Homeಮುಖಪುಟಉತ್ತರ ಪ್ರದೇಶ ಉಪಚುನಾವಣೆ | ಕಾಂಗ್ರೆಸ್ ಜೊತೆ ಒಗ್ಗಟ್ಟಿನ ಹೋರಾಟ ಎಂದ ಅಖಿಲೇಶ್; ಏಕಾಂಗಿಯಾಗಿ ಅಭ್ಯರ್ಥಿ...

ಉತ್ತರ ಪ್ರದೇಶ ಉಪಚುನಾವಣೆ | ಕಾಂಗ್ರೆಸ್ ಜೊತೆ ಒಗ್ಗಟ್ಟಿನ ಹೋರಾಟ ಎಂದ ಅಖಿಲೇಶ್; ಏಕಾಂಗಿಯಾಗಿ ಅಭ್ಯರ್ಥಿ ಘೋಷಣೆ!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಎರಡು ದಿನಗಳ ನಂತರ ಅಖಿಲೇಶ್ ಯಾದವ್ ಅವರು ಗುರುವಾರ ಈ ಹೇಳಿಕೆ ನೀಡಿದ್ದಾರೆ.ಯುಪಿ ಉಪಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಾಜವಾದಿ ಪಕ್ಷವು ರಾಜ್ಯದ ಆರು ಉಪಚುನಾವಣೆ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಒಂದು ದಿನದ ನಂತರ ಅಖಿಲೇಶ್‌ ಅವರು ಈ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟ ಅಖಂಡವಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಉಪಚುನಾವಣೆಯ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಬೆಂಗಳೂರು | ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ : ಆರೋಪಿ ಕೆಲಸದಿಂದ ವಜಾ, ಪ್ರಕರಣ ದಾಖಲು

ರಾಜ್ಯದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಒಂಬತ್ತು ಸ್ಥಾನಗಳು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾದ ಕ್ಷೇತ್ರಗಳಾಗಿವೆ. ಉಳಿದ ಒಂದು ಕ್ಷೇತ್ರವಾದ ಸಿಸಮಾವು ಕ್ಷೇತ್ರದ ಹಾಲಿ ಶಾಸಕ ಇರ್ಫಾನ್ ಸೋಲಂಕಿ ಅವರನ್ನು ಬೆಂಕಿ ಹಚ್ಚಿದ ಪ್ರಕರಣದಲ್ಲಿ ದೋಷಿ ಎಂದು ಅನರ್ಹಗೊಳಿಸಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ.

ಬುಧವಾರದಂದು ಸಮಾಜವಾದಿ ಪಕ್ಷವು ಕರ್ಹಾಲ್ ಕ್ಷೇತ್ರದಿಂದ ತೇಜ್ ಪ್ರತಾಪ್ ಸಿಂಗ್ ಯಾದವ್, ಕಟೆಹ್ರಿಯಿಂದ ಶೋಭಾವತಿ ವರ್ಮಾ, ಸಿಸಾಮೌದಿಂದ ನಸೀಮ್ ಸೋಲಂಕಿ, ಮಿಲ್ಕಿಪುರದಿಂದ ಅಜೀತ್ ಪ್ರಸಾದ್, ಫುಲ್ಪುರದಿಂದ ಮುಸ್ತಫಾ ಸಿದ್ದಿಕಿ ಮತ್ತು ಮಜ್ವಾದಿಂದ ಜ್ಯೋತಿ ಬಿಂದ್ ಅವರನ್ನು ಅಭ್ಯರ್ಥಿಯನ್ನಾಗಿ ಪಟ್ಟಿ ಮಾಡಿದೆ.ಯುಪಿ ಉಪಚುನಾವಣೆ

ಈ ಘೋಷಣೆಯ ನಂತರ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅವಿನಾಶ್ ಪಾಂಡೆ ಅವರು ಈ ನಿರ್ಧಾರದ ಬಗ್ಗೆ ಸಮಾಜವಾದಿ ಪಕ್ಷವು ನಮಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಉಪ ಚುನಾವಣೆ ಬಗ್ಗೆ ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಬೈರುತ್‌ ಮೇಲೆ ಮುಂದುವರಿದ ಇಸ್ರೇಲ್ ವೈಮಾನಿಕ ದಾಳಿ; ಕನಿಷ್ಠ 22 ಮಂದಿ ಸಾವು, ಯುಎನ್ ಶಾಂತಿಪಾಲಕರ ಮೇಲೆ ಗುಂಡು!

“ಸೀಟುಗಳ ಘೋಷಣೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ, ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅದನ್ನು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಒಪ್ಪಿಕೊಳ್ಳುತ್ತದೆ” ಎಂದು ಪಾಂಡೆ ಹೇಳಿದ್ದಾರೆ.

ಇತ್ತಿಚೆಗೆ ನಡೆದ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿದೆ. 2019 ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 40 ಸ್ಥಾನಗಳಷ್ಟೆ ಗೆದ್ದಿತ್ತು.

ಆದರೆ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿದೆ.

ವಿಡಿಯೊ ನೋಡಿ: ಇದ್ರೀಸ್ ಪಾಷರನ್ನು ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲಿ; ಸ್ಥಳೀಯ ನಿವಾಸಿಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...