Homeಮುಖಪುಟಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ತಮ್ಮ ಪಕ್ಷವನ್ನು ನಗರ ನಕ್ಸಲ್ ಪಕ್ಷ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯನ್ನು ‘ಭಯೋತ್ಪಾದಕ ಪಕ್ಷ’ ಎಂದು ಶನಿವಾರ ಆರೋಪಿಸಿದ್ದಾರೆ. ದೇಶದಾದ್ಯಂತ ದಲಿತ, ಹಿಂದುಳಿದ ವರ್ಗ ಮತ್ತು ಬುಡಕಟ್ಟು ಸಮುದಾಯಗಳ ಮೇಲಿನ ದೌರ್ಜನ್ಯಗಳನ್ನು ಬಿಜೆಪಿ ಬೆಂಬಲಿಸುತ್ತದೆ ಅವರು ಆರೋಪಿಸಿದ್ದಾರೆ. ಬಿಜೆಪಿ ಭಯೋತ್ಪಾದಕ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಲಬುರ್ಗಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ಪ್ರಗತಿಪರ ಚಿಂತಕರನ್ನು “ನಗರ ನಕ್ಸಲರು” ಎಂದು ಕರೆದು ಅವಮಾನಿಸುವ ಅಭ್ಯಾಸವನ್ನು ಹೊಂದಿದ್ದು, “ದೇಶದಾದ್ಯಂತ ದಲಿತರು ಮತ್ತು ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಸಮುದಾಯಗಳ ಮೇಲಿನ ದೌರ್ಜನ್ಯಗಳು ಹೆಚ್ಚಿವೆ. ಬಿಜೆಪಿ ಇಂತಹ ಪ್ರಕರಣಗಳನ್ನು ಬೆಂಬಲಿಸುತ್ತದೆ, ಆದರೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ನೇತೃತ್ವದ ಎನ್‌ಡಿಎ ದೇಶದಲ್ಲಿ ಆಡಳಿತ ನಡೆಸುತ್ತಿರುವುದರಿಂದ ವಿವಿಧ ಅಪರಾಧಗಳಿಗೆ ಇತರ ಪಕ್ಷಗಳನ್ನು ದೂಷಿಸುವ ಬದಲು, ಎಸ್‌ಸಿ, ಎಸ್‌ಟಿ ಮತ್ತು ಬಿಸಿಗಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮೋದಿ ಕ್ರಮಕೈಗೊಳ್ಳಬೇಕು. ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಮೋದಿ ಕ್ರಮ ಕೈಗೊಳ್ಳಲಿ ಎಂದು ಖರ್ಗೆ ಹೇಳಿದ್ದಾರೆ.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಒಗ್ಗಟ್ಟಿನ ಕರೆಗೆ ಪ್ರತಿಕ್ರಿಯಿಸಿದ ಖರ್ಗೆ, “ಭಾಗವತ್ ಹೇಳುವುದು ಒಂದು, ಆದರೆ ಮಾಡುವುದು ಇನ್ನೊಂದು. ಎಲ್ಲಾ ಭಾರತೀಯರನ್ನು ಒಗ್ಗೂಡಿಸಲು ನಿಜವಾಗಿಯೂ ಬಯಸಿದರೆ ಭಾಗವತ್ ಅವರ ಸಂಘಟನೆ ಬಿಜೆಪಿಯನ್ನು ಏಕೆ ಬೆಂಬಲಿಸುತ್ತಿದೆ?” ಎಂದು ಪ್ರಶ್ನಿಸಿದರು. ಬಿಜೆಪಿ ಭಯೋತ್ಪಾದಕ ಪಕ್ಷ

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಇತ್ತೀಚಿನ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಕ್ಸಿಟ್‌ ಪೂಲ್‌ಗಳು ಕಾಂಗ್ರೆಸ್ ಪಕ್ಷವು ಆರಾಮವಾಗಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿತ್ತು. ಹರಿಯಾಣದಲ್ಲಿ ಸೋಲನ್ನು ಒಪ್ಪಿಕೊಳ್ಳಲು ಬಿಜೆಪಿ ನಾಯಕರು ಮತ್ತು ಅವರ ಮೈತ್ರಿಕೂಟದ ಪಾಲುದಾರರೂ ಸಿದ್ಧರಾಗಿದ್ದರು ಎಂದು ಖರ್ಗೆ ಹೇಳಿದ್ದಾರೆ.

“ಅಲ್ಲಿ ಏನು ಪವಾಡ ನಡೆದಿದೆಯೋ ಗೊತ್ತಿಲ್ಲ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷ ಕಾರಣಗಳನ್ನು ವಿಶ್ಲೇಷಿಸುತ್ತಿದೆ. ನಾನು ಹರಿಯಾಣದಾದ್ಯಂತ ಬೂತ್‌ವಾರು ವರದಿ ಕೇಳಿದ್ದೇನೆ. ವರದಿ ಬಂದ ನಂತರವಷ್ಟೇ ನಾನು ಪ್ರತಿಕ್ರಿಯಿಸುತ್ತೇನೆ” ಎಂದು ಖರ್ಗೆ ತಿಳಿಸಿದ್ದಾರೆ.

ಅದಾಗ್ಯೂ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ದಲಿತ ಸಿಎಂ ಬೇಡಿಕೆ ಕುರಿತು ಪ್ರತಿಕ್ರಿಯಿಸಲು ಖರ್ಗೆ ನಿರಾಕರಿಸಿದ್ದಾರೆ.

ವಿಡಿಯೊ ನೋಡಿ: ಬೆಂಗಳೂರಿನ ಕೆಆರ್ ಮಾರ್ಕೆಟ್ ಮೇಲ್ಸೇತುವೆಯಿಂದ ಅಪರಿಚಿತ ವ್ಯಕ್ತಿಯೊಬ್ಬರು ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...