Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...