Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...