Homeಕರ್ನಾಟಕಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

- Advertisement -
- Advertisement -

ತಮ್ಮ ಹಾಗೂ ಕುಟುಂಬದ ವಿರುದ್ದ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಕುಮಾರಸ್ವಾಮಿ ನನ್ನ ವಿರುದ್ದ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ. ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ, ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಲ್ಲದೆ, ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ನನ್ನ ವಿರುದ್ದ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ಅವರೂ ನನ್ನ ವಿರುದ್ದ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ನನ್ನ ವಿರುದ್ದ ಕ್ರಮ ಕೈಗೊಳ್ಳುವಂತ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಬೆದರಿಕೆ ಒಡ್ಡಿದ್ದಾರೆ” ಎಂದು ಎಡಿಜಿಪಿ ಚಂದ್ರಶೇಖರ್ ದೂರಿದ್ದಾರೆ.

ಚಂದ್ರಶೇಖರ್ ಅವರ ದೂರು ಸ್ವೀಕರಿಸಿರುವ ಸಂಜಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಗಂಗೇನಹಳ್ಳಿ (ಗಂಗಾನಗರ)ಯ 1 ಎಕರೆ 11 ಗುಂಟೆ ಜಾಗವನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27, 2024 ಶುಕ್ರವಾರದಂದು ವಿಚಾರಣೆಗೆ ಒಳಪಡಿಸಿದ್ದರು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ದ ಹರಿಹಾಯ್ದಿದಿದ್ದರು. ಚಂದ್ರಶೇಖರ್ ಅವರು ಕಾಂಗ್ರೆಸ್ ರಕ್ಷಣೆಯಲ್ಲಿ ನನ್ನ ವಿರುದ್ದ ಭ್ರಷ್ಟಾಚಾರದ ಕಟ್ಟುಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಚಂದ್ರಶೇಖರ್ ಅಧಿಕಾರಿಯ ಸೋಗಿನಲ್ಲಿ ಕ್ರಿಮಿನಲ್ ಆಗಿದ್ದು, ಅವರ ವಿರುದ್ಧ ಸರಣಿ ಅಪರಾಧ ಎಸಗಿರುವ ಆರೋಪವಿದೆ ಎಂದು ಹೇಳಿದ್ದರು.

ಕುಮಾರಸ್ವಾಮಿಯ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದ ಎಡಿಜಿಪಿ ಚಂದ್ರಶೇಖರ್, “ಜಾರ್ಜ್ ಬರ್ನಾರ್ಡ್ ಶಾ ಹೇಳಿಕೆಯನ್ನು ಉಲ್ಲೇಖಿಸಿ “ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ. ಇಬ್ಬರೂ ಕೊಳಕಾಗುತ್ತೀರಿ ಮತ್ತು ಹಂದಿ ಕೂಡಾ ಅದನ್ನು ಇಷ್ಟಪಡುತ್ತದೆ” ಎಂದಿದ್ದರು. ನಮ್ಮ ಕರ್ತವ್ಯ ನಿರ್ವಹಣೆಯ ಸಮಯದಲ್ಲಿ ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿಗೆ ಟಾಂಗ್ ಕೊಟಿದ್ದರು.

ಆ ಬಳಿಕ, ಕುಮಾರಸ್ವಾಮಿ ಮತ್ತು ಅವರ ಬಳಗ ಹಾಗೂ ಎಡಿಜಿಪಿ ನಡುವೆ ವಾಕ್ಸಮರ ನಡೆಯುತ್ತಿದೆ. ಅದು ಈಗ ತಾರಕಕ್ಕೇರಿ ದೂರು ಕೊಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ : 2022ರ ಹುಬ್ಬಳ್ಳಿ ಗಲಭೆ ಸೇರಿದಂತೆ ಹಲವು ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...