Homeಮುಖಪುಟಓಲಾ ವಿವಾದ | ಗ್ರಾಹಕ ಹಕ್ಕುಗಳ ಉಲ್ಲಂಘನೆಯ ಕುರಿತು ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಆದೇಶ

ಓಲಾ ವಿವಾದ | ಗ್ರಾಹಕ ಹಕ್ಕುಗಳ ಉಲ್ಲಂಘನೆಯ ಕುರಿತು ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಆದೇಶ

- Advertisement -
- Advertisement -

ಓಲಾ ಎಲೆಕ್ಟ್ರಿಕ್‌ನಿಂದ ಗ್ರಾಹಕರ ಹಕ್ಕುಗಳ ಉಲ್ಲಂಘನೆಯ ಆರೋಪಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ಬುಧವಾರ ಆದೇಶಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ತನ್ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಪರೀಕ್ಷಾ ಸಂಸ್ಥೆಯಾದ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ​​ಆಫ್ ಇಂಡಿಯಾಗೆ ಈ ಬಗ್ಗೆ ಕೇಳಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.ಓಲಾ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲೆಕ್ಟ್ರಿಕ್ ಸ್ಕೂಟರ್ ತಯಾರಕರಾಗಿರುವ ಓಲಾ ಎಲೆಕ್ಟ್ರಿಕ್ ಸಂಸ್ಥೆಯು ವಾಹನ ತಯಾರಿಕೆ ಮತ್ತು ಅಳವಡಿಕೆಗಾಗಿ ಕೇಂದ್ರ ಸರ್ಕಾರದ ಕನಿಷ್ಠ ಎರಡು ಪ್ರೋತ್ಸಾಹ ಯೋಜನೆಗಳ ಫಲಾನುಭವಿಯಾಗಿದೆ.ಓಲಾ ವಿವಾದ

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

ದಾರಿತಪ್ಪಿಸುವ ಜಾಹೀರಾತುಗಳು ಮತ್ತು ಅನ್ಯಾಯದ ವ್ಯಾಪಾರ ಪ್ರಕ್ರಿಯೆಗಳಿಗಾಗಿ ಓಲಾ ಎಲೆಕ್ಟ್ರಿಕ್‌ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಶೋಕಾಸ್ ನೋಟಿಸ್ ನೀಡಿದ್ದು, ಅದರ ನಂತರ ಕೇಂದ್ರ ಸರ್ಕಾರ ಈ ಆದೇಶ ನೀಡಿದೆ. 2023ರ ಸೆಪ್ಟೆಂಬರ್ 1ರಿಂದ 2024ರ ಆಗಸ್ಟ್ 30ರ ನಡುವೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ಸ್ವೀಕರಿಸಿದ ಗ್ರಾಹಕರ 9,948 ದೂರುಗಳನ್ನು ಆಧರಿಸಿ ಈ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಕಂಪನಿಯ ಉಚಿತ ಸೇವಾ ಅವಧಿಯಲ್ಲಿ ಬಿಲ್ಲಿಂಗ್ ಮಾಡಿದ್ದು, ಗ್ರಾಹಕರಿಗೆ ವಾಹನ ವಿತರಣೆ ಮತ್ತು ರಿಪೇರಿಯಲ್ಲಿ ವಿಳಂಬ ಮಾಡಿರುವ ಬಗ್ಗೆ ಆರೋಪಿಸಲಾಗಿದೆ.

ಇದನ್ನೂಓದಿ: ‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

ಗ್ರಾಹಕರ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸಲು ಎರಡು ಪ್ರೋತ್ಸಾಹಕ ಯೋಜನೆಗಳ ಅಡಿಯಲ್ಲಿ ಪ್ರತಿ ವಾಹನ ತಯಾರಕರು ಸಾಕಷ್ಟು ಸೇವಾ ಕೇಂದ್ರಗಳನ್ನು ಹೊಂದಿರಬೇಕು ಎಂದು ಸಚಿವಾಲಯ ಹೇಳಿದೆ. ಓಲಾ ಎಲೆಕ್ಟ್ರಿಕ್ ಸಂಸ್ಥೆ ಸೇರಿದಂತೆ ಈ ಪ್ರೋತ್ಸಾಹಕ ಯೋಜನೆ ಪಡೆದ ಕಂಪನಿಗಳು ಗ್ರಾಹಕರಿಗೆ ವಾರಂಟಿಗಳನ್ನು ನೀಡಬೇಕಾಗುತ್ತದೆ.

ಒಂದು ವರ್ಷದ ಹಿಂದೆಯೇ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪರಿಹರಿಸುವಲ್ಲಿ ಓಲಾ ಎಲೆಕ್ಟ್ರಿಕ್ ವಿಫಲವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಓಲಾ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಿಶ್ ಅಗರ್ವಾಲ್ ಅವರು ಹಾಸ್ಯನಟ ಕುನಾಲ್ ಕಮ್ರಾ ಅವರೊಂದಿಗೆ ಆನ್‌ಲೈನ್ ಜಗಳ ಮಾಡಿದ ನಂತರ ಸಂಸ್ಥೆಯ ಮೌಲ್ಯ 8% ಕ್ಕಿಂತ ಹೆಚ್ಚು ಕುಸಿದಿರುವ ಬಗ್ಗೆ ವರದಿಯಾಗಿತ್ತು.

ವಿಡಿಯೊ ನೋಡಿ: UCC ಎಂದರೇನು? ಅದರಲ್ಲಿ ಏನಿದೆಯೆಂದು ತಿಳಿಯದೇ ಅಭಿಪ್ರಾಯ ಹೇಳುವುದು ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...