗೆ ಆಹ್ವಾನವನ್ನು ನೀಡಿದ್ದರು.” ಎಂದು ಅವರು ಹೇಳಿದ್ದಾರೆ. 2002ರ ಗುಜರಾತ್ ಗಲಭೆಯ ಕಾರಣಕ್ಕೆ 2005 ರಲ್ಲಿ, ಅಮೆರಿಕಾ ಸರ್ಕಾರವು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರಿಗೆ ರಾಜತಾಂತ್ರಿಕ ವೀಸಾವನ್ನು ನಿರಾಕರಿಸಿತ್ತು.

ವಿಡಿಯೊನೋಡಿ: ‘ರಾಷ್ಟ್ರೀಯ ವಿಜ್ಞಾನ‌ ದಿನ’ ಪ್ರಯುಕ್ತ ವಿಚಾರ ಕ್ರಾಂತಿ-ರಾಜ್ಯಮಟ್ಟದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...