ಇತ್ತಿಚೆಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಮೊದಲ ಬಾರಿಗೆ ಖಾತೆ ತೆರೆದಿರುವ ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಶುಕ್ರವಾರ ಹೇಳಿದೆ ಎಂದು ಎಎನ್‌ಐ ವರದಿ ಮಾಡಿದೆ. ಪಕ್ಷದ ಏಕೈಕ ಚುನಾಯಿತ ಶಾಸಕರಾದ ಮೆಹ್ರಾಜ್ ಮಲಿಕ್ ಅವರು ಪಕ್ಷದ ಬೆಂಬಲ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಸಲ್ಲಿಸಿದ್ದಾರೆ. ಜಮ್ಮು ಕಾಶ್ಮೀರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಮೆಹ್ರಾಜ್ ಮಲಿಕ್ ಅವರು ರಾಜ್ಯದ ದೋಡಾ ಸ್ಥಾನವನ್ನು ಗೆದ್ದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ನ್ಯಾಷನಲ್ ಕಾನ್ಫರೆನ್ಸ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ
ಇದನ್ನೂಓದಿ: ಭಯೋತ್ಪಾದನೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್
ಸ್ಪರ್ಧಿಸಿದ್ದ 90 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದುಕೊಂಡಿದೆ. ಜೊತೆಗೆ ಮೈತ್ರಿಯ ಮತ್ತೊಂದು ಮಿತ್ರಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಂದು ಸ್ಥಾನವನ್ನು ಗೆದ್ದಿದೆ.
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಎಎಪಿ ಹೇಳಿದ ಎರಡೇ ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.
ಇದನ್ನೂಓದಿ: ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ; ನಾಸಿಕ್‌ನಲ್ಲಿ ಇಬ್ಬರು ಅಗ್ನಿವೀರ್‌ಗಳ ಸಾವು
“ಕಳೆದ 10 ವರ್ಷಗಳಿಂದ ದೆಹಲಿ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶೂನ್ಯ ಸ್ಥಾನಗಳನ್ನು ಹೊಂದಿದೆ, ಆದರೂ ಎಎಪಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮೂರು ಸ್ಥಾನಗಳನ್ನು ನೀಡಿತು. ಅದಾಗ್ಯೂ, ಹರಿಯಾಣದಲ್ಲಿ ಮಿತ್ರಪಕ್ಷಗಳನ್ನು ಒಟ್ಟಿಗೆ ಕರೆದೊಯ್ಯುವ ಅಗತ್ಯದ ಬಗ್ಗೆ ಕಾಂಗ್ರೆಸ್ ಯೋಚಿಸಲಿಲ್ಲ” ಎಂದು ಪಕ್ಷದ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಮುರಿದುಬಿದ್ದಿತ್ತು. ಹಾಗಾಗಿ ಎಎಪಿ ಹರಿಯಾಣದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಆ ಚುನಾವಣೆಯಲ್ಲಿ 90 ಸದಸ್ಯ ಬಲದ ಸದನದಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿದ್ದರೆ, ಆಮ್ ಆದ್ಮಿ ಪಕ್ಷ ಒಂದನ್ನೂ ಗೆಲ್ಲಲಿಲ್ಲ.
ಜಮ್ಮು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಅವರ ಸರ್ಕಾರಕ್ಕೆ ಎಎಪಿ ಔಪಚಾರಿಕವಾಗಿ ತನ್ನ ಬೆಂಬಲವನ್ನು ನೀಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಇಷ್ಟೆ ಅಲ್ಲದೆ, ಗುರುವಾರ ನಾಲ್ವರು ಪಕ್ಷೇತರ ಶಾಸಕರು ಕೂಡ ನ್ಯಾಷನಲ್ ಕಾನ್ಫರೆನ್ಸ್‌ಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ.
ವಿಡಿಯೊ ನೋಡಿ: ಭಾರತಕ್ಕೆ ಶೇರು ಮಾರುಕಟ್ಟೆ ಕಾಲಿಟ್ಟಿದ್ದು ಹೇಗೆ? ಅದಕ್ಕೂ ಆರ್ಥಿಕತೆಗೂ ಇರುವ ಸಂಬಂಧವೇನು? ಭಾಗ-2


