Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...