Homeಮುಖಪುಟ'ಸತಿ ಸಹಗಮನ' ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

‘ಸತಿ ಸಹಗಮನ’ ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಭಾರತದಲ್ಲಿ ಕೊನೆಯದಾಗಿ ವರದಿಯಾಗಿದ್ದು ಎನ್ನಲಾದ ಸತಿ ಸಹಗಮನ ಪ್ರಕರಣದ ಎಂಟು ಮಂದಿ ಆರೋಪಿಗಳನ್ನು ರಾಜಸ್ಥಾನದ ಜೈಪುರದ ವಿಶೇಷ ನ್ಯಾಯಾಲಯವು ಬುಧವಾರ ದೋಷಮುಕ್ತಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಗಂಡ ಸತ್ತರೆ ಆತನ ಅಂತ್ಯಕ್ರಿಯೆಯ ವೇಳೆ ಹೆಂಡತಿಯೂ ಚಿತೆಗೆ ಹಾರಿ ಪ್ರಾಣ ಬಿಡಬೇಕೆಂಬ ಬಲವಂತ ಈ ಅನಿಷ್ಟ ಪದ್ದತಿಯನ್ನು 1829 ರಲ್ಲಿ ನಿಷೇಧಿಸಲಾಗಿದೆ.

ವರದಿಗಳ ಪ್ರಕಾರ, ಕೊನೆಯದಾಗಿ ಸೆಪ್ಟೆಂಬರ್ 4, 1987ರಂದು ರಾಜಸ್ಥಾನದಲ್ಲಿ ಸತಿ ಪದ್ದತಿ ಆಚರಣೆ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ರೂಪ್ ಕನ್ವರ್ ಎಂಬ ಮಹಿಳೆಯನ್ನು ಆಕೆಯ ಗಂಡನ ಅಂತ್ಯಕ್ರಿಯೆ ವೇಳೆ ಬಲವಂತವಾಗಿ ಚಿತೆಗೆ ತಳ್ಳಿ ಸಜೀವ ದಹನ ಮಾಡಲಾಗಿತ್ತು.

1988ರಲ್ಲಿ, ಈ ಸಂಬಂಧ ಒಟ್ಟು 45 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಅನ್ನು ಉಲ್ಲಂಘಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ಆಚರಣೆಯ ವೈಭವೀಕರಣ ಅಥವಾ ಪ್ರಚಾರ ಮಾಡುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಬುಧವಾರ, ನ್ಯಾಯಾಲಯವು 45 ಆರೋಪಿಗಳಲ್ಲಿ ಎಂಟು ಜನರನ್ನು ದೋಷಮುಕ್ತಗೊಳಿಸಿದೆ ಎಂದು ಪರ ಅವರ ವಕೀಲ ಅಮನ್ ಚೈನ್ ಸಿಂಗ್ ಶೇಖಾವತ್ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳ ಪರ ವಕೀಲರ ಪ್ರಕಾರ, ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ವೈಭವೀಕರಣ ಅಥವಾ ಪ್ರಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕೂ ಮುನ್ನ ಸೆಕ್ಷನ್ 3ರ ಅಡಿ ಸತಿ ಸಹಗಮನ ನಡೆದಿದೆ ಎಂಬುವುದು ರುಜುವಾತಾಗಬೇಕಿದೆ. ಪ್ರಾಸಿಕ್ಯೂಷನ್ ಸೆಕ್ಷನ್ 3ರಡಿ ಸತಿ ಸಹಗಮನ ನಡೆದಿರುವುದನ್ನು ದೃಢೀಕರಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಮಹೇಂದ್ರ ಸಿಂಗ್, ಶ್ರವಣ್ ಸಿಂಗ್, ನಿಹಾಲ್ ಸಿಂಗ್, ಜಿತೇಂದ್ರ ಸಿಂಗ್, ಉದಯ್ ಸಿಂಗ್, ದಶರಥ್ ಸಿಂಗ್, ಲಕ್ಷ್ಮಣ್ ಸಿಂಗ್ ಮತ್ತು ಭನ್ವರ್ ಸಿಂಗ್ ಖುಲಾಸೆಗೊಂಡ ಆರೋಪಿಗಳು. ಇವರಿಗೆ ಈ ಪ್ರಕರಣದಲ್ಲಿ ಈಗಾಗಲೇ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ 25 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ 2004ರಲ್ಲಿ ಖುಲಾಸೆಗೊಳಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಉಳಿದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ವರದಿಯಲ್ಲಿ ಉಲ್ಲೇಖಿಸಿದ ಪ್ರಕರಣವನ್ನು ಭಾರತದಲ್ಲಿ ವರದಿಯಾದ ಕೊನೆಯ ಸತಿ ಸಹಗಮನ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವತೆ ಬೇರೆಯೇ ಇದೆ. ನೇರವಾಗಿ ನಡೆಯದಿದ್ದರೂ, ವಿವಿಧ ರೂಪಗಳಲ್ಲಿ ಈ ಅನಿಷ್ಟ ಪದ್ದತಿ ಈಗಲೂ ಚಾಲ್ತಿಯಲ್ಲಿದೆ. ಅದನ್ನು ದೃಢೀಕರಿಸುವ ಘಟನೆಗಳು ಹಲವು ಭಾರೀ ನಡೆದಿದೆ. ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ಘಟನೆಯ ವರದಿಯೊಂದು ಕೆಳಗಿದೆ.

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...